ರೈತರ ಜಮೀನಿನ ಫಲವತ್ತತೆಗೆಕೆರೆ ಹೂಳು ತೆಗೆಯುವುದು : ದುಂಡಿಗೌಡ್ರ
Removing silt from lakes to improve the fertility of farmers' lands: Dundigowdra
ಶಿಗ್ಗಾವಿ 04 : ಜಲ ಸಂರಕ್ಷಣೆ, ಅಂತರ್ಜಲ ಬಲವರ್ಧನೆ ಮತ್ತು ರೈತರ ಜಮೀನಿನ ಫಲವತ್ತತೆ ಹೆಚ್ಚಿಸುವ ಉದ್ದೇಶದಿಂದ ತಾಲೂಕಿನ ಹೊಸೂರು- ಯತ್ತಿನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ರೈತ ಮುಖಂಡರುಗಳ ಬೇಡಿಕೆ ಮೇರೆಗೆ ಹೂಳು ತೆಗೆಯಲಾಗುವುದು ಎಂದು ಭಾರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು. ಪಟ್ಟಣದ ವರದಿಗಾರರೊಂದಿಗೆ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ದುಂಡಸಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಯತ್ತಿನಹಳ್ಳಿ ಗ್ರಾಮದ ಸುಮಾರು 35 ಎಕರೆ ವಿಸ್ತೀರ್ಣವುಳ್ಳ ಬೆಳ್ಳಿಗಟ್ಟಿ ಕೆರೆಯನ್ನು ಏ 07 ರಂದು ಹೂಳು ತೆಗೆಯುವಕಾರ್ಯಕ್ರಮ ದಿವ್ಯ ಸಾನಿಧ್ಯವಹಿಸಿ ಹಾವೇರಿಯ ಶ್ರೀ ಮ.ನಿ.ಪ್ರ ಸದಾಶಿವ ಮಹಾಸ್ವಾಮಿಗಳು ಹುಕ್ಕೇರಿಮಠ ಶ್ರೀಗಳು ಭೂಮಿ ಪೂಜೆ ನೆರವೇರಿಸಿ ಕೆರೆ ಹೂಳು ತೆಗೆಯುವ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಈ ಸಂದರ್ಭದಲ್ಲಿ ತಾಲೂಕಿನ ಗಣ್ಯರು ವಿವಿಧ ಸಂಘಟನೆಗಳ ಪದಾಧಿಕಾರಿಗಳು ರೈತರು,ಗ್ರಾಮಸ್ಥರು ಉಪಸ್ಥಿತರಿರುವರು ಎಂದು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 