ಈದ್ಗಾ ಮೈದಾನದಲ್ಲಿ ಸಡಗರ ಸಂಭ್ರಮದಿಂದ ರಂಜಾನ್ ಹಬ್ಬ ಆಚರಣೆ
ಕಂಪ್ಲಿ 31: ಪಟ್ಟಣದಲ್ಲಿ ಮುಸ್ಲಿಂ ಸಮಾಜ ಭಾಂದವರು ಸೋಮವಾರ ಸಡಗರ ಸಂಭ್ರಮದಿಂದ ರಂಜಾನ್ ಆಚರಿಸಿದರು.ಇಲ್ಲಿನ ಹೊಸ ಬಸ್ ನಿಲ್ದಾಣ ಬಳಿಯ ಮುದ್ದಾಪುರ ಅಗಸಿಯ ಖದೀಮ್ ಈದ್ಗಾ(ಸುನ್ನಿ) ಮೈದಾನದಲ್ಲಿ ಸೇರಿದ ಮುಸ್ಲಿಮರು ಧರ್ಮಗುರು ಸೈಯದ್ ಷಾ ಅಬುಲ್ ಹಸನ್ ಖಾದ್ರಿ ನೇತೃತ್ವದಲ್ಲಿ ಶ್ರದ್ದಾ ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಲಾಯಿತು.
ನಂತರ ಪರಸ್ಪರ ಹಬ್ಬದ ಶುಭಾಶಯ ವಿನಿಮಯಾ ಮಾಡಿಕೊಂಡರು ಮುಸ್ಲಿಂ ಧರ್ಮಗುರು ಸೈಯದ್ ಷಾ ಅಬುಲ್ ಹಸನ್ ಖಾದ್ರಿ ಮಾತನಾಡಿ, ಪ್ರತಿಯೊಬ್ಬರೂ ತ್ಯಾಗ ಬಲಿದಾನದ ಹಬ್ಬವಾದ ರಂಜಾನ್ ಆಚರಣೆ ಮಾಡುತ್ತಿದ್ದಾರೆ. ಉಳ್ಳವರು ಇಲ್ಲದವರಿಗೆ ಅನ್ನ, ಬಟ್ಟೆ ಹಾಗೂ ಹಣವನ್ನು ನೀಡುವ ಮೂಲಕ ಉದಾರತೆ ತೋರಬೇಕು. ರಂಜಾನ್ ಹಬ್ಬದ ಪ್ರಯುಕ್ತ ಒಂದು ತಿಂಗಳು ಕೈಗೊಳ್ಳುವ ಉಪವಾಸದಿಂದ ಪ್ರತಿಯೊಬ್ಬರಿಗೂ ಒಳ್ಳೆಯದಾಗುತ್ತದೆ ಎಂದರು.ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ದಾನ ಧರ್ಮ ಮಾಡಿದರು..ಫೆಲಸ್ತೀನ್ ಮತ್ತು ಗಾಜಾ ಮೇಲಿನ ದಾಳಿಯಲ್ಲಿ ಮೃತಪಟ್ಟ ಜನತೆಗೆ ಶಾಂತಿ, ನೆಮ್ಮದಿ ಸಿಗಲೆಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.