ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ರವಿಚಂದ್ರನ್ ಅಶ್ವಿನ್
Ravichandran Ashwin has announced his retirement from international cricket
ನವದೆಹಲಿ 18: ಭಾರತ ಕ್ರಿಕೆಟ್ ತಂಡದ ಆಟಗಾರ ರವಿಚಂದ್ರನ್ ಅಶ್ವಿನ್ ಎಲ್ಲ ಮಾದರಿಯ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.
ನವೆಂಬರ್ 6, 2011 ರಂದು ದೆಹಲಿಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಪಂದ್ಯದ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ್ದ ಆರ್ ಅಶ್ವಿನ್ ಅವರು 106 ಪಂದ್ಯಗಳಲ್ಲಿ 537 ವಿಕೆಟ್ ಗಳನ್ನು ಪಡೆದಿದ್ದಾರೆ.
ಆರ್ ಅಶ್ವಿನ್ ಅವರು ಭಾರತದ ಅತ್ಯಂತ ಯಶಸ್ವಿ ಬೌಲರ್ ಆಗಿ 619 ವಿಕೆಟ್‌ಗಳನ್ನು ಪಡೆದ ಅನಿಲ್ ಕುಂಬ್ಳೆ ನಂತರ ಎರಡನೇ ಸ್ಥಾನದಲ್ಲಿದ್ದಾರೆ.
ಹಾಗೆಯೇ 116 ಏಕದಿನ ಪಂದ್ಯಗಳಲ್ಲಿ 114 ಇನಿಂಗ್ಸ್ ಆಡಿರುವ ಅಶ್ವಿನ್ 6303 ಎಸೆತಗಳಲ್ಲಿ 156 ವಿಕೆಟ್ ಪಡೆದಿದ್ದಾರೆ. ಇನ್ನು 65 ಟಿ20 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿರುವ ಅಶ್ವಿನ್ 72 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಮೂರು ಸ್ವರೂಪಗಳಲ್ಲೂ 50 ಕ್ಕಿಂತ ಹೆಚ್ಚು ವಿಕೆಟ್ ಕಬಳಿಸಿದ ಟೀಮ್ ಇಂಡಿಯಾ ಬೌಲರ್ ಎನಿಸಿಕೊಂಡಿದ್ದಾರೆ.
ಸದ್ಯ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗಾಗಿ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಅಶ್ವಿನ್ ಸರಣಿ ಮುಕ್ತಾಯಕ್ಕೂ ಮುನ್ನವೆ ನಿವೃತ್ತಿಯ ನಿರ್ಧಾರ ಘೋಷಿಸಿದ್ದಾರೆ.
ಸಾರ್ವಕಾಲಿಕ ಶ್ರೇಷ್ಠ ಭಾರತೀಯ ಕ್ರಿಕೆಟಿಗರಲ್ಲಿ ಒಬ್ಬರಾಗಿರುವ ಅಶ್ವಿನ್ 2016 ರಲ್ಲಿ ಐಸಿಸಿ ವರ್ಷದ ಪುರುಷರ ಕ್ರಿಕೆಟಿಗ ಮತ್ತು ವರ್ಷದ ಐಸಿಸಿ ಪುರುಷರ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿಗಳಿಗೆ ಭಾಜನರಾಗಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 