ಬೆಂಗಳೂರು,ಫೆ.24, ಭೂಗತ ಪಾತಕಿ ರವಿ ಪೂಜಾರಿ ಕೊನೆಗೂ ರಾಜ್ಯ ಪೊಲೀಸರು ಕೊನೆಗೂ ಕಸ್ಟಡಿಗೆ ಪಡೆದಿದ್ದು ಸುಮಾರು 26 ವರ್ಷಗಳ ಬಳಿಕ ಪಾತಕಿ ರಾಜ್ಯ ಪೊಲೀಸರ ಬಲೆಗೆ ಬಿದ್ದಿದ್ದಾನೆ.ದಕ್ಷಿಣ ಆಫ್ರಿಕಾದ ಸೆನೆಗಲ್ ನಲ್ಲಿ ಬಂಧಿತನಾಗಿದ್ದ ಭೂಗತ ಪಾತಕಿ ರವಿ ಪೂಜಾರಿಯನ್ನು ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳ ತಂಡ ಸೋಮವಾರ ನಸುಕಿನಲ್ಲಿ ನಗರಕ್ಕೆ ಕರೆದುಕೊಂಡು ಬಂದಿದೆ.ರಾಜ್ಯದಲ್ಲಿ 60ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಿದ್ದ ರವಿಪೂಜಾರಿ 1990ರಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ಪ್ರಕರಣಗಳು ಪೂಜಾರಿ ವಿರುದ್ದ ದಾಖಲಾಗಿತ್ತು. ಮಂಗಳೂರು ನಗರ, ಮುಲ್ಕಿ, ಮೂಡುಬಿದಿರೆ, ಬರ್ಕೆ, ಕೋಣಾಜೆ, ಊರ್ವ, ಕಾವೂರು ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ 33ಕ್ಕೂ ಹೆಚ್ಚು ಪ್ರಕರಣಗಳಿವೆ.ರವಿ ಪೂಜಾರಿಯನ್ನು ಭಾರತಕ್ಕೆ ಕರೆತರಲು ಸುಮಾರು ಒಂದು ವರ್ಷದಿಂದ ರಾಜ್ಯ ಪೊಲೀಸ್ ಇಲಾಖೆ ಹಾಗೂ ಕೇಂದ್ರದ ತನಿಖಾ ಸಂಸ್ಥೆಗಳು ನಿರಂತರ ಪ್ರಯತ್ನ ಮಾಡಿತ್ತು.1992ರಿಂದ ಭೂಗತನಾಗಿದ್ದ ರವಿ ಪೂಜಾರಿಯ ನೆರಳನ್ನು ಬೆನ್ನತ್ತಿದ್ದ ಹಾಲಿ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಮರ್ ಕುಮಾರ್ ಪಾಂಡೆ ಮತ್ತು ಸಿಸಿಬಿ ಎಸಿಪಿ ವೆಂಕಟೇಶ್ ಪ್ರಸನ್ನ ಅವರ ಒಂದು ವರ್ಷದ ಶ್ರಮ ಕೊನೆಗೆ ಫಲ ನೀಡಿದೆ.26 ವರ್ಷಗಳ ಬಳಿಕ ಪೊಲೀಸ್ ಬಲೆಗೆ ಬಿದ್ದಿರುವ ರವಿ ಪೂಜಾರಿಯನ್ನು ಸೋಮವಾರ ಬೆಳಗಿನ ಜಾವ ಬೆಂಗಳೂರಿಗೆ ಕರೆ ತರಲಾಗಿದೆ. ಸಿಸಿಬಿ ಇನ್ಸ್ಪೆಕ್ಟರ್ ಮಹೇಶ್ ಬೋಳೆತ್ತಿನ್ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಮರ್ಕುಮಾರ್ ಪಾಂಡೆ ಬೆಂಗಳೂರಿನಿಂದ ತೆರಳಿ ಪೂಜಾರಿಯನ್ನು ಬೆಂಗಳೂರಿಗೆ ಕರೆತಂದಿದ್ದಾರೆರವಿ ಪೂಜಾರಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಭಾರತೀಯ ಪೊಲೀಸರ ವಶದಲ್ಲೇ ಇರುವ ಪೂಜಾರಿಯನ್ನು ಭಾನುವಾರ ತಡರಾತ್ರಿ ದಿಲ್ಲಿಗೆ ಕರೆತಂದು ದಿಲ್ಲಿಯಿಂದಲೇ ಬೆಂಗಳೂರಿಗೆ ಕರೆತರಲು ಯೋಜನೆ ರೂಪಿಸಲಾಗಿತ್ತು.ಮೈತ್ರಿ ಸರಕಾರದ ಅವಧಿಯಲ್ಲಿ ರಾಜ್ಯ ಗುಪ್ತಚರ ಇಲಾಖೆ ಎಡಿಜಿಪಿ ಆಗಿದ್ದ ಅಮರ್ಕುಮಾರ್ ಪಾಂಡೆ, ಎಸಿಪಿ ಪ್ರಸನ್ನ ಕೊಟ್ಟ ಮಾಹಿತಿ ಆಧರಿಸಿ 2019ರ ಜನವರಿ 31ರಂದು ಸೆನೆಗಲ್ ರಾಜಧಾನಿ ಡಕಾರ್ನಲ್ಲಿ ರವಿ ಪೂಜಾರಿಯ ಬಂಧನವಾಗಿತ್ತಾದರೂ ಆತನನ್ನು ಭಾರತಕ್ಕೆ ಕರೆತರುವ ಪ್ರಯತ್ನಕ್ಕೆ ಹಿನ್ನಡೆಯಾಗಿತ್ತು.