ಆರೋಗ್ಯ ಸೇವೆ ಕಲ್ಪಿಸಲು ಆಸ್ಪತ್ರೆಗಳಿಗೆ ಸೂಚನೆ ತಪ್ಪಿದಲ್ಲಿ ನೊಂದಣಿ ರದ್ದು: ಜಿಲ್ಲಾಧಿಕಾರಿ

ಆರೋಗ್ಯ ಸೇವೆ ಕಲ್ಪಿಸಲು ಆಸ್ಪತ್ರೆಗಳಿಗೆ ಸೂಚನೆ ತಪ್ಪಿದಲ್ಲಿ ನೊಂದಣಿ ರದ್ದು: ಜಿಲ್ಲಾಧಿಕಾರಿ

ವಿಜಯಪುರ ಮೇ.02: ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳನ್ನು ತೆರೆದಿಡುವಂತೆ ಸೂಚಿಸಿರುವ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಇದಕ್ಕೆ ತಪ್ಪಿದಲ್ಲಿ ಆಯಾ ಆಸ್ಪತ್ರೆಗಳ ನೊಂದಣಿ ರದ್ದುಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಖಾಸಗಿ ಆಸ್ಪತ್ರೆಗಳ ವೈದ್ಯರೊಂದಿಗೆ ಸಭೆ ನಡೆಸಿದ ಅವರು ಜಿಲ್ಲೆಯಾದ್ಯಂತ ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ಆಸ್ಪತ್ರೆಗಳನ್ನು ಹೊರತುಪಡಿಸಿ ಇನ್ನೂ ಕೆಲವು ಆಸ್ಪತ್ರೆಗಳು ತೆರೆಯದೆ ಇರುವ ಬಗ್ಗೆ ಗಮನಕ್ಕೆ ಬಂದಿದ್ದು ಅಂತಹ ಆಸ್ಪತ್ರೆಗಳು ತಕ್ಷಣ ತೆರೆದು ಸಾರ್ವಜನಿಕರ ಸೇವೆಗೆ ಅಣಿಯಾಗಬೇಕು. ಈ ಕುರಿತಂತೆ ಯಾವುದೇ ರೀತಿಯ ದೂರು ಬಂದಲ್ಲಿ ಅಂತಹ ಆಸ್ಪತ್ರೆಗಳ ನೊಂದಣಿಯನ್ನು ತಕ್ಷಣ ರದ್ದುಗೊಳಿಸುವುದಾಗಿ ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. 

ಜಿಲ್ಲೆಯಾದ್ಯಂತ ಇರುವಂತಹ 229 ಆಯರ್ುವೇದಿಕ್ ಕ್ಲೀನಿಕ್/ ನಸರ್ಿಂಗ್, 5 ಯುನಾನಿ, 29 ಹೋಮಿಯೋಪಥಿಕ್, 230 ಆಲೋಪಥಿಕ್ ಮತ್ತು 38 ಡೈಗ್ನೋಸ್ಟಿಕ್ ಆಸ್ಪತ್ರೆಗಳು ಯಾವುದೇ ಪರಿಸ್ಥಿತಿಯಲ್ಲಿ ಶ್ವ್ವಾಸಕೋಶ ತೊಂದರೆ(ಸಾರಿ) ಮತ್ತು ನೆಗಡಿ, ಕೆಮ್ಮು, ಜ್ವರ(ಐಎಲ್ಐ) ರೋಗಿಗಳನ್ನು ಉಪಚರಿಸುವಂತಿಲ್ಲ, ಇಂತಹ ರೋಗಿಗಳು ಕಂಡುಬಂದಲ್ಲಿ ತಕ್ಷಣ ತಜ್ಞವೈದ್ಯರ ಬಳಿಗೆ ಕಳುಹಿಸುವುದರ ಜೊತೆಗೆ ರೋಗಿ, ಸಂಬಂಧಿಸಿದ ಆಸ್ಪತ್ರೆಗೆ ತಲುಪಿದ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು. ಅವರು ತಿಳಿಸಿದ್ದಾರೆ. 

ಜಿಲ್ಲೆಯಲ್ಲಿ ಈಗಾಗಲೇ ಘೋಷಿಸಿರುವ ಕಂಟೇನ್ಮೆಂಟ್ ವಲಯದಲ್ಲಿ ಯಾವುದೇ ಆಸ್ಪತ್ರೆಗಳು ಐಪಿಡಿ, ಡೆಲೆವರಿ, ಸರ್ಜರಿಗಳನ್ನು ಕೈಗೊಳ್ಳುವಂತಿಲ್ಲ. ಕೇವಲ ಓಪಿಡಿಗಳನ್ನು ಮಾತ್ರ ತೆರೆದು ಚಿಕಿತ್ಸೆ ನೀಡಬಹುದಾಗಿದ್ದು, ಆರೋಗ್ಯಕ್ಕೆ ಸಂಬಂಧಿಸಿದ ತುತರ್ುಚಿಕಿತ್ಸಾ ಪ್ರಕರಣಗಳು ಬಂದಲ್ಲಿ ಅಂತಹ ರೋಗಿಗಳನ್ನು ಇತರೇ ತಜ್ಞವೈದ್ಯರ ಬಳಿ ಕಳುಹಿಸಲು ಪೊಲೀಸ್ ಇಲಾಖೆಯ ನೆರವನ್ನು ಪಡೆಯಬಹುದಾಗಿದೆ ಎಂದು ಗೋಲ್ಗುಂಬಜ್ ಸಿಪಿಐ ಬಿ.ಕೆ ಮುಕತರ್ಿಹಾಳ ಮೋ.ಸಂ : 9480804232 ಗೆ ಸಂಪಕರ್ಿಸಿ ನೆರವನ್ನು ಸಹ ಪಡೆಯಬಹುದಾಗಿದೆ.ಕೋವಿಡ್-19 ಸಂದಿಗ್ದ ಪರಿಸ್ಥಿತಿಯಲ್ಲಿ ಸಾರ್ವಜನಿಕರಿಗೆ ಆರೋಗ್ಯ ಸೇವೆ ಕಲ್ಪಿಸಿ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ತಿಳಿಸಿರುವ ಅವರು ಬಯೋಮೆಡಿಕಲ್ ವೇಸ್ಟ್ ನಿರ್ವಹಣೆಗೆ ಸಮನ್ವಯ ಸಾಧಿಸಲಾಗುವುದು. ಕೋವಿಡ್-19 ದೊರತು ಪಡಿಸಿ ಇತರೇ ಯಾವುದಾದರು ಸಾವು ಆಗಿದಲ್ಲಿ ದೃಡಿಕರಣ ಪ್ರಮಾಣ ಪತ್ರ ಇಟ್ಟುಕೊಳ್ಲುವುದರ ಜೊತೆಗೆ ಸಂಬಂಧಪಟ್ಟವರಿಗೂ ನೀಡಬೇಕು. ಇತ್ತಿಚಿಗೆ ಕೋವಿಡ್-19 ಪಾಸಿಟಿವ್ ರೋಗಿಗಳನ್ನು ಅಲ್ ಅಮಿನ್ ಮತ್ತು ಬಿಎಲ್ಡಿಇ ಆಸ್ಪತ್ರೆಗಳ ವೈದ್ಯರು ನಿರ್ವಹಿಸಿದ ರೀತಿಯಿಂದ ಇದರ ವಿಸ್ತರಣೆ ತಡೆಗೆ ಸಹಕಾರಿಯಾಗಿದೆ ಎಂದು ಅವರು ಅಭಿಪ್ರಾಯ ಪಟ್ಟರು. 

 ಸಭೆಯಲ್ಲಿ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ಅವರು ಮಾತನಾಡಿ ಕಂಟೆನ್ಮೆಂಟ್ ವಲಯದಲ್ಲಿ ಸಾರ್ವಜನಿಕರು ಅನಾವಶ್ಯಕವಾಗಿ ಓಡಾಡಬಾರದು, ಕೋವಿಡ್-19 ತಡೆಯುವಲ್ಲಿ ಪೊಲೀಸ್ ಇಲಾಖೆಯೊಂದಿಗೆ ಅವಶ್ಯಕ ಸಹಕಾರ ನೀಡಬೇಕು ಎಂದು ಹೇಳಿದರು. ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಹಾಗೂ ಜಿಲ್ಲೆಯ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.