ಬೆಂಗಳೂರು28, ರಾಮನಗರದಲ್ಲಿ
ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಹಾಗೂ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರವನ್ನು
ಆರಂಭಿಸಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಉನ್ನತ
ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ತಿಳಿಸಿದ್ದಾರೆ. ಶನಿವಾರ ಬೆಂಗಳೂರಿನ ಬಿಜೆಪಿ ಕೇಂದ್ರ
ಕಾರ್ಯಾಲಯಕ್ಕೆ ಭೇಟಿ ನೀಡಿ, ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ
ಮಾತನಾಡಿದ ಅವರು, ವೈದ್ಯಕೀಯ ಕಾಲೇಜು ಕನಕಪುರದಲ್ಲಿ ಆರಂಭಿಸುವ ಪ್ರಶ್ನೆಯೇ ಇಲ್ಲ. ವಿಶ್ವವಿದ್ಯಾಲಯ
ಮತ್ತು ಕಾಲೇಜುಗಳಲ್ಲಿ ಹೆಚ್ಚು ಸೌಲಭ್ಯಗಳನ್ನು ಒದಗಿಸುವುದರ ಮೂಲಕ ರಾಮನಗರವನ್ನು ‘ಹೆಲ್ತ್ ಸಿಟಿ’ಯಾಗಿ
ಅಭಿವೃದ್ಧಿ ಪಡಿಸಲಾಗುವುದು. ಆರೋಗ್ಯ ಪ್ರವಾಸೋದ್ಯಮಕ್ಕೆ ಇದರಿಂದ ಉತ್ತೇಜನ ದೊರೆಯಲಿದೆ. ರಾಜ್ಯದ
ಯಾವ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ಇಲ್ಲವೋ ಅಂತಹ ಕಡೆ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸಲಾಗುವುದು
ಎಂದು ಹೇಳಿದರು. ಕನಕಪುರದ ಕಪಾಲಬೆಟ್ಟ ಸಾಧು-ಸಂತರು ಧ್ಯಾನ ಮಾಡಿದ ಪವಿತ್ರ ಸ್ಥಳವಾಗಿದೆ. ಇಂತಹ ಸ್ಥಳದಲ್ಲಿ
ಬೇರೊಂದು ಧರ್ಮಕ್ಕೆ ಸೇರಿದವರ ಪ್ರತಿಮೆಯನ್ನು ಸ್ಥಾಪಿಸುವುದು ಸರಿಯಲ್ಲ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.
ಪ್ರತಿಮೆ ಸ್ಥಾಪಿಸಲು ಉದ್ದೇಶಿಸಿರುವ ಜಾಗ ಗೋಮಾಳಕ್ಕೆ ಸೇರಿದ್ದು ಎನ್ನಲಾಗಿದ್ದು, ಈ ಕುರಿತಂತೆ ವರದಿ
ಬಂದ ನಂತರ ಜಾಗವನ್ನು ವಶಕ್ಕೆ ಪಡೆಯುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಅಶ್ವಥ್ ನಾರಾಯಣ್ ಹೇಳಿದರು.
ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಬಿಜೆಪಿಯನ್ನು ದೇಶದಲ್ಲಿ ಮುಕ್ತ ಮಾಡುವುದಾಗಿ ಹೇಳಿದ್ದಾರೆ. ಬೇರೆಯವರನ್ನು
ಮುಕ್ತ ಮಾಡಲು ಹೊರಟಿರುವ ಅವರೇ ಮುಕ್ತಾಯವಾಗಿದ್ದಾರೆ. ಅಸ್ತಿತ್ವ ಕಳೆದುಕೊಳ್ಳುತ್ತಿರುವ ಕಾಂಗ್ರೆಸ್
ಪಕ್ಷ, ಎಂತಹ ಪರಿಸ್ಥಿತಿಯಲ್ಲಿ ಯಾರನ್ನು ಬೇಕಾದರೂ ಸೇರುತ್ತದೆ. ಕಾಂಗ್ರೆಸ್ ಪಕ್ಷದ್ದು ಅವಕಾಶವಾದದ
ರಾಜಕಾರಣವಾಗಿದೆ. ಅದಕ್ಕೆ ಯಾವುದೇ ಸಿದ್ಧಾಂತ, ಚಿಂತನೆ, ದೂರದೃಷ್ಟಿ ಯಾವುದೂ ಇಲ್ಲ. ಭಾರತಕ್ಕೆ ತನ್ನದೇ
ಸಂಸ್ಕøತಿ, ಆಚಾರ-ವಿಚಾರವಿದೆ. ಕಾಂಗ್ರೆಸ್ ನಾಯಕರು ದೇಶದ ಸಂಸ್ಕøತಿ ವಿರುದ್ಧ ಮತ್ತು ದೇಶದ ವಿರುದ್ಧ
ಮಾತನಾಡುವುದನ್ನು ನಿಲ್ಲಿಸಬೇಕು. ನೆರೆಯ ದೇಶಗಳಲ್ಲಿ ಹಿಂಸೆ, ದೌರ್ಜನ್ಯ ಎದುರಿಸಿ ಭಾರತಕ್ಕೆ ಬಂದಿರುವ
ಅಲ್ಲಿನ ಅಲ್ಪಸಂಖ್ಯಾತರಿಗೆ ಪೌರತ್ವ ನೀಡಲು ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರಲಾಗಿದೆ. ಆದರೆ
ಅದಕ್ಕೂ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿದೆ. ಇದು ಖಂಡನೀಯ ಎಂದು ಅವರು ಹೇಳಿದರು.