ಜು.21ಕ್ಕೆ ಧರ್ಮ ಜಾಗೃತಿ ಸಮ್ಮೇಳನ

ಬೆಂಗಳೂರು, ಜುಲೈ 19  ವೀರಶೈವ ಲಿಂಗಾಯತ ಯುವ ವೇದಿಕೆಯು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ, ಡಾ.ವೀರಸೋಮೇಶ್ವರ ರಾಜ ದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಬೆಳ್ಳಿ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ ಧರ್ಮ ಜಾಗೃತಿ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಯತಶ್ವರಿ ಶಿವಕುಮಾರ ಸ್ವಾಮೀಜಿ ತಿಳಿಸಿದರು. 

   

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮ ಜುಲೈ 21ರ ಭಾನುವಾರ 10 ಗಂಟೆಗೆ ಅರಮನೆ ಮೈದಾನದ ಗಾಯತ್ರಿ ವಿಹಾರ ದಲ್ಲಿ ನಡೆಯಲಿದೆ. ವೀರಶೈವ ಲಿಂಗಾಯತ ಯುವ ವೇದಿಕೆ ರಾಜ್ಯಾಧ್ಯಕ್ಷ ಪ್ರಶಾಂತ್ ಕಲ್ಲೂರ್ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸಲಿದ್ದು, ಬಿಬಿಎಂಪಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಅಧ್ಯಕ್ಷತೆ ವಹಿಸಲಿದ್ದಾರೆ  ಎಂದರು. 

   

ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವರಾದ ಸದಾನಂದಗೌಡ, ಸುರೇಶ್ ಅಂಗಡಿ, ಸಚಿವ ಡಿ.ಕೆ ಶಿವಕುಮಾರ್, ಡಾ.ಸಿ.ಎನ್. ಅಶ್ವಥ್ ನಾರಾಯಣ್,  ಸಮುದಾಯದ ಹಿರಿಯ ಮುಖಂಡರಾದ ಶಾಮನೂರು ಶಿವಶಂಕರಪ್ಪ, ಬಿ.ಎಸ್. ಪರಮೇಶ್ವರಯ್ಯ, ಮಾಜಿ ಉಪಮೇಯರ್ ಪುಟ್ಟರಾಜು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.