ಪ್ರಧಾನ ಕಾರ್ಯದರ್ಶಿಯಾಗಿ ರವಿಚಂದ್ರನ್ ಕಾಳೆ ಗುಡ್ಲಾನೂರ ನೇಮಕ
Ravichandran Kale Gudlanura appointed as General Secretary
ಕೊಪ್ಪಳ 19 : ಬ್ಲಾಕ್ ಕಾಂಗ್ರೆಸ್ ಎಸ್.ಸಿ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ರವಿಚಂದ್ರ ಕಾಳೆ ಗುಡ್ಲಾನೂರ ಅವರನ್ನು ನೇಮಕ ಮಾಡಿ ಆದೇಶ ಪತ್ರ ನೀಡಲಾಯಿತು.
ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿ (ಪ.ಜಾತಿ) ವಿಭಾಗದ ರಾಜ್ಯಾಧ್ಯಕ್ಷ ಆರ್. ಧರ್ಮಸೇನ್ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ, ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ , ಜಿಲ್ಲಾ ಕಾಂಗ್ರೆಸ್ ಪಕ್ಷದ ಪ.ಜಾತಿ ವಿಭಾಗದ ಜಿಲ್ಲಾಧ್ಯಕ್ಷ ಗಾಳೆಪ್ಪ ಹೆಚ್ ಪೂಜಾರ್ ರವರ ಆದೇಶದ ಮೇರೆಗೆ ರವಿಚಂದ್ರ ಎಸ್ ಕಾಳೆ ಗೂಡ್ಲಾನೂರು ಅವರನ್ನು ಎಸ್ ಸಿ ಘಟಕದ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಆದೇಶ ಪತ್ರ ನೀಡಲಾಯಿತು.ತಾವುಗಳು ತಕ್ಷಣವೇ ಎಲ್ಲಾ ಕಾಂಗ್ರೆಸ್ ಪಕ್ಷದ ಯುವ ಕಾರ್ಯಕರ್ತರು, ಪಕ್ಷದ ಮುಖಂಡರ ಸಲಹೆ ಸೂಚನೆ ಮೇರೆಗೆ ಪಕ್ಷದ ಸಂಘಟನೆಯನ್ನು ಕೈಗೊಳ್ಳುವಂತೆ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗೂಳಪ್ಪ ಹಲಗೇರಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಯಲ್ಲಪ್ಪ ಹಳೇಮನಿ, ನಿಂಗಪ್ಪ ಮೈನಹಳ್ಳಿ , ಜುಂಜಪ್ಪ ಮಳ್ಳಿಕೇರಿ, ಗಾಳೆಪ್ಪ ಹಿಟ್ನಾಳ,ಭೀಮಣ್ಣ ಹಿರೇಮನಿ, ಹನುಮಂತಪ್ಪ ಮೇಗಳಮನಿ, ಹುಲುಗಪ್ಪ ಮೀಸಿ,ನಾಗರಾಜ ಮ್ಯಾಗಳಮನಿ ಶಿವರಾಜ ದೊಡ್ಡಮನಿ,ಪರಶುರಾಮ ದೊಡ್ಡಮನಿ ಸೇರಿದಂತೆ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 