ರೇಣುಕಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾಗೌಡ ಸೇರಿ ಏಳು ಮಂದಿಗೆ ಜಾಮೀನು

Renukaswamy murder case: actor Darshan, Pavitra Gowda and seven others granted bail

ಬೆಂಗಳೂರು 13: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್‌, ಪವಿತ್ರಾಗೌಡ ಸೇರಿ ಏಳು ಮಂದಿಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

ಘಟನೆ ನಡೆದ 6 ತಿಂಗಳ ಬಳಿಕ ದರ್ಶನ್ ಗೆ ಜಾಮೀನು ಮಂಜೂರಾಗಿದೆ. ಇತ್ತೀಚೆಗೆ ದರ್ಶನ್ ಗೆ ಬೆನ್ನುನೋವು ಇದ್ದ ಕಾರಣ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿತ್ತು.

ತೀರ್ಪನ್ನು ನ್ಯಾಯಮೂರ್ತಿ ಎಸ್‌. ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಇಂದು ಮಧ್ಯಾಹ್ನ ಪ್ರಕಟಿಸಿತು. 

ಪ್ರಕರಣದ ಆರೋಪಿಗಳಾದ ಆರ್‌. ನಾಗರಾಜು, ಎಂ. ಲಕ್ಷ್ಮಣ್, ಅನು ಕುಮಾರ್‌ ಅಲಿಯಾಸ್‌ ಅನು, ಜಗದೀಶ್‌ ಅಲಿಯಾಸ್‌ ಜಗ್ಗ, ಪ್ರದೋಷ್‌ ರಾವ್‌ ಅವರಿಗೆ ಕೋರ್ಟ್‌ ಜಾಮೀನು ನೀಡಿದೆ.