ಕೃಣ್ಣನ ’ಲವ್ ಮಾಕ್ಟೇಲ್ 3’ ಬಿಡುಗಡೆಗೆ ದಿನಾಂಕ ನಿಗದಿ
Release date set for Krinnana's 'Love Mocktail 3'
ನಟ ಡಾರ್ಲಿಂಗ್ ಕೃಷ್ಣ ’ಲವ್ ಮಾಕ್ಟೇಲ್’ ಸಿನಿಮಾ ಮೂಲಕ ನಿರ್ದೇಶನಾಗಿ ಹೆಸರು ಮಾಡಿದ್ದು ನಿಮಗೆಲ್ಲಾ ಗೊತ್ತೆ ಇದೆ. ನಿರ್ದೇಶಕನಾಗಿ ಮೊದಲ ಹೆಜ್ಜೆಯಲ್ಲಿಯೇ ಗೆಲುವು ಕಂಡಿದ್ದ ಕೃಷ್ಣ ನಂತರ ’ಲವ್ ಮಾಕ್ಟೇಲ್ 2’ ನಟನೆ, ನಿರ್ದೇಶನ ಮಾಡಿ ಗೆದ್ದರು.
ಆ ಗೆಲುವಿನ ಪ್ರಭೆಯಲ್ಲಿ ’ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಚಾಲನೆ ನೀಡಿದ್ದ ಡಾರ್ಲಿಂಗ್ ಕೃಷ್ಣ, ಇತ್ತೀಚೆಗಷ್ಟೇ ಮೋಷನ್ ಪೋಸ್ಟರ್ ಲಾಂಚ್ ಮಾಡಿದ್ದರು. ಈ ಮೂಲಕ ಮೂರನೇ ಆವೃತ್ತಿ ನವಿರಾದ ಕುತೂಹಲವೊಂದಕ್ಕೆ ಚಾಲನೆ ನೀಡಿತ್ತು. ಇದೀಗ ಹೊಸ ವರ್ಷದ ಉಡುಗೊರೆ ಎಂಬಂತೆ ಈ ಚಿತ್ರದ ಬಿಡುಗಡೆ ದಿನಾಂಕವನ್ನು ಡಾಲಿಂಗ್ ಕೃಷ್ಣ ಘೋಶಿಸಿದ್ದಾರೆ. ಹೌದು ’ಲವ್ ಮಾಕ್ಟೇಲ್ 3’ ಪ್ರೇಕ್ಷಕರ ಮುಂದೆ ಬರಲು ಇದೇ ಏಪ್ರಿಲ್ 10ರಂದು ಮುಹೂರ್ತ ನಿಗಧಿಯಾದಂತಾಗಿದೆ.
2020ರಲ್ಲಿ ಡಾರ್ಲಿಂಗ್ ಕೃಷ್ಣ ನಟಿಸಿ, ನಿರ್ದೇಶನ ಮಾಡಿದ್ದ ’ಲವ್ ಮಾಕ್ಟೇಲ್’ ಚಿತ್ರ ತೆರೆಗಂಡಿತ್ತು. ನವಿರು ಪ್ರೇಮದೊಂದಿಗೆ ಹೊಸೆದುಕೊಂಡಿದ್ದ ಸೂಕ್ಷ್ಮ ಕಥನದ ಮೂಲಕ ಗೆದ್ದ ನಂತರ, ’ಲವ್ ಮಾಕ್ಟೇಲ್ 2’ ಚಿತ್ರವನ್ನು ಕೃಷ್ಣ ರೂಪಿಸಿದ್ದರು. ಇದೀಗ ತೆರೆಗಾಣಲು ಸಜ್ಜಾಗಿರುವ ’ಲವ್ ಮಾಕ್ಟೇಲ್ 3’ ಈ ಹಿಂದಿನ ಎರಡು ಆವೃತ್ತಿಗಳಿಗಿಂತಲೂ ಭಿನ್ನವಾಗಿರಲಿದೆ ಎಂಬ ವಿಚಾರವನ್ನಷ್ಟೇ ಕೃಷ್ಣ ಹಂಚಿಕೊಂಡಿದ್ದಾರೆ. ಕಥೆ, ನಿರೂಪಣೆ ಸೇರಿದಂತೆ ಎಲ್ಲದರಲ್ಲಿಯೂ ’ಲವ್ ಮಾಕ್ಟೇಲ್ 3’ ಹೊಸ ಅನುಭೂತಿ ಕೊಡಲಿದೆ ಎಂಬ ಭರವಸೆ ಕೃಷ್ಣ ಅವರದ್ದು. ಅಂದಹಾಗೆ ಈ ಚಿತ್ರವನ್ನು ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಕ್ರಿಸ್‌ಮಿ ಬ್ಯಾನರಿನಡಿಯಲ್ಲಿ ನಿರ್ಮಾಣ ಮಾಡಿದ್ದಾರೆ.
ನಕುಲ್ ಅಭಯಂಕರ್ ಸಂಗೀತ ನಿರ್ದೇಶನ, ಶ್ರೀ ಕ್ರೇಜಿ ಮೈಂಡ್ಸ್ ಛಾಯಾಗ್ರಹಣ ಮತ್ತು ಸಂಕಲ ಈ ಚಿತ್ರಕ್ಕಿದೆ. ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್, ಸಂವೃತ, ಅಮೃತಾ ಅಯ್ಯಂಗಾರ್, ರಚೆಲ್ ಡೇವಿಡ್, ಅಭಿಲಾಶ್ ದಳಪತಿ ಮುಂತಾದವರ ತಾರಾಗಣವಿದೆ. ಇದೀಗ ಎಲ್ಲ ಕೆಲಸ ಕಾರ್ಯಗಳನ್ನೂ ಮುಗಿಸಿಕೊಂಡಿರುವ ಚಿತ್ರತಂಡ, ಬೇಸಿಗೆ ರಜೆಯನ್ನು ಗಮನದಲ್ಲಿಟ್ಟುಕೊಂಡು ಏಪ್ರಿಲ್ 10ರಂದು ಪ್ರೇಕ್ಷಕರ ಮುಂದೆ ಬರಲು ತೀರ್ಮಾನಿಸಿದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 