ಬೆಳಗಾವಿ(ಸುವರ್ಣಸೌಧ) 17 : ಆಗಸ್ಟ್ 2018 ರಲ್ಲಿ ಉಂಟಾದ ಪ್ರವಾಹ ಹಾಗೂ ಭೂ-ಕುಸಿತದಿಂದ ಕೊಡಗು ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಉಂಟಾಗಿರುವ ತೋಟಗಾರಿಕೆ ಬೆಳೆಗಳ ನಷ್ಟ ಹಾಗೂ ಮೂಲಸೌಕರ್ಯ ಹಾನಿಗಳಿಗೆ 722.06 ಕೋಟಿ ರೂ. ಪರಿಹಾರ ಕೋರಿ ಕೇಂದ್ರ ಸಕರ್ಾರಕ್ಕೆ ಸಲ್ಲಿಸಿದ್ದ ಬೇಡಿಕೆಯ ಈ ಪೈಕಿ 546.21 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಈ ಮೊತ್ತದಲ್ಲಿ ರೈತರ ಖಾತೆಗಳಿಗೆ ಪರಿಹಾರ ಜಮಾ ಮಾಡಲು ಕ್ರಮಕೈಗೊಳ್ಳಲಾಗಿದೆ ಎಂದು ಕಂದಾಯ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತಾ ಮತ್ತು ಜೀವನೋಪಾಯ ಸಚಿವ ಆರ್. ವಿ.ದೇಶಪಾಂಡೆ ಅವರು ತಿಳಿಸಿದ್ದಾರೆ.
ರಾಜ್ಯ ವಿಧಾನಸಭೆಯಲ್ಲಿ ಸೋಮವಾರ ಪ್ರಶ್ನೋತ್ತರ ಕಲಾಪ ವೇಳೆ ಶಾಸಕ ಕೆ. ಜಿ. ಬೋಪಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ಕೊಡಗು ಸೇರಿದಂತೆ ಪ್ರವಾಹ ಪೀಡಿತ ಎಂಟು ಜಿಲ್ಲೆಗಳಲ್ಲಿ ಹಾನಿಗಳಿಗಾಗಿ ರಾಷ್ಟ್ರೀಯ ಪ್ರಕೃತಿ ವಿಕೋಪ ನಿಧಿ (ಎನ್.ಡಿ.ಆರ್.ಎಫ್) ಯ ಮಾರ್ಗಸೂಚಿಗಳನ್ವಯ ಕೋರಲಾದ ಪರಿಹಾರದ ಪ್ರಸ್ತಾವನೆಗೆ ಸಂಬಂಧಿಸಿದಂತೆ ಕೇಂದ್ರ ಸಕರ್ಾರವು 546.21 ಕೋಟಿ ರೂ. ಅನುದಾನ ಮಂಜೂರು ಮಾಡಿದೆ. ಈ ಮೊತ್ತವನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಪರಿಹಾರವನ್ನು ವಿತರಿಸಲು ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಕೊಡಗು ಜಿಲ್ಲೆಗೆ ಸಂಬಂಧಿಸಿದ ತುತರ್ು ಕಾಮಗಾರಿಗಳಿಗೆ 25 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಅಲ್ಲದೆ, ವಿವಿಧ ಇಲಾಖೆಗಳ ಮೂಲಕ ಮೂಲಸೌಕರ್ಯ ಕಾಮಗಾರಿಗಳ ಅನುಷ್ಠಾನಗೊಳಿಸಲು 85 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ವಿವರಿಸಿದರು.
ಕೊಡಗು ಜಿಲ್ಲೆಯಲ್ಲಿ ಸುಮಾರು 302 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಅಂತೆಯೇ, ಈ ಕಾಮಗಾರಿಗಳನ್ನು ಕೈಗೊಳ್ಳಲು ಕನರ್ಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ 1999 ರ 4 (ಜಿ) ವಿನಾಯತಿ ನೀಡಲಾಗಿದೆ. ಅಲ್ಲದೆ ಉತ್ತಮ ಗುಣಮಟ್ಟದ ಸೇವೆಯಲ್ಲಿ ಸಮಂಜಸ ದರದಲ್ಲಿ ಸಂಗ್ರಹಿಸುವುದನ್ನು ಸಂಗ್ರಹಣಾ ಪ್ರಾಧಿಕಾರವು ದೃಢಪಡಿಸಿಕೊಳ್ಳಲು ಸೂಚಿಸಲಾಗಿದೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿನ ಜಿಲ್ಲಾ ಮಟ್ಟದ ಸಮಿತಿಗಳಲ್ಲಿ ಸಂಬಂಧಪಟ್ಟ ಇಲಾಖೆಗಳ ಕ್ರಿಯಾಯೋಜನೆಗಳನ್ನು ಅನುಮೋದನೆ ಪಡೆದ ನಂತರ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ಆರ್. ವಿ. ದೇಶಪಾಂಡೆ ಅವರು ಮಾಹಿತಿ ನೀಡಿದರು.
ಹೊಸದಾಗಿ ರಾಜ್ಯದಲ್ಲಿ 800 ಮಂದಿ ಸವರ್ೆಯರ್ ಗಳನ್ನು ನೇಮಕ ಮಾಡಲಾಗಿದೆ:
ರಾಜ್ಯದಲ್ಲಿ ಹೊಸದಾಗಿ 800 ಮಂದಿ ಸವರ್ೆಯರ್ಗಳನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ವಿಧಾನಸಭೆಗೆ ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಶಾಸಕ ಹಡಗೂರು ಎಚ್.ವಿಶ್ವನಾಥ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೊಸದಾಗಿ ನೇಮಕವಾದ ಸವರ್ೆಯರ್ಗಳ ಪೈಕಿ 33 ಮಂದಿಯನ್ನು ಮೈಸೂರು ಜಿಲ್ಲೆಗೂ ಹಾಗೂ ಮೂರು ಮಂದಿಯನ್ನು ಹುಣಸೂರು ತಾಲ್ಲೂಕಿಗೂ ನೇಮಿಸಲಾಗುವುದು.ಬಾಕಿ ಇರುವ ಜಮೀನಿನ ಅಳತೆಯನ್ನು ಶೀಘ್ರವಾಗಿ ಮುಗಿಸಲು ಕ್ರಮ ಕೈಗೊಳ್ಳಲಾಗುವುದು
ಎಂದರು.
ಕಳೆದ 2015ರಲ್ಲಿ ಹುಣಸೂರು ತಾಲ್ಲೂಕಿನಲ್ಲಿ ಪೋಡಿ ಮುಕ್ತ ಗ್ರಾಮ ಯೋಜನೆಯನ್ನು ಪ್ರಾರಂಭಿಸಿದ್ದು, 211 ಗ್ರಾಮಗಳ ಪೈಕಿ 122 ಗ್ರಾಮಗಳಲ್ಲಿ ಜಮೀನಿನ ಅಳತೆ ಪೂರೈಸಲಾಗಿದೆ.71 ಗ್ರಾಮಗಳಲ್ಲಿ ದುರಸ್ತಿ ಮಾಡಲಾಗಿದೆ.51 ಗ್ರಾಮಗಳಲ್ಲಿ ದುರಸ್ತಿ ಮಾಡಬೇಕಾಗಿದೆ.57 ಗ್ರಾಮಗಳನ್ನು ದುರಸ್ತಿಗೊಳಿಸಿ ಆರ್ಟಿಸಿ ಹಿಂಡೀಕರಣ ಮಾಡಲಾಗಿದೆ.14 ಗ್ರಾಮಗಳ ಆರ್ಟಿಸಿ ಹಿಂಡೀಕರಣ ಮಾಡಲು ಬಾಕಿ ಇದ್ದು, ಜಮೀನಿನ ಅಳತೆ 89 ಗ್ರಾಮಗಳಲ್ಲಿ ಮಾಡಬೇಕಾಗಿದ್ದು, ಶೀಘ್ರವೇ ಮಾಡುವ ಭರವಸೆ
ನೀಡಿದರು.
ಇದಕ್ಕೂ ಮುನ್ನ ಮಾತನಾಡಿದ ಶಾಸಕರು, ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಕೊಟ್ಟಂತ ಜಮೀನಿಗೆ ಇನ್ನೂ ಹಕ್ಕುಪತ್ರ ದೊರೆತಿಲ್ಲ. ದರ್ಕಾಸ್ತು ಭೂಮಿಗೆ ಪೋಡಿ ಮುಕ್ತ ಆಂದೋಲ ಕೈಗೊಳ್ಳಲು ವಿಶೇಷ ತಂಡ ರಚಿಸಿ ಕಾಲಮಿತಿಯಲ್ಲಿ ಪೋಡಿ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು.
200 ಕೋಟಿ ವಿಶೇಷ ಅನುದಾನ:
ಪ್ರವಾಹ ಹಾಗೂ ಭೂ ಕುಸಿತ ಸೇರಿದಂತೆ ಅತಿವೃಷ್ಟಿಗೆ ಒಳಗಾಗಿದ್ದ ಕೊಡಗು ಸೇರಿದಂತೆ 8 ಜಿಲ್ಲೆಗಳಿಗೆ 200 ಕೋಟಿ ವಿಶೇಷ ಅನುದಾನ ಒದಗಿಸಲಾಗಿದೆ ಎಂದು ಬಿಜೆಪಿ ಶಾಸಕ ಕೆ.ಜಿ.ಬೋಪಯ್ಯ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು.
ಇದರಲ್ಲಿ ಕೊಡಗು ಜಿಲ್ಲೆಗೆ 85 ಕೋಟಿ ರೂ.ಅನುದಾನ ಒದಗಿಸಲಾಗಿದೆ.ಎನ್ಡಿಆರ್ಎಫ್ ಮಾರ್ಗಸೂಚಿ ಪ್ರಕಾರ 722.06 ಕೋಟಿ ರೂ.ಪರಿಹಾರ ಕೋರಿದ್ದು, ಈ ಪೈಕಿ 546.21 ಕೋಟಿ ಅನುದಾನ ಮಂಜೂರು ಮಾಡಿದೆ.ಈ ಪೈಕಿ ಕೊಡಗಿಗೂ ಇನ್ನೆರಡು ಮೂರು ದಿನಗಳಲ್ಲಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದರು.
ಡಿಸೆಂಬರ್ 30ರೊಳಗೆ ಕೊಡಗು ಜಿಲ್ಲೆ ಬೆಳೆ ಪರಿಹಾರವಾಗಿ 103.82 ಕೋಟಿ ರೂ.ಅನ್ನು ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುವುದು.ಅತಿವೃಷ್ಟಿಯಿಂದ ಹಾನಿಗೀಡಾದ ಮನೆಗಳಿಗಾಗಿ 27 ಕೋಟಿ ರೂ.ಅನುದಾನ ಒದಗಿಸಲಾಗಿದೆ.ಮೂಲಸೌಕರ್ಯ ಕಾಮಗಾರಿಗೆ 85 ಕೋಟಿ ರೂ.ಬಿಡುಗಡೆ ಮಾಡಿದ್ದು, ಮೂಲಸೌಕರ್ಯ ದುರಸ್ತಿ ಕಾರ್ಯ ಪ್ರಗತಿಯಲ್ಲಿದೆ ಎಂದು ಸಚಿವರು
ತಿಳಿಸಿದರು.