ಧಾರವಾಡ ಜಿಲ್ಲೆಯ ಉಪನೋಂದಣಿ ಕಚೇರಿಗಳ ಪೈಕಿ ಒಂದರಲ್ಲಿ ರಜಾ ದಿನಗಳಲ್ಲೂ ನೋಂದಣಿಗೆ ಅವಕಾಶ
Registration is allowed even on holidays at one of the sub-registration offices in Dharwad district.
ಧಾರವಾಡ 29: ರಾಜ್ಯ ಸರ್ಕಾರದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾರ್ಯಗಳನ್ನು ಸಾರ್ವಜನಿಕ ಮತ್ತು ಜನಸ್ನೇಹಿಗೊಳಿಸಲು ರಾಜ್ಯ ಸರ್ಕಾರವು ಪ್ರತಿ ತಿಂಗಳ ಎರಡನೇ ಶನಿವಾರ, 4ನೇ ಶನಿವಾರ ಮತ್ತು ಭಾನುವಾರಗಳಂದು ಜಿಲ್ಲೆಯ ನೊಂದಣಿ ಕಚೇರಿಗಳ ಪೈಕಿ ಒಂದರಲ್ಲಿ ನೋಂದಣಿ ಕಾರ್ಯ ನಿರ್ವಹಿಸಲು ಆದೇಶಿಸಿದೆ.
ಅದರಂತೆ ಧಾರವಾಡ ಜಿಲ್ಲೆಯಲ್ಲಿ ಧಾರವಾಡ, ಹುಬ್ಬಳ್ಳಿ ಉತ್ತರ, ಹುಬ್ಬಳ್ಳಿ ದಕ್ಷಿಣ, ಕಲಘಟಗಿ, ನವಲಗುಂದ, ಅಣ್ಣಿಗೇರಿ ಮತ್ತು ಕುಂದಗೋಳ ಪಟ್ಟಣ ಸೇರಿದಂತೆ ಒಟ್ಟು 7 ಉಪನೋಂದಣಿ ಕಛೇರಿಗಳಿವೆ.
ಈಗಾಗಲೇ ಜಿಲ್ಲೆಯಾದ್ಯಂತ ಚಿಟಿಥಿತಿಜಡಿಜ ಖಜರಣಡಿಚಿಣಠ ಅಂದರೆ ಜಿಲ್ಲೆಯ ಯಾವುದೇ ಕಛೇರಿಯಲ್ಲಿ ಆದರೂ ನೋಂದಣಿ ಮಾಡಿಸಿಕೊಳ್ಳುವ ಯೋಜನೆ ಜಾರಿಯಲ್ಲಿರುತ್ತದೆ. ಅದರಂತೆ ಸರಕಾರವು ಈಗ ತಿಂಗಳ 2ನೇ ಮತ್ತು 4ನೇ ಶನಿವಾರ ಹಾಗೂ ಎಲ್ಲಾ ಭಾನುವಾರಗಳಂದು ಜಿಲ್ಲೆಯ ಒಂದು ಉಪನೋಂದಣಿ ಕಛೇರಿ ಕಾರ್ಯನಿರ್ವಹಿಸಲು ನಿರ್ದೇಶಿಸಿದ್ದು, ಈಗಿರುವ ಧಾರವಾಡ ಜಿಲ್ಲೆಯ 7 ಉಪನೋಂದಣಿ ಕಛೇರಿಗಳ ಪೈಕಿ ಸರದಿ ಪ್ರಕಾರ ಜಿಲ್ಲೆಯ ಒಂದು ಉಪನೋಂದಣಿ ಕಛೇರಿಯಲ್ಲಿ ಆಸ್ತಿ, ವಿವಾಹ ನೋಂದಣಿ ಸೇರಿದಂತೆ ನೋಂದಣಿ ಕಾರ್ಯ ನಡೆಯಲಿದೆ.
ಜಿಲ್ಲೆಯ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 