ಲೋಕದರ್ಶನ ವರದಿ
ಬೆಳಗಾವಿ: 04 : ಗಣರಾಜ್ಯೋತ್ಸವವನ್ನು ಪ್ರತಿವರ್ಷದಂತೆ ಜಿಲ್ಲಾ ಕ್ರೀಡಾಂಗಣದಲ್ಲಿ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ(ಜ.4) ನಡೆದ ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 26ರಂದು ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ನಡೆಯಲಿದೆ. ಸಚಿವರ ಸಂದೇಶದ ಬಳಿಕ ಸ್ವಾತಂತ್ರ್ಯಯೋಧರಿಗೆ ಸನ್ಮಾನ ನಡೆಯಲಿದ್ದು, ನಂತರ ಶಾಲಾ ಮಕ್ಕಳು ದೇಶಭಕ್ತಿಗೀತೆಗೆ ಸಾಮೂಹಿಕ ನೃತ್ಯ ಪ್ರದರ್ಶನ ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ಭಾಗವಹಿಸುವ ಗಣ್ಯರಿಗೆ, ಅತಿಥಿಗಳಿಗೆ, ಸ್ವಾತಂತ್ರ್ಯ ಯೋಧರಿಗೆ ಸೂಕ್ತ ಆಸನ ವ್ಯವಸ್ಥೆ ಕಲ್ಪಿಸಬೇಕು. ಕುಡಿಯುವ ನೀರು ಮತ್ತು ಪಾಕರ್ಿಂಗ್ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ ಸೂಚನೆ ನೀಡಿದರು.
ಕಾರ್ಯಕ್ರಮದಲ್ಲಿ ಜನರು ಹೆಚ್ಚಾಗಿ ಭಾಗವಹಿಸಲು ಅನುಕೂಲವಾಗುವಂತೆ ಜಿಲ್ಲಾ ಕ್ರೀಡಾಂಗಣಕ್ಕೆ ವಿಶೇಷ ಬಸ್ ಸೌಕರ್ಯ ಕಲ್ಪಿಸಬೇಕು ಹಾಗೂ ತುತರ್ು ವೈದ್ಯಕೀಯ ಸೌಲಭ್ಯವನ್ನು ಒದಗಿಸಬೇಕು ಎಂದು ಹೇಳಿದರು.
ದೀಪಾಲಂಕಾರಕ್ಕೆ ಸೂಚನೆ:
ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ನಗರದ ಪ್ರಮುಖ ವೃತ್ತಗಳು ಹಾಗೂ ಸಕರ್ಾರಿ ಕಚೇರಿಗಳಿಗೆ ದೀಪಾಲಂಕಾರ ಮಾಡಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
ನಗರದಲ್ಲಿ ಇರುವ ಡಾ.ಬಿ.ಆರ್.ಅಂಬೇಡ್ಕರ್, ರಾಣಿ ಚೆನ್ನಮ್ಮ, ಬಸವೇಶ್ವರ, ಛತ್ರಪತಿ ಶಿವಾಜಿ ಮತ್ತಿತರ ಮಹನೀಯರ ಪುತ್ಥಳಿ ಹಾಗೂ ಸುತ್ತಮುತ್ತಲಿನ ಸ್ಥಳ ಸ್ವಚ್ಛಗೊಳಿಸಿ ಹೂವು ಮತ್ತು ವಿದ್ಯುತ್ ದೀಪಾಲಂಕಾರ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿದರ್ೇಶನ ನೀಡಿದರು.
ಸಕರ್ಾರಿ ಕಚೇರಿಗಳು, ಚಲನಚಿತ್ರಮಂದಿರಗಳು, ಹಣಕಾಸು ಸಂಸ್ಥೆಗಳು ಮತ್ತು ಸಂಘ-ಸಂಸ್ಥೆಗಳ ಕಾಯರ್ಾಲಯಗಳಿಗೆ ದೀಪಾಲಂಕಾರ ಮಾಡಬೇಕು ಎಂದರು.
ಕವಾಯತು, ಧ್ವಜಾರೋಹಣ, ಸ್ವಾಗತ, ಹಿರಿಯ ಸ್ವಾತಂತ್ರ್ಯಯೋಧರಿಗೆ ಸತ್ಕಾರ, ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಕೆಲಸಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ರಚಿಸಲಾಗಿರುವ ಉಪ ಸಮಿತಿಗಳು ಸಭೆ ನಡೆಸಿ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳುವಂತೆ ಸಭೆಯಲ್ಲಿ ಸೂಚನೆ ನೀಡಲಾಯಿತು.
ಬೆಳಿಗ್ಗೆ ನಡೆಯುವ ಧ್ವಜಾರೋಹಣ ಹಾಗೂ ಸಂಜೆ ರಂಗಮಂದಿರದಲ್ಲಿ ನಡೆಯಲಿರುವ ಕಾರ್ಯಕ್ರಮಗಳಿಗೆ ಎಲ್ಲ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಬೇಕು.
ಜಿಲ್ಲಾ ಕ್ರೀಡಾಂಗಣದಲ್ಲಿ ಸಮಾರಂಭ ನಡೆಯಲಿರುವುದರಿಂದ ಧ್ವಜಾರೋಹಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳ ಸದಸ್ಯರು ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಅವರು ಮನವಿ ಮಾಡಿಕೊಂಡರು.
ಮಾಜಿ ಮೇಯರ್ ಸಿದ್ದನಗೌಡ ಪಾಟೀಲ, ದಲಿತ ಸಂಘಟನೆಯ ಮುಖಂಡ ಮಲ್ಲೇಶಿ ಚೌಗಲೆ, ಶೀಲಾ ದೇಶಪಾಂಡೆ, ಪುಷ್ಪಾ ಹುಬ್ಬಳ್ಳಿ, ಡಿಸಿಪಿ ಸೀಮಾ ಲಾಟ್ಕರ್, ಉಪ ವಿಭಾಗಾಧಿಕಾರಿ ಡಾ.ಕವಿತಾ ಯೋಗಪ್ಪನವರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿದರ್ೇಶಕರಾದ ಎ.ಬಿ.ಪುಂಡಲೀಕ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಪ್ರೀತಮ್ ನಸಲಾಪುರೆ, ತಹಶೀಲ್ದಾರ ಮಂಜುಳಾ ನಾಯಕ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ವಿವಿಧ ಸಂಘಟನೆಯ ಪದಾಧಿಕಾರಿಗಳು ಸಭೆಯಲ್ಲಿ
ಭಾಗವಹಿಸಿದ್ದರು.
ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿದರ್ೇಶಕ ಡಾ.ಪ್ರವೀಣ ಬಾಗೇವಾಡಿ ಸಭೆಯನ್ನು ನಿರ್ವಹಿಸಿದರು. ಸಭೆಯಲ್ಲಿ ಭಾಗವಹಿಸಿದ್ದ ನಗರದ ಗಣ್ಯರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸಲಹೆ-ಸೂಚನೆಗಳನ್ನು ನೀಡಿದರು.