ರವೀಂದ್ರ ಪಾಟೀಲ ಸಹಕಾರ ಇಲಾಖೆಯ ಉಪ ನಿಬಂಧಕರಾಗಿ ಮರು ನೇಮಕ
Ravindra Patil reappointed as Deputy Controller of the Cooperation Department
ಕಾಗವಾಡ, 18 : ಕಳೆದ ವಾರ ಬೆಳಗಾವಿ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರಾಗಿ ರಂಜನಾ ಪೋಳ ಅಧಿಕಾರ ವಹಿಸಿಕೊಂಡಿದ್ದರು. ಅವರ ನೇಮಕ ಪ್ರಶ್ನಿಸಿ, ಹಿಂದಿನ ಉಪ ನಿಬಂಧಕ ರವೀಂದ್ರ ಪಾಟೀಲ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಅವರ ಬೇಡಿಕೆಯನ್ನು ಪುರಸ್ಕರಿಸಿದ ಹೈಕೋರ್ಟ್ ಸೋಮವಾರ ದಿ.17 ರಂದು ರವೀಂದ್ರ ಪಾಟೀಲ ಅವರನ್ನು ಉಪ ನಿಬಂಧಕರಾಗಿ ಮರು ನೇಮಕ ಮಾಡುವಂತೆ ಆದೇಶ ಹೊರಡಿಸಿದೆ.
ರವೀಂದ್ರ ಪಾಟೀಲ ಮೂಲತಃ ತಾಲೂಕಿನ ಜುಗೂಳ ಗ್ರಾಮದ ಸಿಬಿಕೆಎಸ್‌ಎಸ್ ಕಾರ್ಖಾನೆ ಚಿಕ್ಕೋಡಿ ಇದರ ನಿರ್ದೇಶಕರು, ಗ್ರಾಮದ ವಿವಿದೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಹಿರಿಯ ಮುಖಂಡ ಅಣ್ಣಾಸಾಬ ಪಾಟೀಲ ಇವರ ಸುಪುತ್ರರಾಗಿದ್ದು, ಬೆಳಗಾವಿಯ ಸಹಕಾರ ಸಂಘಗಳ ಕಚೇರಿಯಲ್ಲಿ ನಾಳೆ ಬುಧವಾರ ದಿ.19 ರಂದು ಉಪ ನಿಬಂಧಕರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 