ಜು.21 ರಂದು ಪಂ.ಬಸವರಾಜ ರಾಜಗುರು ಅವರ ಪುಣ್ಯಸ್ಮರಣೆ ಕಾರ್ಯಕ್ರಮ
Remembrance program of Pt. Basavaraja Rajaguru on June 21
ಧಾರವಾಡ ಜು.17: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸ್ವರಸಾಮ್ರಾಟ ಪಂ.ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ (ರಿ) ಟ್ರಸ್ಟ್, ಧಾರವಾಡ ವತಿಯಿಂದ ಪದ್ಮಭೂಷಣ, ಸ್ವರ ಸಾಮ್ರಾಟ ಪಂ. ಬಸವರಾಜ ರಾಜಗುರು ಅವರ 34ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಜುಲೈ 21, 2025 ರಂದು ಬೆಳಿಗ್ಗೆ 9:30 ಗಂಟೆಗೆ ಧಾರವಾಡದ ಹೊಸಯಲ್ಲಾಪುರದಲ್ಲಿರುವ ಪಂ. ಬಸವರಾಜ ರಾಜಗುರು ಅವರ ಸಮಾಧಿ ಸ್ಮಾರಕ ಸ್ಥಳದಲ್ಲಿ ಏರಿ್ಡಸಲಾಗಿದೆ.
ಪಂ.ಬಸವರಾಜ ರಾಜಗುರು ಅವರ ಸಮಾಧಿ ಸ್ಮಾರಕದಲ್ಲಿ ಪೂಜಾ ಕಾರ್ಯಕ್ರಮ ಹಾಗೂ ಸಂಗೀತ ನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಬೆಳಗಾವಿ ವಿಭಾಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಕೆ.ಹೆಚ್.ಚನ್ನೂರ, ಟ್ರಸ್ಟ್‌ನ ಅಧ್ಯಕ್ಷ ಚಂದ್ರಕಾಂತ ಬೆಲ್ಲದ, ಹಾಗೂ ಟ್ರಸ್ಟ್ ಸದಸ್ಯೆ ಭಾರತಿದೇವಿ ರಾಜಗುರು, ಡಾ. ಮುದ್ದುಮೋಹನ್, ಡಾ. ಜಿ.ಎಂ.ಹೆಗಡೆ, ಡಾ. ಉದಯಕುಮಾರ ದೇಸಾಯಿ, ನಿಜಗುಣ ರಾಜಗುರು ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹಾಗೂ ಪಂ.ಬಸವರಾಜ ರಾಜಗುರು ಅವರ ಶಿಷ್ಯರು ಮತ್ತು ಸಂಗೀತ ಅಭಿಮಾನಿಗಳು ಭಾಗವಹಿಸಬೇಕೆಂದು ಟ್ರಸ್ಟ್ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 