ಶೀಘ್ರದಲ್ಲಿಯೇ ಜುಗೂಳ, ಮಂಗಾವತಿ, ಶಹಾಪುರ ಗ್ರಾಮಗಳ ಸ್ಥಳಾಂತರ: ಶಾಸಕ ಕಾಗೆ
Relocation of Jugul, Mangavati, Shahapur villages to be done soon: MLA Kage
ಅಥಣಿ 12: ಕಾಗವಾಡ ಮತಕ್ಷೇತ್ರದ ಜುಗೂಳ, ಮಂಗಾವತಿ ಮತ್ತು ಶಹಾಪುರ ಗ್ರಾಮಗಳನ್ನು ಅತೀ ಶೀಘ್ರದಲ್ಲಿಯೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುವುದು ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು.
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡುತ್ತಿದ ಅವರು ಈ ಸಂಬಂಧ ಈಗಾಗಲೇ ನಾನು ಸಿ.ಎಮ್.ಸಿದ್ದರಾಮಯ್ಯ ಹಾಗೂ ಡಿ.ಸಿ.ಎಮ್ ಡಿ.ಕೆ.ಶಿವಕುಮಾರೊಂದಿಗೆ ಚರ್ಚಿಸಿದ್ದು, ಕೆಲವೇ ತಿಂಗಳಲ್ಲಿಯೇ ಸ್ಥಳಾಂತರ ಕಾರ್ಯ ಪ್ರಾರಂಭಿಸುವುದಾಗಿ ಹೇಳಿದರು. ಮಳೆಗಾಲದ ಅವಧಿಯಲ್ಲಿ ಈ ಮೂರೂ ಗ್ರಾಮಗಳಲ್ಲಿ ಕೃಷ್ಣಾ ನದಿಯ ನೀರು ತಿಂಗಳು ಗಟ್ಟಲೇ ನಿಲ್ಲುತ್ತದೆ. ಇದರಿಂದ ಈ ಗ್ರಾಮಗಳ ಗ್ರಾಮಸ್ಥರು ಸಂಬಂಧಿಕರ ಮನೆಗಳಲ್ಲಿ ಆಶ್ರಯ ಪಡೆಯುತ್ತಾರೆ. ಹೀಗಾಗಿಯೇ ಅತೀ ಶೀಘ್ರದಲ್ಲಿಯೇ ಗ್ರಾಮಗಳ ಸ್ಥಳಾಂತರಕ್ಕೆ ನಿರ್ಧರಿಸಲಾಗಿದೆ ಎಂದರು.
ಮಂಗಾವತಿ ಕಾಗವಾಡ ಮಧ್ಯದ ರಸ್ತೆಯ ಡಾಂಬರೀಕರಣ ಕಾಮಗಾರಿಗೆ ಅನುದಾನ ಮಂಜೂರಾಗಿದ್ದು, ಟೆಂಡರ್ ಪ್ರಕ್ರಿಯೆ ಕೆಲವೇ ದಿನಗಳಲ್ಲಿಯೇ ಪೂರ್ಣಗೊಂಡು ಶಂಕುಸ್ಥಾಪನೆ ನೆರವೇರಿಸುವೆ ಎಂದ ಅವರು ಮತಕ್ಷೇತ್ರದ 60 ಗ್ರಾಮಗಳಲ್ಲಿ 72 ಸಮುದಾಯ ಭವನ ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಮುಂದಿನ ಕೆಲವೇ ತಿಂಗಳಲ್ಲಿಯೇ ಪೂರ್ಣಗೊಳ್ಳುತ್ತವೆ ಎಂದರು. ಜಿ.ಪಂ ಅಧಿಕಾರಿ ವೀರಣ್ಣಾ ವಾಲಿ, ಕಿರಿಯ ಅಭಿಯಂತರ ಮಡಿವಾಳ ಪಾಟೀಲ, ಧುರೀಣರಾದ ಅನೀಲ ಸಿಂಧೆ, ಹರ್ಷ ಮಗದುಮ್, ಸುನೀಲ ತೇಲಿ, ಸುನೀಲ ಪಾಟೀಲ, ಶ್ರೀಮಂತ ಸಲಗರೆ, ಅನೀಲ ಸತ್ತಿ, ಬಾಲಾಜಿ ಪಾಟೀಲ, ಅನೀಲಕುಮಾರ ಪಾಟೀಲ, ಈಶ್ವರ ಕೋಳಿ, ವಸಂತ ಗಾಡಿವಡ್ಡರ, ಅಣ್ಣಾಸಾಹೇಬ ಪಾಟೀಲ, ಕಾಕಾ ಪಾಟೀಲ, ಬಿ.ಐ.ಪಾಟೀಲ, ಸುರೇಶ ಪಾಟೀಲ, ರಾಜಗೌಡ ಪಾಟರ್, ರವೀಂದ್ರ ವ್ಹಾಟೆ, ರಾಜು ಕಡೋಲಿ, ಅನೀಲ ಕಡೋಲಿ, ಉಮೇಶ ಪಾಟೀಲ, ಅವಿನಾಶ ಪಾಟೀಲ, ತಾತ್ಯಾಸಾಹೇಬ ಪಾಟೀಲ, ವಸಂತ ಖೋತ, ರಾಹುಲ ಶಹಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಮಂಗಾವತಿ ಗ್ರಾಮದಲ್ಲಿ ಮಹಾದೇವ ದೇವರ ಗುಡಿಯ ಹತ್ತಿರ ಸಮುದಾಯ ಭವನಕ್ಕೆ, ಭೂಮಿಪೂಜೆ, ಜುಗೂಳ ಗ್ರಾಮದಲ್ಲಿ ಯಲ್ಲಮ್ಮದೇವಿ ಗುಡಿಯ ಹತ್ತಿರ ಸಮುದಾಯ ಭವನಕ್ಕೆ, ಶಹಾಪೂರ ಗ್ರಾಮದಲ್ಲಿ ಭರಮಪ್ಪ ಗುಡಿಯ ಹತ್ತಿರ ಸಮುದಾಯ ಭವನಕ್ಕೆ, ಮೊಳವಾಡ ಗ್ರಾಮದಲ್ಲಿ ಮಾರುತಿ ಗುಡಿಯ ಹತ್ತಿರ ಸಮುದಾಯ ಭವನಕ್ಕೆ, ಕುಸನಾಳ ಗ್ರಾಮದಲ್ಲಿ ಭಗವಾನ 108 ಶಾಂತಿನಾಥ ಜೈನ ಬಸದಿ ಹತ್ತಿರ ಸಮುದಾಯ ಭವನಕ್ಕೆ, ಉಗಾರ-ಬುದ್ರುಕ ಪೀರ ಮಮ್ಮುಲಾಲಬಾಬಾ ದರ್ಗಾ ಜೀರ್ಣೋದ್ಧಾರ ಕಾಮಗಾರಿಗೆ, ಭರಮಪ್ಪ ದೇವಸ್ಥಾನದ ಹತ್ತಿರ ಸಮುದಾಯ ಭವನಕ್ಕೆ, ಮರಗುಬಾಯಿ ದೇವರ ಗುಡಿಯ ಹತ್ತಿರ ಸಮುದಾಯ ಭವನಕ್ಕೆ, ಫರೀದಖಾನವಾಡಿ ಲಕ್ಷ್ಮೀ ದೇವಸ್ಥಾನದ ಹತ್ತಿರ ಸಮುದಾಯ ಭವನಕ್ಕೆ, ಮಂಗಸೂಳಿ ವೀರಶೈವ ಪಂಚಮಸಾಲಿ ಸಮಾಜ ಸೇವಾ ಸಂಘದ ಸಮುದಾಯ ಭವನಕ್ಕೆ, ಬಿರೋಬಾ ದೇವರ ಪಾಲಕಿ ಗೃಹದ ಹತ್ತಿರ ಸಮುದಾಯ ಭವನಕ್ಕೆ, ಮಸೋಬಾ ದೇವಸ್ಥಾನದ ಹತ್ತಿರ ಸಮುದಾಯ ಭವನಕ್ಕೆ ಶಾಸಕ ಕಾಗೆ ಭೂಮಿ ಪೂಜೆ ನೆರವೇರಿಸಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 