ಧಾರ್ಮಿಕ ಆಚರಣೆಗಳು ಸಮಾಜದಲ್ಲಿ ಪ್ರೀತಿ, ಸಹೋದರತೆ ಬೆಳೆಸುತ್ತವೆ: ವಾಮದೇವ ಮಹಾಂತ ಸ್ವಾಮೀಜಿ
Religious practices foster love and brotherhood in society: Vamadeva Mahanta Swamiji
ಲೋಕದರ್ಶನ ವರದಿ
ಕಂಪ್ಲಿ, 26: ಮಠ, ಮಂದಿರ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಸಮಾಜವನ್ನು ಸಂಘಟಿಸುವ ಕೇಂದ್ರಗಳಾಗಿದ್ದು, ಪರಸ್ಪರ ಪ್ರೀತಿ, ಸಹೋದರತೆ ಮತ್ತು ಸಹಕಾರದ ಮನೋಭಾವ ಬೆಳೆಸುತ್ತವೆ ಎಂದು ಹಂಪಿ ಸಾವಿರ ದೇವರ ಮಹಾಂತ ಮಠದ ವಾಮದೇವ ಮಹಾಂತ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು.
ತಾಲೂಕಿನ ಎಮ್ಮಿಗನೂರು ಗ್ರಾಮದಲ್ಲಿ ಬುಧವಾರ ನಡೆದ ಶ್ರೀ ಮಲ್ಲಿಕಾರ್ಜುನ ದೇವರ ನೂತನ ಶಿಲಾಮೂರ್ತಿಗಳ ಪ್ರಾಣಪ್ರತಿಷ್ಠಾಪನೆ ನಂತರ ನಡೆದ ಧರ್ಮಸಭೆಯ ದಿವ್ಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಮಾನವನ ಜೀವನ ಕೇವಲ ಲೌಕಿಕ ಸುಖ-ಭೋಗಗಳಿಗೆ ಸೀಮಿತವಾಗಿರಬಾರದು. ಆಧ್ಯಾತ್ಮಿಕ ಚಿಂತನೆ, ಧರ್ಮ ಮತ್ತು ನೈತಿಕತೆಯ ಹಾದಿಯಲ್ಲಿ ಸಾಗಿದಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ ಎಂದು ಅವರು ಹೇಳಿದರು.
ಪ್ರತಿದಿನ ಬೆಳಗ್ಗೆ ಹಾಗೂ ವಿಶೇಷವಾಗಿ ಸಂಜೆ ವೇಳೆ ಮನೆಯಲ್ಲಿ ಭಕ್ತಿ, ದೇವರ ಧ್ಯಾನ, ಭಜನೆ ಹಾಗೂ ಶ್ಲೋಕ ಪಠಣದ ವಾತಾವರಣ ನಿರ್ಮಿಸಬೇಕು. ಇದರಿಂದ ಮಕ್ಕಳಲ್ಲಿ ಉತ್ತಮ ಸಂಸ್ಕಾರ, ಧಾರ್ಮಿಕ ಮೌಲ್ಯಗಳು ಹಾಗೂ ಭಾರತೀಯ ಸಂಸ್ಕೃತಿಯ ಅರಿವು ಬೆಳೆಯುತ್ತದೆ ಎಂದರು.
ದೇವಾಲಯ ಹಾಗೂ ಮಠಗಳಲ್ಲಿ ನಡೆಯುವ ಸೇವೆಗಳು ದೇವರಿಗೆ ಸಲ್ಲಿಸುವ ಅತ್ಯುನ್ನತ ಸೇವೆಯಾಗಿದ್ದು, ಇಂತಹ ಧಾರ್ಮಿಕ ಪರಂಪರೆಗಳನ್ನು ಮುಂದಿನ ಪೀಳಿಗೆಗೂ ಉಳಿಸಿ ಬೆಳೆಸುವ ಅಗತ್ಯವಿದೆ ಎಂದು ವಾಮದೇವ ಮಹಾಂತ ಸ್ವಾಮೀಜಿ ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 