ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪಥಸಂಚಲನ
Rashtriya Swayamsevak Sangh procession
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪಥಸಂಚಲನ
ರಾಯಬಾಗ 11: ರಾಷ್ಟ್ರೀಯ ಸ್ವಯಂ ಸೇವಕ ಸಂಘವು ದೇಶದ ಪ್ರತಿಯೊಬ್ಬ ಭಾರತೀಯನಲ್ಲಿ ರಾಷ್ಟ್ರಾಭಿಮಾನ ಬೆಳಸುವ ಸಂಘಟನೆಯೆಂದು ಎಂದು ಚಿಕ್ಕೋಡಿ ಜಿಲ್ಲಾ ಆರ್.ಎಸ್.ಎಸ್ ಸಂಚಾಲಕ ಸಂಜಯ ಅಡಿಕೆ ಹೇಳಿದರು.
ಶನಿವಾರ ಸಾಯಂಕಾಲ ಪಟ್ಟಣದ ಮಹಾವೀರ ಆಂಗ್ಲ ಮಾಧ್ಯಮ ಶಾಲೆ ಆವರಣದಲ್ಲಿ ಆರ್.ಎಸ್.ಎಸ್. ದಿಂದ ಹಮ್ಮಿಕೊಂಡಿದ್ದ ವಿಜಯ ದಶಮಿ ಉತ್ಸವ ಹಾಗೂ ಆರ್.ಎಸ್.ಎಸ್ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಆರ್.ಎಸ್.ಎಸ್ ರಾಷ್ಟ್ರದ ನಾಗರಿಕರಲ್ಲಿ ರಾಷ್ಟ್ರೀಯ ಮನೋಭಾವ ಬೆಳೆಸುವ ಮತ್ತು ಶಿಸ್ತಿನ ಸಂಘವಾಗಿದೆ ಎಂದರು. ಪಟ್ಟಣದ ಪ್ರಮುಖ ರಸ್ತೆ ಮತ್ತು ಬೀದಿಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಗಣಧಾರಿಗಳ ಶಿಸ್ತಿನ ಪಥ ಸಂಚಲನ ನಡೆಯಿತು.
ಪಥ ಸಂಚಲನದಲ್ಲಿ ಶಾಸಕ ಡಿ.ಎಮ್.ಐಹೊಳೆ, ವಿಧಾನ ಪರಿಷತ್ತ ಮಾಜಿ ಸದಸ್ಯ ವಿವೇಕರಾವ ಪಾಟೀಲ, ಮಾಜಿ ಶಾಸಕ ಪಿ.ರಾಜೀವ, ಭರತೇಶ ಬನವಣೆ, ಸದಾಶಿವ ದೇಶಿಂಗೆ, ವೆಂಕಟೇಶ ದೇಶಪಾಂಡೆ, ಅಣ್ಣಾಸಾಹೇಬ ಕುಲಗುಡೆ, ಸದಾನಂದ ಹಳಿಂಗಳಿ, ಪ್ರಭಾಕರ ಪುರಾಣಿಕ, ಅಶೋಕ ಅಂಗಡಿ, ಪೃಥ್ವಿರಾಜ ಜಾಧವ, ಸತ್ಯಕುಮಾರ ಬಿರಾಜ ಸೇರಿ ಅನೇಕರು ಪಾಲ್ಗೊಂಡಿದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 