ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ಪ್ರತಿಯೊಬ್ಬ ಭಾರತೀಯನ ಕರ್ತವ್ಯ: ಶಾಸಕ ಪಠಾಣ್
Remembering freedom fighters is the duty of every Indian: MLA Pathan
ಶಿಗ್ಗಾಂವಿ 16: ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ ಎಂದು ಶಾಸಕ ಯಾಸೀರ್‌ಖಾನ್ ಪಠಾಣ್ ಹೇಳಿದರು. ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದೇಶದಲ್ಲಿ ಹೆಚ್ಚಿನ ಕೈಗಾರಿಕೆಗಳನ್ನು ಸ್ಥಾಪಿಸಿ ಸ್ವದೇಶಿ ಉತ್ಪನ್ನಗಳ ತಯಾರಿಕೆ ಹಾಗೂ ಮಾರುಕಟ್ಟೆ ವ್ಯವಸ್ಥೆಗೆ ಉತ್ತೇಜನ ನೀಡಿದರೆ ನಿರುದ್ಯೋಗ ನಿವಾರಣೆ ಸಾಧ್ಯವಾಗಲಿದೆ ಎಂದರು.
ಶಿಗ್ಗಾಂವಿ ತಾಲೂಕು ಕ್ರೀಡಾಂಗಣವನ್ನು ಅಭಿವೃದ್ಧಿಪಡಿಸಿ ಸಿಂಥೆಟಿಕ್ ಒಳಾಂಗಣ ನಿರ್ಮಿಸಲಾಗುತ್ತಿದೆ. ಕ್ರೀಡಾ ಪ್ರತಿಭೆಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಿದರೆ ಒಲಿಂಪಿಕ್ಸ್‌ನಲ್ಲಿ ಗೆಲುವು ಸಾಧಿಸಲು ಅವರು ಪ್ರಯತ್ನಿಸಲಿದ್ದಾರೆ ಎಂದರು.
ಕ್ಷೇತ್ರದ ಅಭಿವೃದ್ಧಿಗೆ ?150 ಕೋಟಿ ಅನುದಾನ ದೊರೆತಿದ್ದು, 450 ದೇವಸ್ಥಾನಗಳ ಅಭಿವೃದ್ಧಿ ಕಾಮಗಾರಿಗಳು ಕೈಗೆತ್ತಿಕೊಳ್ಳಲಾಗಿದೆ. ಸವಣೂರು ತಾಲೂಕಿನಲ್ಲಿ 1,250 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಯೋಜನೆ ಜಾರಿಗೆ ?325 ಕೋಟಿ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು. ಗಂಗೇಬಾವಿ ಧಾರ್ಮಿಕ ಕ್ಷೇತ್ರದ ಅಭಿವೃದ್ಧಿಗೂ ಅನುದಾನ ನೀಡುವಂತೆ ಮನವಿ ಮಾಡಿರುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು. ಶಾಲಾ-ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು. ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 