ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹವರದಿ ರವಿಕುಮಾರ ತುಪ್ಪದ
Ravikumar Tupada urges immediate action to resolve electricity problem
ಕೊಲ್ಹಾರ 19 : ರಾಜ್ಯದಲ್ಲಿ ವಿದ್ಯುತ್ ಖಾಸಗೀಕರಣ ಪ್ರಕ್ರಿಯೆಯನ್ನು ಕೈಬಿಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತರ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಚುನ್ನಪ್ಪ ಪೂಜಾರಿ ಹಾಗೂ ಕೊಲ್ಹಾರ ತಾಲೂಕು ಅಧ್ಯಕ್ಷ ಸೋಮು ಬಿರಾದಾರ ಅವರ ನೇತೃತ್ವದಲ್ಲಿ ತಾಲೂಕಿನ ರೈತರು ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.ಪಟ್ಟಣದ ಬಸವೇಶ್ವರ ಸರ್ಕಲ್ನಿಂದ ಪಾದಯಾತ್ರೆ ಮೂಲಕ ತಹಶೀಲ್ದಾರರ ಕಚೇರಿವರೆಗೆ ತೆರಳಿದ ರೈತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಅಲ್ಲಿನ ದಂಡಾಧಿಕಾರಿ ಎಸ್.ಎಚ್. ಅರಕೇರಿ ಅವರಿಗೆ ಮನವಿ ಪತ್ರ ಸಲ್ಲಿಸಿ, ವಿದ್ಯುತ್ ಖಾಸಗೀಕರಣ ಯೋಜನೆಯನ್ನು ತಕ್ಷಣ ಕೈಬಿಡುವಂತೆ ಒತ್ತಾಯಿಸಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಅಧ್ಯಕ್ಷ ಸೋಮು ಬಿರಾದಾರ ಮಾತನಾಡಿ ತಾಲೂಕಿನಾದ್ಯಂತ ಕಳಪೆ ಗುಣಮಟ್ಟದ ವಿದ್ಯುತ್ ಪೂರೈಕೆಯಿಂದ ರೈತರ ಕೃಷಿ ಪಂಪ್ಸೆಟ್ಗಳ ಟ್ರಾನ್ಸ್ಫಾರ್ಮರ್ಗಳು (ಟಿಸಿ) ಪದೇ ಪದೇ ಸುಟ್ಟುಹೋಗುತ್ತಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ. ಹೆಸ್ಕಾಂ ಅಧಿಕಾರಿಗಳು ರೈತರ ಸಮಸ್ಯೆಗಳಿಗೆ ಸಮರ್ಕವಾಗಿ ಸ್ಪಂದಿಸುತ್ತಿಲ್ಲ. ಟಿಸಿ ಸುಟ್ಟುಹೋದ ಬಳಿಕ ಹೊಸ ಟ್ರಾನ್ಸ್ಫಾರ್ಮರ್ ಅಳವಡಿಕೆಯಲ್ಲಿ ವಿಳಂಬವಾಗುತ್ತಿದ್ದು, ಬೆಳೆಗಳಿಗೆ ನೀರುಣಿಸಲು ಸಾಧ್ಯವಾಗದೆ ರೈತರು ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಾಲೂಕಿನಲ್ಲಿ ನಿರಂತರ ಮತ್ತು ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಬೇಕು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 