ಶಿಕ್ಷಕರ ವೃತ್ತಿಪರ ಅಭಿವೃದ್ಧಿಗೆ ರಿಫ್ರೆಶರ್ ತರಬೇತಿ
Refresher training for teachers' professional development
ಬೆಳಗಾವಿ 22 : ನಗರದ ಈಫಾ ಹೋಟೆಲ್ನಲ್ಲಿ ಲರ್ನಿಂಗ್ ಲಿಂಕ್ಸ್ ಫೌಂಡೇಶನ್ ವತಿಯಿಂದ ಶೆಲ್ ನೆಕ್ಸ್ ಪ್ಲೋರರ್ಸ್ ಶಿಕ್ಷಕರ ವೃತ್ತಿಪರ ಅಭಿವೃದ್ಧಿ ರಿಫ್ರೆಶರ್ ತರಬೇತಿ-7 ಕಾರ್ಯಕ್ರಮ ನಡೆಯಿತು. ಬೆಳಗಾವಿಯ 20 ಶಾಲೆಗಳ 25 ಶಿಕ್ಷಕರು ತರಬೇತಿಯಲ್ಲಿ ಭಾಗವಹಿಸಿದ್ದರು. ಸೀನಿಯರ್ ಫೌಂಡೇಶನ್ ವಿಷಯವಸ್ತು, ಪ್ರಾಜೆಕ್ಟ್ ಅಭಿವೃದ್ಧಿ, ಸ್ಪರ್ಧೆಗಳು, ಎನರ್ಜಿ ಕ್ಲಬ್ಗಳ ಪರಿಣಾಮಗಳು ಹಾಗೂ ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿಗಳ ಕುರಿತು ತರಬೇತಿ ನೀಡಲಾಯಿತು. ನೈಜ ಜೀವನದ ಸಮಸ್ಯೆಗಳನ್ನು ಗುರುತಿಸಿ ನವೀನ ಪರಿಹಾರಗಳನ್ನು ರೂಪಿಸಲು ಹಾಗೂ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲು ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ವಿಧಾನಗಳ ಕುರಿತು ಶಿಕ್ಷಕರಿಗೆ ಪ್ರಾಯೋಗಿಕ ಮಾರ್ಗದರ್ಶನ ನೀಡಲಾಯಿತು. ಸೃಜನಶೀಲತೆ, ವಿಮರ್ಶಾತ್ಮಕ ಚಿಂತನೆ, ಸಂವಹನ, ಸಹಯೋಗ ಮತ್ತು ಸಮಸ್ಯೆ ಪರಿಹಾರದಂತಹ 21ನೇ ಶತಮಾನದ ಕೌಶಲ್ಯಗಳ ಮೂಲಕ ವಿದ್ಯಾರ್ಥಿಗಳಲ್ಲಿ ನಾವೀನ್ಯತೆ ಬೆಳೆಸಲು ಒತ್ತು ನೀಡಲಾಯಿತು. ಕಾರ್ಯಕ್ರಮಕ್ಕೆ ಸಂಬಂಧಿಸಿದ ಸಿಬ್ಬಂದಿ ಸಹಕಾರ ನೀಡಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 