ಖ್ಯಾತ ರಂಗ ಕಲಾವಿದ ರಾಜು ತಾಳಿಕೋಟಿ ಇನ್ನಿಲ್ಲ
Renowned theatre artist Raju Talikoti passes away
ತಾಳಿಕೋಟಿ 13; ತಾಳಿಕೋಟಿ ಪಟ್ಟಣದ ನಿವಾಸಿ ಉತ್ತರ ಕರ್ನಾಟಕದ ಜನಪ್ರಿಯ ರಂಗ ಕಲಾವಿದ ಚಲನಚಿತ್ರ ಹಾಸ್ಯ ನಟ ಧಾರವಾಡ ರಂಗಾಯಣದ ನಿರ್ದೇಶಕ ರಾಜು ತಾಳಿಕೋಟಿ ಅವರು ಹೃದಯಾಘಾತದಿಂದ ಸೋಮವಾರ ನಿಧನರಾಗಿದ್ದಾರೆ.
ಹೃದಯ ಸಂಬಂಧಿಸಿದ ಕಾಯಿಲೆಯಿಂದ ಬಳುತ್ತಿದ್ದ ಅವರನ್ನು ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಕೊನೆಯುಸಿರೆಳಿದಿದ್ದಾರೆ. ರಾಜು ತಾಳಿಕೋಟಿ ಅವರು ಮೂಲತ ತಾಳಿಕೋಟಿ ಪಟ್ಟಣದವರಾಗಿದ್ದು ಪ್ರಸಕ್ತ ಸಿಂದಗಿ ತಾಲೂಕಿನ ಚಿಕ್ಕ ಸಿಂದಗಿ ಗ್ರಾಮದಲ್ಲಿ ವಾಸಿಸುತ್ತಿದ್ದರು.
ಅವರ ಮೂಲ ಹೆಸರು ರಾಜೇಸಾಬ್ ಮಕ್ತೂಮಸಾಬ ತಾಳಿಕೋಟಿ. ಅವರು ಶ್ರೀ ಖಾಸ್ಗತೇಶ್ವರ ನಾಟಕ ಮಂಡಳಿಗೆ ಮಾಲೀಕರೂ ಆಗಿದ್ದರು, ಜೊತೆಗೆ ಧಾರವಾಡದ ಪ್ರಸಿದ್ಧ ರಂಗಾಯಣ ಸಂಸ್ಥೆಯ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು. ಕಿರುತೆರೆಯ ನಟನೆಯೊಂದಿಗೆ ಅವರು ಮನಸಾರೆ, ಅದ್ದೂರಿ, ಪಂಚರಂಗಿ ಹೀಗೆ ಕೆಲವು ಚಲನಚಿತ್ರಗಳಲ್ಲಿಯೂ ನಟಿಸಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಉತ್ತರ ಕರ್ನಾಟಕದ ಜವಾರಿ ಭಾಷೆಯ ತಮ್ಮ ಹಾಸ್ಯ ನಟನೆಯಿಂದಾಗಿ ರಾಜ್ಯದ ಜನರ ಮನೆಮಾತಾಗಿದ್ದರು. ಅವರಿಗೆ ಇಬ್ಬರು ಪತ್ನಿಯರಿದ್ದು ಇಬ್ಬರು ಗಂಡು ಹಾಗೂ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಸಂತಾಪ: ಖ್ಯಾತ ಹಾಸ್ಯ ಕಲಾವಿದ ರಾಜು ತಾಳಿಕೋಟಿ ಅವರ ಅಕಾಲಿಕ ನಿಧನಕ್ಕೆ ಮುಸ್ಲಿಂ ಧಾರ್ಮಿಕ ಮುಖಂಡ ಸಯ್ಯದ್ ಶಕೀಲ ಅಹ್ಮದ್ ಖಾಜಿ, ಮುದ್ದೇಬಿಹಾಳ ಮತಕ್ಷೇತ್ರ ಶಾಸಕರಾದ ಸಿ.ಎಸ್.ನಾಡಗೌಡ(ಅಪ್ಪಾಜಿ), ಮಾಜಿ ಶಾಸಕ ಎ.ಎಸ್.ಪಾಟೀಲ (ನಡಹಳ್ಳಿ), ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಆರ್ ಎಸ್ ಪಾಟೀಲ ಕೂಚಬಾಳ, ಜೆಡಿಎಸ್ ಜಿಲ್ಲಾ ಅಧ್ಯಕ್ಷ ಬಸನಗೌಡ ಮಾಡಗಿ, ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ವಿಜಯಸಿಂಗ್ ಹಜೇರಿ, ಕಲಾವಿದ ಹುಸೇನ ಮಕಾನದಾರ, ಸಾಹಿತಿಗಳಾದ ಅಶೋಕ ಹಂಚಲಿ, ಶ್ರೀಕಾಂತ ಪತ್ತಾರ, ಉದ್ಯಮಿ ರಾಜು ಹಂಚಾಟೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 