ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಸೂಕ್ತ ತನಿಖೆಯಾಗಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Ranya Rao's gold smuggling case should be properly investigated: Minister Lakshmi Hebbalkar
ಬೆಂಗಳೂರು 12: ಚಿತ್ರನಟಿ ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಸೂಕ್ತ ತನಿಖೆಯಾಗಲಿ. ಆ ಬಳಿಕವಷ್ಟೇ ಪ್ರಕರಣದ ಸತ್ಯಾಸತ್ಯತೆ ತಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಪ್ರಭಾವಿ ಸಚಿವರೊಬ್ಬರ ಕೈವಾಡವಿದೆ ಎಂಬ ಆರೋಪದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಪ್ರಕರಣ ಸೂಕ್ತ ತನಿಖೆಯಾಗಲಿ, ಆಗ ಗೊತ್ತಾಗಲಿದೆ ಎಂದರು. ಗ್ಯಾರಂಟಿ ಸಮಿತಿಗಳ ವಿರುದ್ಧದ ಬಿಜೆಪಿ ಪ್ರತಿಭಟನೆ ಕುರಿತ ಪ್ರಶ್ನೆಗೆ,2023ರಲ್ಲಿ ಸರ್ಕಾರ ರಚನೆಯಾದ ಬಳಿಕ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಬಳಿಕ ಸೂಕ್ತ ರೀತಿಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ದೃಷ್ಟಿಯಿಂದ ಗ್ಯಾರಂಟಿ ಸಮಿತಿಗಳನ್ನು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ರಚಿಸಲಾಯಿತು. ಈಗ ಸಮಿತಿಗಳನ್ನು ರದ್ದುಗೊಳಿಸುವಂತೆ ಪ್ರತಿಪಕ್ಷಗಳು ನಡೆಸುತ್ತಿರುವ ಹೋರಾಟಕ್ಕೆ ಅರ್ಥವಿಲ್ಲ ಎಂದು ಹೇಳಿದರು.ನಮ್ಮ ಯೋಜನೆಗಳನ್ನೇ ಬಿಜೆಪಿ ಇತರ ರಾಜ್ಯಗಳಲ್ಲಿ ಜಾರಿಗೆ ತಂದಿದೆ. ಮಹಾರಾಷ್ಟ್ರ ಸರ್ಕಾರ ನಮ್ಮದೇ ಗೃಹಲಕ್ಷ್ಮೀ ಯೋಜನೆಯನ್ನು ಲಾಡ್ಲಿ ಬೆಹೆನಾ ಹೆಸರಿನಲ್ಲಿ ಚುನಾವಣೆಗೂ ಮುನ್ನ ಎರಡು ತಿಂಗಳು ಹಣ ನೀಡಿತ್ತು. ಆದರೆ, ಚುನಾವಣೆಯಲ್ಲಿ ಗೆದ್ದ ಬಳಿಕ ಈ ಯೋಜನೆಯನ್ನೇ ಬಂದ್ ಮಾಡಲಾಗಿದೆ.
ಇದು ಬಿಜೆಪಿ ಸರ್ಕಾರಗಳ ಸ್ಥಿತಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವ್ಯಂಗ್ಯವಾಡಿದರು.ಮಹಾರಾಷ್ಟ್ರ ಸರ್ಕಾರದ ಸಚಿವರಿಗೆ ಆರ್‌ಎಸ್‌ಎಸ್ ಕಾರ್ಯಕರ್ತರು ಸಹಾಯಕರಾಗಿದ್ದಾರೆ. ಅವರಿಗೆ ಅಲ್ಲಿನ ಸರ್ಕಾರ ಸಂಬಳ ನೀಡುತ್ತಿದೆ. ಅವರಲ್ಲೇ ತಪ್ಪು ಇಟ್ಟುಕೊಂಡು ನಮ್ಮ ಕಡೆ ಬೆಟ್ಟು ಮಾಡಿ ತೋರಿಸುತ್ತಿದ್ದಾರೆ ಎಂದು ಸಚಿವರು ದೂರಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 