ಸಾರ್ವಜನಿಕರ ಹಿತದೃಷ್ಟಿಯಿಂದ ಹಳೆ ಆಸ್ಪತ್ರೆ ಕಟ್ಟಡಕ್ಕೆ ತಹಶೀಲ್ದಾರ್ ಕಚೇರಿ ಸ್ಥಳಾಂತರಿಸಿ
Relocate the Tahsildar's office to the old hospital building in the public interest
ಲೋಕದರ್ಶನ ವರದಿ
ಗದಗ, ಸೆ. 3: ಗದಗ ತಹಶೀಲ್ದಾರ್ ಕಚೇರಿಯನ್ನು ಹೊಸದಾಗಿ ನಿರ್ಮಿಸುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಜಿಲ್ಲಾ ಆಡಳಿತ ಭವನದ ಸಮೀಪದ ಸಾಹಿತ್ಯ ಭವನಕ್ಕೆ ಸ್ಥಳಾಂತರಿಸಿರುವುದು ಸಾರ್ವಜನಿಕರಿಗೆ, ವಿಶೇಷವಾಗಿ ಬೆಟಗೇರಿ ಭಾಗದ ಜನರಿಗೆ ಅನಾನುಕೂಲ ಉಂಟುಮಾಡುತ್ತಿದೆ ಎಂದು ಬೆಟಗೇರಿ ರೈಲ್ವೆ ಹೋರಾಟ ಸಮಿತಿ ಅಧ್ಯಕ್ಷ ಗಣೇಶಸಿಂಗ್ ಬಾಳೀ ಹೇಳಿದರು.
ಗ್ರಾಮೀಣ ಪ್ರದೇಶ ಹಾಗೂ ನಗರದ ದೂರದ ಭಾಗಗಳಿಂದ ಬರುವ ಸಾರ್ವಜನಿಕರು ಮತ್ತು ಹಿರಿಯ ನಾಗರಿಕರಿಗೆ ಸೂಕ್ತ ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ, ಹೆಚ್ಚಿನ ಹಣ ನೀಡಿ ರಿಕ್ಷಾ ಬಾಡಿಗೆ ಮಾಡಿಕೊಂಡು ಸ್ಥಳಾಂತರಗೊಂಡ ತಹಶೀಲ್ದಾರ್ ಕಚೇರಿಗೆ ತೆರಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಬಡ ಹಾಗೂ ಸಾಮಾನ್ಯ ಜನರಿಗೆ ಹೆಚ್ಚುವರಿ ಆರ್ಥಿಕ ಹೊರೆ ಬೀಳುತ್ತಿದೆ ಎಂದು ಅವರು ತಿಳಿಸಿದರು.
ಈ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮನವರಿಕೆ ಮಾಡಿಕೊಂಡು, ದೂರದ ಸ್ಥಳಕ್ಕೆ ತಹಶೀಲ್ದಾರ್ ಕಚೇರಿ ಸ್ಥಳಾಂತರಿಸುವ ಬದಲು ಮಹಾತ್ಮ ಗಾಂಧಿ ವೃತ್ತದ ಸಮೀಪದ ಹಳೆ ಜಿಲ್ಲಾ ಆಸ್ಪತ್ರೆ ಕಟ್ಟಡ ಅಥವಾ ಹಳೆ ಕೋರ್ಟ್ ಕಟ್ಟಡಕ್ಕೆ ಸ್ಥಳಾಂತರಿಸಬೇಕು ಎಂದು ಅವರು ಆಗ್ರಹಿಸಿದರು.
ನೂತನ ತಹಶೀಲ್ದಾರ್ ಕಚೇರಿ ಕಟ್ಟಡ ಪೂರ್ಣಗೊಳ್ಳುವವರೆಗೆ ಹಳೆ ಜಿಲ್ಲಾ ಆಸ್ಪತ್ರೆ ಅಥವಾ ಹಳೆ ಕೋರ್ಟ್ ಕಟ್ಟಡದಲ್ಲೇ ತಹಶೀಲ್ದಾರ್ ಕಚೇರಿ ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಂಡರೆ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಈ ಬೇಡಿಕೆಗೆ ಸ್ಪಂದಿಸದಿದ್ದರೆ ಹೋರಾಟ ಅನಿವಾರ್ಯವಾಗಲಿದೆ ಎಂದು ಗಣೇಶಸಿಂಗ್ ಬಾಳೀ ಎಚ್ಚರಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 