ಕೃಷ್ಣಾ ನದಿಯಲ್ಲಿ ಹರಿವು ಇರುವವರೆಗೆ ಕಾಲುವೆಗಳಿಗೆ ನೀರು ಹರಿಸಿ: ಶ್ರೀಮಂತ ಪಾಟೀಲ ಆಗ್ರಹ
Release water into canals as long as there is flow in the Krishna River: Shrimant Patil urges
ಅಥಣಿ 15: ಕೃಷ್ಣಾ ನದಿಯಲ್ಲಿ ನೀರಿನ ಹರಿವು ಇರುವವರೆಗೆ ಕರಿಮಸೂತಿ, ಐನಾಪುರ ಹಾಗೂ ಬಸವೇಶ್ವರ ಏತ ನೀರಾವರಿ ಯೋಜನೆಗಳ ಕಾಲುವೆಗಳಿಗೆ ನೀರು ಹರಿಸಬೇಕು ಎಂದು ಮಾಜಿ ಸಚಿವ ಶ್ರೀಮಂತ ಪಾಟೀಲ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
ಮದಬಾವಿ ಗ್ರಾಮದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಭಾಗದ ರೈತರು ಕಾಲುವೆ ನೀರನ್ನೇ ಅವಲಂಬಿಸಿ ಕಬ್ಬು, ಹೆಸರು, ಉದ್ದು ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆದಿದ್ದಾರೆ. ನೀರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಹಿನ್ನೆಲೆಯಲ್ಲಿ ರೈತರು ಸಂಕಷ್ಟದಲ್ಲಿದ್ದು, ಕೃಷ್ಣಾ ನದಿಯ ನೀರಿನ ಮೇಲೆ ಸಂಪೂರ್ಣವಾಗಿ ಅವಲಂಬಿತರಾಗಿದ್ದಾರೆ ಎಂದು ಹೇಳಿದರು.
ಕೆಲ ದಿನಗಳ ಹಿಂದೆ ಕರಿಮಸೂತಿ ಹಾಗೂ ಬಸವೇಶ್ವರ ಕಾಲುವೆಗಳ ಮೂಲಕ ನೀರು ಹರಿಸಲಾಗುತ್ತಿತ್ತು. ಆದರೆ, ಏಕಾಏಕಿ ನೀರು ನಿಲ್ಲಿಸುವ ಕುರಿತು ಸರ್ಕಾರ ಸೂಚನೆ ನೀಡಿರುವುದು ರೈತರಿಗೆ ಆತಂಕ ಉಂಟುಮಾಡಿದೆ. ಕೃಷ್ಣಾ ನದಿಯಲ್ಲಿ ಇನ್ನೂ ಸಮರ್ಕ ಪ್ರಮಾಣದ ಹರಿವು ಇರುವುದರಿಂದ ಕಾಲುವೆಗಳಿಗೆ ನೀರು ಹರಿಸುವುದನ್ನು ಮುಂದುವರಿಸಬೇಕು ಎಂದು ಒತ್ತಾಯಿಸಿದರು.
ಒಂದು ವೇಳೆ ಕಾಲುವೆಗಳಿಗೆ ನೀರು ಹರಿಸುವುದನ್ನು ಸ್ಥಗಿತಗೊಳಿಸಿದರೆ ರೈತರೊಂದಿಗೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದ ಅವರು, ಹರಿಯುತ್ತಿರುವ ನೀರನ್ನು ತಡೆಯುವುದರಿಂದ ಅದು ವ್ಯರ್ಥವಾಗಿ ಮುಂದೆ ಹರಿದುಹೋಗುತ್ತದೆ. ಆದ್ದರಿಂದ ರೈತರ ಹಿತದೃಷ್ಟಿಯಿಂದ ಸರ್ಕಾರ ತನ್ನ ಆದೇಶವನ್ನು ಮರುಪರೀಶೀಲಿಸಿ, ನೀರು ಹರಿಸುವ ವ್ಯವಸ್ಥೆಯನ್ನು ಮುಂದುವರಿಸಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ರಾಮು ಮಗದುಮ್, ಮುರುಗಪ್ಪ ಮಗದುಮ್, ದೀಲೀಪ್ ಪವಾರ್, ರಮೇಶ್ ನಿವಲಗಿ, ಈಶ್ವರ ಕುಂಬಾರೆ, ಬಾಲು ಮಗದುಮ್, ಆರ್.ಎಂ. ಪಾಟೀಲ, ಮಾಂತು ಕಾಂಬಳೆ, ರಾವಸಾಬ್ ಮಗದುಮ್, ಸದಾಶಿವ ಮಗದುಮ್, ಶಿದರಾಯ ಮಣೆಜೋಳ ಹಾಗೂ ಸಂತೋಷ್ ಮಗದುಮ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ 