ಬೆಳಗಾವಿ, 20: ಮುಂಬರುವ ಲೋಕಸಭಾ ಚುನಾವಣೆಯನ್ನು ನಿಷ್ಪಕ್ಷಪಾತ ಮತ್ತು ಪಾರದರ್ಶಕವಾಗಿ ನಡೆಸುವ ಉದ್ದೇಶದಿಂದ ಮಾನ್ಯತೆ ಪಡೆದ ನೋಂದಾಯಿತ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಕಂಪ್ಯೂಟರೀಕೃತ ರ್ಯಾಂಡಮೈಜೇಷನ್ ಮೂಲಕ ಎಲೆಕ್ಟ್ರಾನಿಕ್ ಮತಯಂತ್ರಗಳು ಮತ್ತು ವಿವಿಪ್ಯಾಟ್ ಯಂತ್ರಗಳನ್ನು ಬುಧವಾರ (ಮಾ.20) ಹಂಚಿಕೆ ಮಾಡಲಾಯಿತು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ರ್ಯಾಂಡಮೈಜೇಷನ್ ಪ್ರಕ್ರಿಯೆಯಲ್ಲಿ ಜಿಲ್ಲೆಯ ಒಟ್ಟು 18 ವಿಧಾನಸಭಾ ಕ್ಷೇತ್ರಗಳವಾರು ಒಟ್ಟು 5099 ಬ್ಯಾಲೆಟ್ ಯೂನಿಟ್ ಗಳು; 5099 ಕಂಟ್ರೋಲ್ ಯೂನಿಟ್ ಗಳು ಮತ್ತು 5321 ವಿವಿಪ್ಯಾಟ್ ಯಂತ್ರಗಳನ್ನು ಹಂಚಿಕೆ ಮಾಡಲಾಯಿತು.
ಲೋಕಸಭಾ ಚುನಾವಣೆಗಾಗಿ ಜಿಲ್ಲೆಯಲ್ಲಿ ಒಟ್ಟು 4434 ಮತಗಟ್ಟೆಗಳನ್ನು ಸ್ಥಾಪಿಸಲಾಗಿರುತ್ತದೆ.
ಈ ಮತಗಟ್ಟೆಗಳ ಸಂಖ್ಯೆಯ ಜತೆಗೆ 665 (ಶೇ.15) ರಷ್ಟು ಅಧಿಕ ಬ್ಯಾಲೆಟ್ ಯೂನಿಟ್ ಮತ್ತು 665 (ಶೇ.15) ರಷ್ಟು ಅಧಿಕ ಕಂಟ್ರೋಲ್ ಯೂನಿಟ್ ಗಳನ್ನು ಹೆಚ್ಚುವರಿಯಾಗಿ (ರಿಸವರ್್) ಹಂಚಿಕೆ ಮಾಡಲಾಯಿತು.
ಇದೇ ರೀತಿ 4434 ಮತಗಟ್ಟೆಗಳಿಗೆ 887 (ಶೇ.20) ಹೆಚ್ಚುವರಿ ಸೇರಿದಂತೆ ಒಟ್ಟಾರೆ 5321 ವಿವಿಪ್ಯಾಟ್ ಗಳನ್ನು ಹಂಚಿಕೆ ಮಾಡಲಾಯಿತು.
ಮತಯಂತ್ರ ಹಂಚಿಕೆ; ಪಾರದರ್ಶಕ:
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಚುನಾವಣಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಅವರು, ಮತಯಂತ್ರಗಳ ಹಂಚಿಕೆಯು ಸಂಪೂರ್ಣ ಕಂಪ್ಯೂಟರೀಕೃತವಾಗಿದ್ದು, ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಅತ್ಯಂತ ಪಾರದರ್ಶಕತೆಯಿಂದ ಹಂಚಿಕೆ ಮಾಡಲಾಗುತ್ತದೆ ಎಂದು ತಿಳಿಸಿದರು.
ರ್ಯಾಂಡಮೈಜೇಷನ್ ಮೂಲಕ ಮತಯಂತ್ರ ಮತ್ತು ವಿವಿಪ್ಯಾಟ್ ಗಳನ್ನು ಹಂಚಿಕೆ ಮಾಡಿದ ಬಳಿಕ ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳ ಪೈಕಿ ಯಾವ ಯಾವ ಮತಯಂತ್ರಗಳು ಯಾವ ಯಾವ ವಿಧಾನಸಭಾ ಕ್ಷೇತ್ರಗಳಿಗೆ ಹಂಚಿಕೆ ಮಾಡಲಾಗಿದೆ ಎಂಬ ಮಾಹಿತಿಯನ್ನು ಮಾನ್ಯತೆ ಪಡೆದ ನೋಂದಾಯಿತ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಇದೇ ಸಂದರ್ಭದಲ್ಲಿ ಒದಗಿಸಲಾಯಿತು.
ಜಿಲ್ಲೆಗೆ ಬಂದಿರುವ ಇವಿಎಂ ಹಾಗೂ ವಿವಿಪ್ಯಾಟ್ ಗಳನ್ನು ರ್ಯಾಂಡಮೈಜೇಷನ್ ಮೂಲಕ ಹಂಚಿಕೆ ಮಾಡಿದ ಬಳಿಕ ಉಳಿದ 1077 ಬ್ಯಾಲೆಟ್ ಯೂನಿಟ್, 24 ಕಂಟ್ರೋಲ್ ಯೂನಿಟ್ ಹಾಗೂ 10 ವಿವಿಪ್ಯಾಟ್ ಗಳು ಜಿಲ್ಲಾ ಚುನಾವಣಾಧಿಕಾರಿಗಳ ನಿಯಂತ್ರಣದಲ್ಲಿರುವ ಗೋದಾಮಿನಲ್ಲಿ ಭದ್ರವಾಗಿ ಇಡಲಾಗಿದೆ ಎಂದು ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದರು.
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಜಿಪಂ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ರ್ಯಾಂಡಮೈಜೇಷನ್ ಪ್ರಕ್ರಿಯೆಯ ಕುರಿತು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ವಿವರಿಸಿದರು.
ಅಪರ ಜಿಲ್ಲಾಧಿಕಾರಿ ಡಾ.ಬೂದೆಪ್ಪ ಹೆಚ್.ಬಿ., ವಿವಿಧ ನೋಂದಾಯಿತ ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಸಹಾಯಕ ಚುನಾವಣಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ರ್ಯಾಂಡಮೈಜೇಷನ್ ಮೂಲಕ ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳ ಪೈಕಿ ಯಾವ ಯಾವ ಮತಯಂತ್ರಗಳು ಯಾವ ಯಾವ ವಿಧಾನಸಭಾ ಕ್ಷೇತ್ರಗಳಿಗೆ ಹಂಚಿಕೆ ಮಾಡಲಾಗಿದೆ ಎಂಬ ಮಾಹಿತಿಯನ್ನು ಮಾನ್ಯತೆ ಪಡೆದ ನೋಂದಾಯಿತ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಇದೇ ಸಂದರ್ಭದಲ್ಲಿ ನೀಡಲಾಯಿತು.