ವಿವೇಕಾನಂದರ ಸಾಹಿತ್ಯ ಓದಿ ಆತ್ಮವಿಶ್ವಾಸ ಬೆಳೆಸಿಕೊಳ್ಳಿ

ವಿವೇಕಾನಂದರ ಸಾಹಿತ್ಯ ಓದಿ ಆತ್ಮವಿಶ್ವಾಸ ಬೆಳೆಸಿಕೊಳ್ಳಿ Read Vivekananda's literature and build self-confidence

ಲೋಕದರ್ಶನ ವರದಿ 

ಹುಬ್ಬಳ್ಳಿ, ಜು.10: ದೇಶದ ಯುವಕರಲ್ಲಿ ಆತ್ಮವಿಶ್ವಾಸ, ಆತ್ಮಶಕ್ತಿ ಮತ್ತು ರಾಷ್ಟ್ರೀಯ ಚೈತನ್ಯ ಮೂಡಿಸುವಲ್ಲಿ ಅಪೂರ್ವ ಕೊಡುಗೆ ನೀಡಿದ ಮಹಾನ್ ಸಂತ, ತತ್ವಜ್ಞಾನಿ ಸ್ವಾಮಿ ವಿವೇಕಾನಂದರ ಸ್ಮೃತಿ ದಿನದ ಅಂಗವಾಗಿ ಶುಕ್ರವಾರ ಶ್ರೀ ಸಿದ್ದಾರೂಢ ಸ್ವಾಮಿಜಿ ರೈಲು ನಿಲ್ದಾಣದ ಪ್ರವೇಶ ದ್ವಾರದಲ್ಲಿರುವ ಅವರ ಕಂಚಿನ ಪ್ರತಿಮೆಗೆ ವಿವಿಧ ಸಂಘಟನೆಗಳ ವತಿಯಿಂದ ಮಾಲಾರೆ​‍್ಣ ಮಾಡಿ ಗೌರವ ನಮನ ಸಲ್ಲಿಸಲಾಯಿತು.  

ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಸ್ಮರಿಸಿ ಪುಷ್ಪಾರ್ಚನೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, "ಸ್ವಾಮಿ ವಿವೇಕಾನಂದರ ಸಾಹಿತ್ಯ, ಜೀವನ ಹಾಗೂ ಸಂದೇಶಗಳು ಇಂದಿನ ಯುವಜನತೆಗೆ ಸದಾ ಪ್ರೇರಣಾದಾಯಕವಾಗಿವೆ. ವಿದ್ಯಾರ್ಥಿಗಳು ಅವರ ಬರಹಗಳನ್ನು ಓದಿ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ಅವರ ತತ್ವ-ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಉತ್ತಮ ಸಾಧನೆ ಸಾಧ್ಯ," ಎಂದು ಹೇಳಿದರು.  

ಭಗವಾನ್ ಶ್ರೀ ರಾಮಕೃಷ್ಣ ಪರಮಹಂಸರ ಸಂದೇಶಗಳನ್ನು ವಿಶ್ವದಾದ್ಯಂತ ಸಾರಿದ ಸ್ವಾಮಿ ವಿವೇಕಾನಂದರು ಮನುಕುಲದ ಉದ್ಧಾರಕ್ಕಾಗಿ ತಮ್ಮ ಜೀವನವನ್ನು ಸಮರ​‍್ಿಸಿಕೊಂಡ ಮಹಾನ್ ಯೋಗಿ ಎಂದು ಬಣ್ಣಿಸಿದ ಅವರು, ಯುವಕರು ದೇಶದ ಅಮೂಲ್ಯ ಆಸ್ತಿಯಾಗಬೇಕು ಹಾಗೂ ವಿವೇಕಾನಂದರ ಆದರ್ಶಗಳನ್ನು ಅನುಸರಿಸಿ ಸಮಾಜಮುಖಿ ಬದುಕು ಕಟ್ಟಿಕೊಳ್ಳಬೇಕು ಎಂದು ಕರೆ ನೀಡಿದರು.  

ಕಾರ್ಯಕ್ರಮದಲ್ಲಿ ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ ಚನ್ನಬಸಪ್ಪ ಧಾರವಾಡಶೆಟ್ಟರ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷರು ಸೇರಿದಂತೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿಗಳು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.