ಡಿ. 5 ರಂದು ಡಾ. ರಾಮ್ ಪ್ರಸಾತ್ ಮನೋಹರ್‌.ವಿ. ಅವರ ಜಿಲ್ಲಾ ಪ್ರವಾಸ

Ram Prasat Manohar.V. 's district tour

ಧಾರವಾಡ ಡಿಸೆಂಬರ 03: ಬೆಂಗಳೂರು ಜಲಮಂಡಳಿ ಅಧ್ಯಕ್ಷರು ಹಾಗೂ ಧಾರವಾಡ ಜಿಲ್ಲಾ ನೂತನ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ. ರಾಮ್ ಪ್ರಸಾತ್ ಮನೋಹರ್‌.ವಿ. ಅವರು ಡಿಸೆಂಬರ 5 ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.  

ಡಿಸೆಂಬರ 5, 2024 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳೊಂದಿಗೆ ಎಲ್ಲಾ ಇಲಾಖೆ, ನಿಗಮ ಮಂಡಳಿಗಳ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರೀಶೀಲನಾ ಸಭೆಯಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 3 ಗಂಟೆಗೆ ವಿವಿಧ ಕಾಮಗಾರಿಗಳ ಕಾರ್ಯಕ್ರಮಗಳ ಸ್ಥಳೀಯ ಪರೀವೀಕ್ಷಣೆ ಕೈಗೊಳ್ಳುವರು ಎಂದು ಅವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.