ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿ: ಜಿಲ್ಲಾಧಿಕಾರಿ
Register names in the voters' list: Deputy Commissioner
ಬಳ್ಳಾರಿ 20: 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಅರ್ಹ ಹಾಗೂ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು, ಮತದಾರರ ಗುರುತಿನ ಚೀಟಿ ಪಡೆದು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ 2026 ಹಾಗೂ ಸ್ವೀಪ್ ಕಾರ್ಯಕ್ರಮದ ಅಂಗವಾಗಿ ಭಾನುವಾರ ನಗರದ ಎನ್ಸಿಸಿ ಮೈದಾನದಲ್ಲಿ ಆಯೋಜಿಸಿದ್ದ 4 ಕಿ.ಮೀ. ಮ್ಯಾರಥಾನ್ಗೆ ಚಾಲನೆ ನೀಡಿ ಅವರು ಮಾತನಾಡಿದರು.
ಅರ್ಹ ವ್ಯಕ್ತಿಗಳ ಹೆಸರು ಮತದಾರರ ಪಟ್ಟಿಯಲ್ಲಿ ಕೈಬಿಟ್ಟಿದ್ದರೆ, ಸಂಬಂಧಪಟ್ಟ ಚುನಾವಣಾ ಅಧಿಕಾರಿಗಳ ಗಮನಕ್ಕೆ ತಂದು ನೋಂದಾಯಿಸಿಕೊಳ್ಳಬೇಕು. 18 ವರ್ಷ ಮೇಲ್ಪಟ್ಟ ಅರ್ಹ ಯುವಕರು ಅಕ್ಟೋಬರ್ 1ರಿಂದ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನೋಂದಣಿ ಮಾಡಿಕೊಳ್ಳಬಹುದು ಎಂದು ತಿಳಿಸಿದರು.
ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಮಾತನಾಡಿ, ಯುವಜನರಲ್ಲಿ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಮ್ಯಾರಥಾನ್ ಆಯೋಜಿಸಲಾಗಿದೆ. ಅರ್ಹ ಯುವಕರು ಅಕ್ಟೋಬರ್ 1ರಿಂದ ತಮ್ಮ ಸಮೀಪದ ಬೂತ್ ಮಟ್ಟದ ಅಧಿಕಾರಿಗಳ ಮೂಲಕ ಸಲ್ಲಿಸಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದರು.
ಮಳೆಯ ನಡುವೆಯೂ ಮ್ಯಾರಥಾನ್ನಲ್ಲಿ ಯುವಕರು, ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿದರು. ಎನ್ಸಿಸಿ ಮೈದಾನದಿಂದ ಆರಂಭವಾದ ಓಟವು ಸುಧಾ ಕ್ರಾಸ್, ಇನ್ಫೆಂಟ್ರಿ ರಸ್ತೆ, ಎಸ್ಪಿ ವೃತ್ತದ ಮೂಲಕ ಸಾಗಿ ದುರ್ಗಮ್ಮ ದೇವಸ್ಥಾನದ ಆವರಣದಲ್ಲಿ ಮುಕ್ತಾಯಗೊಂಡಿತು. ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಬಸವರಾಜ ಕೆ.ಎನ್. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 