ರೈತರಿಗೆ ಬೆಳೆ ಪರಿಹಾರ ನೀಡಲು ಸರ್ಕಾರಕ್ಕೆ ವರದಿ ನೀಡಿ: ಕೋನರಡ್ಡಿ
Report to the government to provide crop compensation to farmers: Konaraddy
ಧಾರವಾಡ, 25 ಈಗಾಗಲೇ ಮುಂಗಾರು ಮಳೆಯಿಂದ ನವಲಗುಂದ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಪ್ರದೇಶದ ಶಾಲಾ-ಕಾಲೇಜ ಹಾಗೂ ರಸ್ತೆಗಳು ಕಿತ್ತು ಹೋಗಿದ್ದು ದುರಸ್ತಿ ಮಾಡಲು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಜೊತೆ ಸಭೆ ಮಾಡಿ ಸರ್ಕಾರಕ್ಕೆ ವರದಿ ಮಾಡಲು ನವಲಗುಂದ ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಹೆಚ್.ಕೋನರಡ್ಡಿ ಹೇಳಿದರು.
ಅವರು ಇಂದು ಜಿ.ಪಂ ಕಚೇರಿಯಲ್ಲಿ ನವಲಗುಂದ ವಿಧಾನಸಭಾ ಕ್ಷೇತ್ರದ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕಿನ ಮುಂಗಾರು ಮಳೆಯಿಂದ ಹಾನಿಯಾದ ಹಾಗೂ ಇತರೆ ಕಾಮಗಾರಿಗಳ ಬಗ್ಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯದರ್ಶಿ ಭುವನೇಶ ಪಾಟೀಲ ಅವರೊಂದಿಗೆ ಚರ್ಚಿಸಿ ವಿವಿಧ ಅಭಿವೃದ್ದಿ ಯೋಜನೆಗಳಿಗೆ ಕ್ರಿಯಾ ಯೋಜನೆಗೆ ಮಂಜೂರಾತಿ ಪಡೆದು ಕಾಮಗಾರಿ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ತ್ವರಿತವಾಗಿ ಸರ್ವೆ ಮಾಡಿ ಸರ್ಕಾರಕ್ಕೆ ಹಾನಿಯಾದ ವರದಿಯನ್ನು ತಕ್ಷಣ ಸಲ್ಲಿಸಲು ಕೋನರಡ್ಡಿ ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯದರ್ಶಿ ಭುವನೇಶ ಪಾಟೀಲ, ಉಪ ಕಾರ್ಯದರ್ಶಿ ಬಿ.ಎಸ್. ಮೂಗನೂರಮಠ, ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ, ಪಿಆರ್ಡಿ ಇಇ ಸೊಪ್ಪಿಮಠ, ಆರ್.ಡಬ್ಲೂ.ಎಸ್. ಜಗದೀಶ ಪಾಟೀಲ, ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ಎಸ್. ಕೆಳದಿಮಠ, ತಾ.ಪಂ. ಇಓ ಗಳಾದ ಶ್ರೀಮತಿ ಭಾಗ್ಯಶ್ರೀ ಜಾಗೀರದಾರ, ಪಿ.ಆರ್. ಬಡೇಖಾನ, ರಾಮಚಂದ್ರ ಹೊಸಮನಿ, ಇಂಜಿನಿಯರಗಳಾದ ಎಂ.ಜಿ. ಶಿಂಧೆ, ಬಿ.ಎನ್. ಗೌಡರ, ಎಸ್.ಎಸ್. ಲಂಗೋಟಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 