ವಸತಿ ನಿಲಯದ ಕಂಪ್ಯೂಟರ್, ಎಸಿ ಮಾಯ ಎಂಬ ಸುದ್ದಿ ಸತ್ಯಕ್ಕೆ ದೂರ
Reports that the hostel's computer and AC have gone missing are far from the truth
ಗದಗ 11: ನಗರದ ಸೂರ್ಯನಗರದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ಕಂಪ್ಯೂಟರ್ ಹಾಗೂ ಎಸಿಗಳು ಮಾಯವಾಗಿವೆ ಎಂಬ ಶೀರ್ಷಿಕೆಯಡಿ ಆಗಸ್ಟ್ 6ರಂದು ಮಾಧ್ಯಮಗಳಲ್ಲಿ ಪ್ರಕಟವಾಗಿದ್ದ ಸುದ್ದಿ ಸತ್ಯಕ್ಕೆ ದೂರವಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ವಸತಿ ನಿಲಯದ ಅಗತ್ಯ ದುರಸ್ತಿ ಹಾಗೂ ಉನ್ನತೀಕರಣ ಕಾಮಗಾರಿಗಳನ್ನು ಕೈಗೊಳ್ಳಲು ಸಮಾಜ ಕಲ್ಯಾಣ ಇಲಾಖೆ ಆಯುಕ್ತರಿಂದ ಅನುದಾನ ಬಿಡುಗಡೆ ಮಾಡಲಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 8ರಂದು ಸಹಾಯಕ ನಿರ್ದೇಶಕರೊಂದಿಗೆ ವಸತಿ ನಿಲಯಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಲಾಗಿದೆ.
ಪರೀಶೀಲನೆ ವೇಳೆ ವಸತಿ ನಿಲಯದ ಚಾರ್ಜ್ಪಟ್ಟಿಯಲ್ಲಿದ್ದ ಎಸಿ, ಮಾನಿಟರ್, ಸಿಪಿಯು, ಟೇಬಲ್ ಹಾಗೂ ಬೆಡ್ ಸೇರಿದಂತೆ ವಿವಿಧ ಸಾಮಗ್ರಿಗಳನ್ನು ಸ್ಥಳಾವಕಾಶದ ಕೊರತೆಯಿಂದಾಗಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ, ಗಾಂಧಿನಗರ, ಗದಗಕ್ಕೆ ಸ್ಥಳಾಂತರಿಸಿರುವುದು ಕಂಡುಬಂದಿದೆ.
ಆದ್ದರಿಂದ ವಸತಿ ನಿಲಯದಲ್ಲಿದ್ದ ಕಂಪ್ಯೂಟರ್ ಹಾಗೂ ಎಸಿಗಳು ಮಾಯವಾಗಿವೆ ಎಂಬ ಮಾಧ್ಯಮ ವರದಿಯಲ್ಲಿ ಪ್ರಕಟವಾದ ಅಂಶಗಳು ವಾಸ್ತವಕ್ಕೆ ವಿರುದ್ಧವಾಗಿವೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ 