ಕಲಬುರಗಿಯಲ್ಲಿ ಸಿದ್ದರಾಮಯ್ಯ ಪ್ರತಿಮೆ ತೆರವು: ಕುರಬ ಸಮಾಜದ ಖಂಡನೆ

ಕಲಬುರಗಿಯಲ್ಲಿ ಸಿದ್ದರಾಮಯ್ಯ ಪ್ರತಿಮೆ ತೆರವು: ಕುರಬ ಸಮಾಜದ ಖಂಡನೆ  Removal of Siddaramaiah's statue in Kalaburagi: Kuruba community condemns the move


ವಿಜಯಪುರ, ಸೆ.18: ಕಲಬುರಗಿ ನಗರದಲ್ಲಿ ಕುರಬ ಸಮಾಜದ ಹೆಮ್ಮೆಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆಯನ್ನು ತೆರವುಗೊಳಿಸಿರುವ ಕ್ರಮವನ್ನು ವಿಜಯಪುರ ಜಿಲ್ಲಾ ಕುರಬರ ಸಂಘ ತೀವ್ರವಾಗಿ ಖಂಡಿಸಿದೆ.  

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ, ಕುರಬ ಸಮಾಜದ ಪ್ರಮುಖ ನಾಯಕರ ಪ್ರತಿಮೆಯನ್ನು ತೆರವುಗೊಳಿಸಿರುವುದು ಖಂಡನೀಯ. ಇದು ಸಮಾಜಕ್ಕೆ ಮಾಡಿರುವ ಅವಮಾನವಾಗಿದ್ದು, ಘಟನೆಯ ಮೂಲಕ ಕಾಂಗ್ರೆಸ್ ಪಕ್ಷ ಕುರಬ ಸಮಾಜವನ್ನು ಕೇವಲ ಮತಬ್ಯಾಂಕ್ ಆಗಿ ಬಳಸಿಕೊಳ್ಳುತ್ತಿದೆ ಎಂಬುದು ಸ್ಪಷ್ಟವಾಗಿದೆ ಎಂದು ಸಂಘದ ಉಪಾಧ್ಯಕ್ಷ ಸಂತೋಷ ಕುರಡಡ್ಡಿ ಆರೋಪಿಸಿದ್ದಾರೆ.  

ಸಿದ್ದರಾಮಯ್ಯ ಅವರ ಪ್ರತಿಮೆಯನ್ನು ತೆರವುಗೊಳಿಸಿದ ಸ್ಥಳದಲ್ಲೇ ಕೂಡಲೇ ಎಲ್ಲ ಗೌರವಗಳೊಂದಿಗೆ ಪುನರ್ಸ್ಥಾಪಿಸಬೇಕು. ಬೇಡಿಕೆಯನ್ನು ತಕ್ಷಣ ಈಡೇರಿಸದಿದ್ದರೆ, ವಿಜಯಪುರ ಜಿಲ್ಲಾ ಕುರಬರ ಸಂಘದ ನೇತೃತ್ವದಲ್ಲಿ ಮುಂದಿನ ದಿನಗಳಲ್ಲಿ ಬೀದಿಗಿಳಿದು ಬೃಹತ್ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.