ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣನನ್ನು ಹೋರಾಟಗಾರರನ್ನು ಸ್ಮರಿಸಿಕೊಳ್ಳಿ
Remember the fighters Rani Chennamma and Sangolli Rayanna
ಲೋಕದರ್ಶನ ವರದಿ
ಇಂಡಿ 09 : ವಿದ್ಯಾರ್ಥಿಗಳು ರಾಣಿ ಚೆನ್ನಮ್ಮ ಸಂಗೊಳ್ಳಿ ರಾಯಣ್ಣನಂತಹ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿಕೊಂಡು ತಮ್ಮ ಜೀವನದಲ್ಲಿ ಮುಂದುವರಿಯಬೇಕು ಎಂದು ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ ಹೇಳಿದರು. ಅವರು ನಗರದ ಶರಣು ವಿದ್ಯಾವರ್ಧಕ ಸಂಸ್ಥೆಯ ವೀರರಾಣಿ ಕಿತ್ತೂರು ಚೆನ್ನಮ್ಮ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶಾಂತೇಶ್ವರ ಸಂಸ್ಕೃತ ಪಾಠ ಶಾಲೆಯ 16ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದ ಪಾವನ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ. ನಮ್ಮ ದೇಶಕ್ಕೆ ದೊಡ್ಡ ಇತಿಹಾಸವಿದೆ. ದೇಶದ ಸ್ವತಂತ್ರಕ್ಕಾಗಿ ಅಂದಾಜು ಮೂರು ಲಕ್ಷ 50,000 ಜನ ಪ್ರಾಣ ಕಳೆದುಕೊಂಡಿದ್ದಾರೆ. ಅಂತಹವರ ಪ್ರಾಣತ್ಯಾಗದ ಬಗ್ಗೆ ನಾವೆಲ್ಲಾ ಸ್ಮರಿಸಬೇಕು.
ನಾವೆಲ್ಲ ವಿದೇಶಿ ಮೋಹಕ್ಕೆ ಒಳಗಾಗದೆ ಭಾರತೀಯ ಸಂಸ್ಕೃತಿಯನ್ನು ಅಪ್ಪಿಕೊಳ್ಳಬೇಕು ಎಂದರು. ಕಿತ್ತೂರು ರಾಣಿ ಚೆನ್ನಮ್ಮ ಅವರ ಹೆಸರಿನಲ್ಲಿ, ಹಿಂಡಿಯವರು ಶಾಲೆ ತೆರೆದಿದ್ದು ಸಂತಸ ತಂದಿದೆ. ಇಂಡಿ ನಾಗರಿಕರು ಅವರಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ವಿವಿಧ ಕಾರ್ಯ ಚಟುವಟಿಕೆಗಳಲ್ಲಿ ಪ್ರಥಮ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪಾರಿತೋಷಕ ವಿತರಣೆ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಎಂ.ಎಸ್. ಇಂಡಿ ಅವರು ವಹಿಸಿದ್ದರು. ವೇದಿಕೆಯಲ್ಲಿ ಜೆ ಡಿ ಎಸ್ ತಾಲೂಕಾ ಅಧ್ಯಕ್ಷ ಬಿ.ಡಿ.ಪಾಟೀಲ, ನಿವೃತ್ತ ಶಿಕ್ಷಕ ಸುಧಾಕರ ಗೌಡ ಬಿರಾದಾರ, ಪುರಸಭೆ ಮಾಜಿ ಸದಸ್ಯ ಸಿದ್ದು ಡಂಗಾ, ಪಂಚಮಸಾಲಿ ಸಮಾಜದ ಪ್ರಧಾನ ಕಾರ್ಯದರ್ಶಿ ಶಿವಾನಂದ ಚಾಳಿಕಾರ, ಪತ್ರಕರ್ತ ಉಮೇಶ ಬಳಬಟ್ಟಿ, ಸಂಸ್ಥೆಯ ಉಪಾಧ್ಯಕ್ಷ ಎಸ್.ಎಸ್.ಮಣೂರ, ಶಿಕ್ಷಕರಾದ ಸುರೇಶ ಮಿರಗಿ, ಆಕಾಶ ಇಂಡಿ, ಶ್ರೀಮತಿ ಎಸ್.ಎಸ್. ಇಂಡಿ, ಸೇರಿದಂತೆ ಇನ್ನಿತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 