ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ
Ready to discuss North Karnataka issues: CM Siddaramaiah
ಬೆಳಗಾವಿ: ಮುಂದಿನ ಮೂರು ದಿನಗಳಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ನಿರ್ಧರಿಸಿದ್ದೇವೆ. ವಿರೋಧ ಪಕ್ಷಗಳು ಯಾವ ವಿಷಯಗಳನ್ನು ಎತ್ತಬಹುದೆಂದು ನಾವು ಊಹಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಕ್ಫ್ ಸಮಸ್ಯೆಗೆ ಸಂಬಂಧಿಸಿದಂತೆ, "ನಾವು ಇನ್ನೂ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ ಮತ್ತು ಚರ್ಚೆ ಪೂರ್ಣಗೊಂಡಿಲ್ಲ. ಅವರು ಈ ವಿಷಯವನ್ನು ಪ್ರಸ್ತಾಪಿಸುತ್ತಾರೋ ಅಥವಾ ಉತ್ತರ ಕರ್ನಾಟಕದ ಸಮಸ್ಯೆಗಳತ್ತ ಗಮನ ಹರಿಸುತ್ತಾರೋ ಗೊತ್ತಿಲ್ಲ. ಉತ್ತರಿಸಲು ಮತ್ತು ಚರ್ಚೆಗೆ ಸರ್ಕಾರ ಸಿದ್ಧವಾಗಿದೆ ಎಂದರು.
ಬಿವೈ ವಿಜಯೇಂದ್ರ ಅವರು 150 ಕೋಟಿ ರೂ. ಆಮಿಷವೊಡ್ಡಿರುವುದಾಗಿ ಮುಖ್ಯಮಂತ್ರಿಗಳು ಹೇಳಿರುವುದು ಸುಳ್ಳು ಎಂದ ಅನ್ವರ್ ಮಾಣಿಪ್ಪಾಡಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, “ಮಾಣಿಪ್ಪಾಡಿ ಅವರು ಈ ಹಿಂದೆಯೇ ಹೇಳಿಕೆ ನೀಡಿದ್ದಾರೆ. ಈಗ ಯೂಟರ್ನ್ ಹೊಡೆದಿದ್ದಾರೆ ಎಂದರು.
ಪ್ರತಿಭಟನಾಕಾರರ ಮೇಲೆ ನಡೆದ ಲಾಠಿ ಪ್ರಹಾರಕ್ಕೆ ಸಂಬಂಧಿಸಿದಂತೆ ಕೂಡಲಸಂಗಮ ಪಂಚಮಸಾಲಿ ಪೀಠದ ಪೀಠಾಧಿಪತಿ ಬಸವ ಜಯಮೃತ್ಯುಂಜಯ ಸ್ವಾಮಿ ಅವರ ಕ್ಷಮೆ ಯಾಚಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದ್ದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಲಿಂಗಾಯತ ಪಂಚಮಸಾಲಿ ಸಮುದಾಯದ ಮೀಸಲಾತಿ ಬೇಡಿಕೆ ಈಡೇರಿಸಲು ವಿಫಲವಾಗಿರುವ ಬಿಜೆಪಿ ಕ್ಷಮೆಯಾಚಿಸಬೇಕು ಎಂದು ತಿರುಗೇಟು ನೀಡಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 