ಬೆಂಗಳೂರು, ಡಿಸೆಂಬರ್ 26, ವರ್ಷದ ಕೊನೆಯಲ್ಲಿ, ಅದೂ 9 ವರ್ಷಗಳ
ಬಳಿಕ, ಸಂಭವಿಸುತ್ತಿರುವ ಅಪರೂಪದ, ಭಾನಂಗಣದ ಚಮತ್ಕಾರದ ನೆರಳು, ಬೆಳಕಿನ ಕಂಕಣ ಸೂರ್ಯಗ್ರಹಣವನ್ನು ನಾಡಿನ ಜನರು ಕಣ್ತುಂಬಿಕೊಳ್ಳುತ್ತಿದ್ದಾರೆ.
ಬೆಳಗ್ಗೆ 8.04ರಿಂದ ಸೂರ್ಯಗ್ರಹಣ ಆರಂಭವಾಗಿದೆ. ರಾಜ್ಯದೆಲ್ಲೆಡೆ ಕಂಕಣ ಸೂರ್ಯಗ್ರಹಣ ಗೋಚರವಾಗಿದ್ದರೂ ಕೆಲವು ಕಡೆ ಮೋಡ
ಮುಸುಕಿದ ವಾತಾವರಣದ ಕಾರಣ ಸೂರ್ಯಗ್ರಹಣ ಅಸ್ಪಷ್ಟವಾಗಿ
ಗೋಚರವಾಗಿದೆ. ಬೆಂಗಳೂರಿನಲ್ಲಿ ಕಂಕಣ ಸೂರ್ಯ ಗ್ರಹಣ ಗೋಚರವಾಗಿದೆ. ಲಾಲ್ ಬಾಗಿನಲ್ಲಿ ವಾದ್ಯ ಬಾರಿಸುವ ಮೂಲಕ ಸೂರ್ಯಗ್ರಹಣ ವೀಕ್ಷಣೆಗೆ ಚಾಲನೆ
ನೀಡಲಾಯಿತು ಜನರು ಖುಷಿಯಿಂದ ಗ್ರಹಣವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಸೋಲಾರ್ ಫಿಲ್ಟರ್ ಗ್ಲಾಸ್
ಮೂಲಕ ಗ್ರಹಣ ವೀಕ್ಷಣೆ ಮಾಡುತ್ತಿದ್ದಾರೆ. ಕರ್ನಾಟಕ ಜ್ಞಾನವಿಜ್ಞಾನ ಸಮಿತಿ ಹಾಗೂ ನಡಿಗೆದಾರರ ಒಕ್ಕೂಟದಿಂದ
ಸೂರ್ಯಗ್ರಹಣ ವೀಕ್ಷಣೆ ಆಯೋಜಿಸಲಾಗಿದೆ . ಸೂರ್ಯಗ್ರಹಣದ ಕೌತುಕ ಕಣ್ತುಂಬಿಕೊಳ್ಳುವ ಕಾತರವೂ ಜನರಲ್ಲಿ
ಹೆಚ್ಚಾಗಿದೆ. ನೆಹರೂ ತಾರಾಲಯದಲ್ಲಿ ಕಂಕಣ ಗ್ರಹಣ ವೀಕ್ಷಣೆ ಮಾಡಲು ಜನರು ಆಗಮಿಸಿ . ಸೌರ
ಕನ್ನಡಿ ಮೂಲಕ ಗ್ರಹಣ ವೀಕ್ಷಣೆ ಮಾಡುತ್ತಿದ್ದಾರೆ. ಆದರೆ ಮೋಡ ಕವಿದ ವಾತಾವರಣ ಹಿನ್ನೆಲೆ ಕಂಕಣ ಸೂರ್ಯ
ಗ್ರಹಣ ಅಷ್ಟಾಗಿ, ಸ್ಪಷ್ಟವಾಗಿ ಕೆಲವು ಕಡೆ ಗೋಚರವಾಗಿಲ್ಲ
. ಇನ್ನು ರಾಜ್ಯದ ಹಲವು ಜಿಲ್ಲೆಗಳಲ್ಲಿ ಗ್ರಹಣ ಗೋಚರವಾಗಿದೆ. 8 ಗಂಟೆ 4 ನಿಮಿಷಕ್ಕೆ ಗ್ರಹಣ ಆರಂಭವಾಗಿದ್ದು 11 ಗಂಟೆ 3 ನಿಮಿಷಕ್ಕೆ ಗ್ರಹಣ ಅಂತ್ಯವಾಗಲಿದೆ. ಸುಮಾರು
2 ಗಂಟೆ 59 ನಿಮಿಷಗಳ ಕಾಲ ಗ್ರಹಣ ಸಂಭವಿಸಿದೆ 'ಬೆಂಕಿ
ಉಂಗುರ'ದಂತೆ ಸೂರ್ಯ ಗೋಚರವಾಗಿದ್ದಾನೆ