ಬಿ.ಸಿ. ನಾಗೇಶ್ ನಿಧನಕ್ಕೆ ರಂಭಾಪುರಿ ಜಗದ್ಗುರುಗಳ ಸಂತಾಪ
Rambhapuri Jagadguru condoles the demise of B.C. Nagesh.
ಲೋಕದರ್ಶನ ವರದಿ
ತಿಪಟೂರು, ಆ.19: ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ನಿಧನಕ್ಕೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಪೀಠದ ಜಗದ್ಗುರುಗಳು ಸಂತಾಪ ವ್ಯಕ್ತಪಡಿಸಿದ್ದಾರೆ. ಸರಳತೆ ಹಾಗೂ ಸೌಜನ್ಯತೆಯಿಂದ ನಡೆದುಕೊಂಡಿದ್ದ ಬಿ.ಸಿ. ನಾಗೇಶ್ ಅವರು ಹಂತ ಹಂತವಾಗಿ ಬೆಳೆದು ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಹಲವು ಸುಧಾರಣೆಗಳನ್ನು ತಂದಿದ್ದರು. ಶ್ರೀ ಜಗದ್ಗುರು ರಂಭಾಪುರಿ ಪೀಠದೊಂದಿಗೆ ಅವರು ನಿಕಟ ಸಂಪರ್ಕ ಹೊಂದಿದ್ದರು. ಅವರ ಅಗಲಿಕೆಯಿಂದ ನೋವುಂಟಾಗಿದೆ ಎಂದು ಜಗದ್ಗುರುಗಳು ತಿಳಿಸಿದ್ದಾರೆ. ದಯಾಘನನಾದ ಪರಮಾತ್ಮನು ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಕುಟುಂಬದವರು ಮತ್ತು ಅಭಿಮಾನಿ ಬಳಗಕ್ಕೆ ಕರುಣಿಸಲಿ ಎಂದು ಶ್ರೀ ರಂಭಾಪುರಿ ಜಗದ್ಗುರುಗಳು ತಮ್ಮ ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 