ಗಣರಾಜ್ಯೋತ್ಸವ ಹಾಗೂ ಅಂಬಿಗರ ಚೌಡಯ್ಯ ಜಯಂತಿ ಪೂರ್ವಭಾವಿ ಸಭೆ
Republic Day and Ambigara Chowdayya Jayanti Preparatory Meeting
ಮುಂಡಗೋಡ 10: ತಾಲೂಕಾ ಆಡಳಿತದ ವತಿಯಿಂದ ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮ ಹಾಗೂ ಅಂಬಿಗರ ಚೌಡಯ್ಯ ಜಯಂತಿ ಆಚರಣೆಯ ಕುರಿತು ಪೂರ್ವಭಾವಿ ಸಭೆ ಶುಕ್ರವಾರ ತಾಲೂಕಾ ಆಡಳಿತ ಕಚೇರಿ ಸಭಾಂಗಣದಲ್ಲಿ ನಡೆಯಿತು.
ಸಭೆಗೆ ತಾಲೂಕಾ ದಂಡಾಧಿಕಾರಿ ಶಂಕರ ಗೌಡಿ ಅಧ್ಯಕ್ಷತೆ ವಹಿಸಿದ್ದರು.ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಾ ಕ್ರೀಡಾಂಗಣದಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದ ವೇದಿಕೆಯಲ್ಲಿ ಶಿಷ್ಟಾಚಾರದ ಪ್ರಕಾರ ಗಣ್ಯರಿಗೆ ಮಾತ್ರ ಆಸನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು. ಉಳಿದ ಗಣ್ಯರು, ತಾಲೂಕಾ ಮಟ್ಟದ ಅಧಿಕಾರಿಗಳು ಹಾಗೂ ಪತ್ರಕರ್ತರಿಗೆ ವೇದಿಕೆಯ ಮುಂಭಾಗದಲ್ಲಿ ಸೂಕ್ತ ಆಸನ ವ್ಯವಸ್ಥೆ ಮಾಡಲಾಗುವುದು ಎಂದರು.ತಾಲೂಕಿನ ಎಲ್ಲಾ ಸರ್ಕಾರಿ ಹಾಗೂ ಅರೆ ಸರ್ಕಾರಿ ಕಚೇರಿಗಳಲ್ಲಿ ಗಣರಾಜ್ಯೋತ್ಸವ ಹಾಗೂ ಧ್ವಜಾರೋಹಣ ಕಾರ್ಯಕ್ರಮವನ್ನು ಕಡ್ಡಾಯವಾಗಿ ಹಮ್ಮಿಕೊಳ್ಳಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಇಒ ಟಿ.ವೈ. ದಾಸನಕೊಪ್ಪ, ಶಿರಸ್ತೇದಾರ ಜಿ.ಬಿ. ಭಟ್ಟ, ಬಿಆರಿ್ಸ ರಾಘವೇಂದ್ರ ಗಿರಡ್ಡಿ, ರಾಘವೇಂದ್ರ ಕರೂರ ಸೇರಿದಂತೆ ಲೋಕೋಪಯೋಗಿ, ಚಿಕ್ಕ ನೀರಾವರಿ ಹಾಗೂ ಸಿಡಿಪಿಒ ಇಲಾಖೆಗಳ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು 