ಪ್ರಾದೇಶಿಕ ಆಯುಕ್ತರಾದ ಪಿ.ಎ. ಮೇಘಣ್ಣವರ ಅವರಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ
ಬೆಳಗಾವಿ 31: ತಮ್ಮ ನಿವೃತ್ತಿಯ ನಂತರವೂ ಗಡಿ ಭಾಗದ ಜನತೆಯ ಸಮಸ್ಯೆಗಳಿಗೆ ಸ್ಪಂದಿಸುವದಾಗಿ ಪ್ರಾದೇಶಿಕ ಆಯುಕ್ತ ಪಿ.ಎ.ಮೇಘಣ್ಣವರ ಅವರು ಇಂದಿಲ್ಲಿ ಹೇಳಿದರು.
ಮೂವತ್ತು ವರ್ಷಗಳ ಸುದೀರ್ಘ ಸೇವೆಯ ನಂತರ ಇಂದು ನಿವೃತ್ತಿ ಹೊಂದುತ್ತಿರುವ ಅವರು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಮತ್ತು ಇತರ ಜನಪರ ಸಂಘಟನೆಗಳ ಸನ್ಮಾನವನ್ನು ಸ್ವೀಕರಿಸಿ ತಮ್ಮ ಕಚೇರಿಯ ಸಭಾಂಗಣದಲ್ಲಿ ಮಾತನಾಡಿದ ಅವರು,ತಾವು ತೊಂಭತ್ತರ ದಶಕದ ಕೊನೆಗೆ ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರಾಗಿ ಕೆಲಸ ಮಾಡುವಾಗಿನ ಅನುಭವಗಳನ್ನು ಸ್ಮರಿಸಿಕೊಂಡರಲ್ಲದೇ ಪಾಲಿಕೆಯಲ್ಲಿ ಕನ್ನಡ ಅನುಷ್ಠಾನ ಮಾಡಿದ ರೀತಿಯನ್ನು ವಿವರಿಸಿದರು.
ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಅವರು ಮಾತನಾಡಿ, 1983 ರಿಂದ ಇಲ್ಲಿಯವರೆಗೆ ತಾವು ಮೇಘಣ್ಣವರ ಅವರೊಂದಿಗೆ ಹೊಂದಿದ ಒಡನಾಟ ಮತ್ತು ಅವರು ಗಡಿ ಭಾಗದಲ್ಲಿ ಮಾಡಿದ ಕನ್ನಡ ಸೇವೆಯನ್ನು ಸ್ಮರಿಸಿಕೊಂಡರು.
ಕನರ್ಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಮಹಾದೇವ ತಳವಾರ,ದಲಿತ ನಾಯಕ ಮಲ್ಲೇಶ ಚೌಗುಲೆ ಮಾತನಾಡಿ ಮೇಘಣ್ಣವರ ಅವರ ಸೇವೆಯನ್ನು ಕೊಂಡಾಡಿದರು.
ಯುನೈಟೆಡ್ ಸಮಾಜ ಕಲ್ಯಾಣ ಸಂಸ್ಥೆ ಮತ್ತು ನೃಪತುಂಗ ಯುವಕ ಸಂಘದ ವತಿಯಿಂದಲೂ ಮೇಘಣ್ಣವರ ದಂಪತಿಗಳನ್ನು ಸನ್ಮಾನಿಸಲಾಯಿತು.
ಸಂಘದ ಅಧ್ಯಕ್ಷ ಸಾಗರ್ ಬೋರಗಲ್ಲ ಮತ್ತಿತರರು ಸನ್ಮಾನಿಸಿದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 