ನವದೆಹಲಿ,ಸೆ 18 ಬಂಧಿತ ಜಮ್ಮು ಮತ್ತು ಕಾಶ್ಮೀರ ನಾಯಕರನ್ನು 18 ತಿಂಗಳೊಳಗೆ ಬಿಡುಗಡೆ ಮಾಡಲಾಗುವುದು ಎಂದು ಪ್ರಧಾನಿ ಕಚೇರಿಯ ರಾಜ್ಯ ಸಚಿವ ಡಾ.ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಆಗಸ್ಟ್ 4 ರಿಂದ ಗೃಹಬಂಧನದಲ್ಲಿರುವ ಫಾರೂಕ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಮತ್ತು ಒಮರ್ ಅಬ್ದುಲ್ಲಾ ಮತ್ತು ಇತರೆ ನಾಯಕರ ಬಿಡುಗಡೆ ಯಾವಾಗ ಎಂದು ಕೇಳಿದ ಪ್ರಶ್ನೆಗೆ ಅವರು ಈ ರೀತಿಯ ಉತ್ತರ ನೀಡಿದ್ದಾರೆ. ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರದ ತೀರ್ಮಾನದ ತೀರ್ಮಾನದ ವಿರುದ್ದ ಈ ನಾಯಕರು ಸಿಡಿದೆದ್ದಾರೆ.
ಫಾರೂಕ್ ಅಬ್ದುಲ್ಲಾ ಅವರನ್ನು ಸಾರ್ವಜನಿಕ ಸುರಕ್ಷತಾ ಕಾಯ್ದೆ (ಪಿಎಸ್ಎ) ಅಡಿಯಲ್ಲಿ ಬಂಧಿಸಲಾಗಿದ್ದು ಇದು ಎರಡು ವರ್ಷಗಳ ಕಾಲ ವಿಚಾರಣೆಯಿಲ್ಲದೆ ಬಂಧಿಸಿಡಲು ಅಧಿಕಾರಿಗಳಿಗೆ ಅವಕಾಶ ಮಾಡಿಕೊಡಲಿದೆ ಎಂದರು .
ನಾಯಕರನ್ನು ಎಷ್ಟು ಕಾಲ ಬಂಧನದಲ್ಲಿ ಎಂಬ ಮಾತಿಗೆ ಜಿತೇಂದ್ರ ಸಿಂಗ್ ಅವರು ಈ ರೀತಿ ಪ್ರತಿಕ್ರಯಿಸಿದ್ದಾರೆ. ಅವರು ಜಮ್ಮು ಮತ್ತು ಕಾಶ್ಮೀರದ ರಾಜ್ಯತ್ವದ ಬಗ್ಗೆ ನಿಲುವು ಪ್ರಕಟಿಸಿದ ಅವರು, ಪರಿಸ್ಥಿತಿ ಸಾಮಾನ್ಯವಾಗುತ್ತಿದ್ದಂತೆಯೇ ರಾಜ್ಯತ್ವ ಮರಳಿ ಸ್ಥಾಪಿಸಲಾಗುವುದು ಎಂದರು.
370 ನೇ ವಿಧಿಯನ್ನು ವಾಪಸ್ ಪಡೆಯುವ ಮೂಲಕ ಮೂಲಕ ಶ್ಯಾಮ ಪ್ರಸಾದ್ ಮುಖರ್ಜಿ ಅವರ ಕನಸು ನನಸಾಗಿದೆ ಎಂದು ಅವರು ಹೇಳಿದರು. ಜನ ಸಂಘದ ಸಂಸ್ಥಾಪಕ ಮುಖರ್ಜಿ ಒಂದು ದೇಶಕ್ಕಾಗಿ ಒಂದು ಧ್ವಜ, ಒಂದು ಸಂವಿಧಾನಕ್ಕಾಗಿ ನಿರಂತರವಾಗಿ ಹೋರಾಟ ಮಾಡಿದ್ದರು ಎಂದು ಸ್ಮರಿಸಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದಲ್ಲಿ ರಾಷ್ಟ್ರ ವಿರೋಧಿ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ಸ್ಥಾನವಿಲ್ಲ ಎಂದೂ ಸಚಿವರು ಸ್ಪಷ್ಟಪಡಿಸಿದರು.