ರಾಷ್ಟ್ರೀಯ ಮಟ್ಟದ ಕಾಯಕ ರತ್ನ ಪ್ರಶಸ್ತಿಗೆ ರಮೇಶ್ ಭಾಜನ
Ramesh selected for the national-level Kayaka Ratna Award
ಶಿಗ್ಗಾಂವಿ, ಆ.13: ತಾಲ್ಲೂಕು ರಾಜ್ಯ ಸರ್ಕಾರಿ ನೌಕರರ ಸಂಘದ ಖಜಾಂಚಿಗಳು, ಶಿಗ್ಗಾಂವಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹೋತನಹಳ್ಳಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯದ ನಿಲಯ ಪಾಲಕರಾದ ರಮೇಶ್ ಹರಿಜನ ಅವರು ಶಿಕ್ಷಣ, ಸಂಘಟನೆ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆಯನ್ನು ಗುರುತಿಸಿ ಬೆಳಕು ಸಂಸ್ಥೆ, ರಾಯಚೂರು ವತಿಯಿಂದ ರಾಷ್ಟ್ರೀಯ ಮಟ್ಟದ ‘ಕಾಯಕ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ರಮೇಶ್ ಅವರ ಸಾಧನೆಗೆ ತಾಲ್ಲೂಕಿನ ಸರ್ಕಾರಿ ನೌಕರರ ಬಳಗ, ನೌಕರರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 