ಖ್ಯಾತ ಹಿಂದುಸ್ತಾನಿ ಗಾಯಕಿ ರೋಹಿಣಿ ಮಹಿಳಾ ರತ್ನ ಪ್ರಶಸ್ತಿ
Renowned Hindustani singer Rohini Mahila Ratna Award
ಕಂಪ್ಲಿ23 ದಂಪತಿಗಳು ಪರಸ್ಪರ ಸಹಾಯ, ಸಹಕಾರದಿಂದ ದಾಂಪತ್ಯ ಜೀವನ ನಡೆಸಲು ಮುಂದಾಗಬೇಕು ಎಂದು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿ ಹೇಳಿದರು.
ಇತ್ತಚಿಗೆ ಬೆಳಗಾವಿ ಜಿಲ್ಲೆಯ ಶಿವಬಸವ ನಗರದ ನಾಗನೂರು ರುದ್ರಾಕ್ಷಿ ಮಠದಲ್ಲಿ ಅಪ್ರತಿಮ ವಾಗ್ಮಿ ಪದ್ಮಾವತಿ ಷಣ್ಮುಖಪ್ಪ ಅಂಗಡಿ ಅವರ 64ನೆಯ ಸ್ಮರಣೆಯಲ್ಲಿ ಹಮ್ಮಿಕೊಂಡ 'ಮಹಿಳಾ ರತ್ನ ಹಾಗೂ ಆದರ್ಶ ದಂಪತಿ' ಪ್ರಶಸ್ತಿ ಪ್ರದಾನ ಸಮಾರಂಭದ ಸಾನಿಧ್ಯವಹಿಸಿ ಮಾತನಾಡಿ ಸೆಪ್ಟೆಂಬರ್ 1 ರಿಂದ ಇಡೀ ರಾಜ್ಯಾದ್ಯಂತ ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ತತ್ವಾದರ್ಶಗಳನ್ನು ನಾಡಿನ ಜನತೆಗೆ ತಿಳಿಸುವ ದೃಷ್ಟಿಯಿಂದ "ಬಸವ ಸಂಸ್ಕೃತಿ ಅಭಿಯಾನ"ವನ್ನು ಹಮ್ಮಿಕೊಳ್ಳಲಾಗುತ್ತಿದ್ದು ನಾಡಿನ ಜನತೆ ಸಕ್ರಿಯವಾಗಿ ಪಾಲ್ಗೊಂಡು ಅಭಿಯಾನ ಯಶಸ್ವಿಗೊಳಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಆದರ್ಶ ದಂಪತಿ ಪ್ರಶಸ್ತಿ ಸ್ವೀಕರಿಸಿದರು ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷ ನಟ ಕೆ. ವಿ. ನಾಗರಾಜ ಮೂರ್ತಿ ಮಾತನಾಡಿದರು ಮಹಿಳಾ ರತ್ನ ಪ್ರಶಸ್ತಿ ಸ್ವೀಕರಿಸಿ ಖ್ಯಾತ ಹಿಂದುಸ್ತಾನಿ ಗಾಯಕಿ ರೋಹಿಣಿ ಗಂಗಾಧರಯ್ಯ ಕರಜಗಿಮಠ ಮಾತನಾಡಿ ಸಂಗೀತ ಕಲಿಯಲು ಯಾವುದೇ ಜಾತಿ ಮತಗಳ ಭೇದವಿಲ್ಲ. ಭಾರತೀಯ ಸಂಗೀತಕ್ಕೆ ಮನುಷ್ಯನನ್ನು ಆರೋಗ್ಯವಂತನನ್ನಾಗಿಸುವ ಶಕ್ತಿ ಇದೆ ಎಂದರು.
ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ನಟ ಕೆ ವಿ ನಾಗರಾಜ ಮೂರ್ತಿ ಅವರ ಧರ್ಮಪತ್ನಿ ಪತ್ರಕರ್ತೆ ಎಸ್ ಜಿತುಂಗರೇಣುಕ.ಹಿರಿಯ ಸಾಹಿತಿ ಸುನಂದ ಎಮ್ಮಿ ಪದ್ಮಾವತಿ ಷಣ್ಮುಖಪ್ಪ ಅಂಗಡಿ ಹಾಗೂ ರಾವ್ ಬಹದ್ದೂರ್ ಷಣ್ಮುಖಪ್ಪ ಅಂಗಡಿ ಅವರ ದಾಂಪತ್ಯ ಬದುಕಿನ ಕುರಿತು ಅತಿಥಿ ಉಪನ್ಯಾಸ ನೀಡಿದರು. ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕಿ ಉಜ್ವಲ ಹಿರೇಮಠ. ಶಿಲ್ಪಾ ಬೈರನಟ್ಟಿ ರಾಜಶೇಖರ ಪಾಟೀಲ ಸುಪಣ್ಣ ಶಿರಗುಪ್ಪಿ ಸೇರಿ ಅನೇಕರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 