ನವದೆಹಲಿ, ಅ 1: ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಇಂದು 74 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹುಟ್ಟುಹಬ್ಬದ ಅಂಗವಾಗಿ ಅವರಿಗೆ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ದೇಶದ ವಿವಿಧ ಗಣ್ಯರು ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
ಇದರ ಜೊತೆಗೆ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ರಾಜ್ಯಪಾಲರು ವಿವಿಧ ಪಕ್ಷಗಳ ರಾಜಕೀಯ ಮುಖಂಡರು ರಾಮ್ ನಾಥ್ ಕೋವಿಂದ್ ಅವರಿಗೆ ಜನ್ಮದಿನದ ಶುಭ ಹಾರೈಸಿದ್ದಾರೆ. ಅವರು 1945 ರ ಅಕ್ಟೋಬರ್ 1 ರಂದು ಜನಿಸಿದ್ದು 2017 ರ ಜುಲೈ 25 ರಿಂದ ಭಾರತದ 14 ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದಕ್ಕೂ ಮುನ್ನ ಅವರು ಬಿಹಾರದ ರಾಜ್ಯಪಾಲರಾಗಿದ್ದರು. 1994 ರಿಂದ 2006 ರ ವರೆಗೆ ಅವರು ರಾಜ್ಯಸಭಾ ಸದಸ್ಯರಾಗಿದ್ದರು. ರಾಜಕೀಯಕ್ಕೆ ಪ್ರವೇಶಿಸುವ ಮುನ್ನ ಅವರು ವಕೀಲರಾಗಿದ್ದರು.