ಆಲಮೇಲ ಪಟ್ಟಣ ಪಂಚಾಯಿತಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಮನವಿ
Request for a no-confidence motion against the President of Alamelu Town Panchayat
ಆಲಮೇಲ 18: ಆಲಮೇಲ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಹಾಗೂ ಕಾಂಗ್ರೆಸ್ ಸದಸ್ಯೆ ಸಾಧಿಕಾ ಫ. ಸುಂಬಡ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವಂತೆ ಒತ್ತಾಯಿಸಿ 12 ಸದಸ್ಯರು ಶುಕ್ರವಾರ ಮುಖ್ಯಾಧಿಕಾರಿ ರವಿ ಸಿರಗುಪ್ಪಿ ಅವರಿಗೆ ಮನವಿ ಸಲ್ಲಿಸಿದರು.
19 ಸದಸ್ಯರನ್ನು ಹೊಂದಿರುವ ಪಟ್ಟಣ ಪಂಚಾಯಿತಿಯಲ್ಲಿ ಅಧ್ಯಕ್ಷರಿಗೆ ಅಗತ್ಯವಿರುವ ಬಹುಮತಕ್ಕಿಂತ ಹೆಚ್ಚು ಸದಸ್ಯರು ಬೆಂಬಲ ಹಿಂತೆಗೆದುಕೊಂಡಿದ್ದು, ಅವಿಶ್ವಾಸ ನಿರ್ಣಯದ ಸಭೆಯನ್ನು ಶೀಘ್ರದಲ್ಲಿ ಕರೆಯುವಂತೆ ಸದಸ್ಯರು ಆಗ್ರಹಿಸಿದ್ದಾರೆ.
ಈ ಕುರಿತು ಮಾತನಾಡಿದ ಸದಸ್ಯ ಸಂಜೀವಕುಮಾರ ಯಂಟಮಾನ, ಅಧ್ಯಕ್ಷರು ಏಕಪಕ್ಷೀಯವಾಗಿ ಆಡಳಿತ ನಡೆಸುತ್ತಿದ್ದು, ಸದಸ್ಯರ ಅಭಿಪ್ರಾಯಕ್ಕೆ ಸೂಕ್ತ ಗೌರವ ನೀಡುತ್ತಿಲ್ಲ ಎಂದು ಆರೋಪಿಸಿದರು. ಕೆಪಿಆರ್ ಸಕ್ಕರೆ ಕಾರ್ಖಾನೆಯ ತೆರಿಗೆ ಸಂಗ್ರಹಕ್ಕೆ ಸಂಬಂಧಿಸಿದ ಮಾಹಿತಿ ನೀಡದೆ ಅಕ್ರಮ ನಡೆದಿದೆ ಎಂಬ ಅನುಮಾನವಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಅವಿಶ್ವಾಸ ನಿರ್ಣಯದ ಸಭೆ ನಡೆಯುವವರೆಗೆ ಯಾವುದೇ ಆರ್ಥಿಕ ಅನುಮೋದನೆ ಅಥವಾ ಪ್ರಮುಖ ಆಡಳಿತಾತ್ಮಕ ನಿರ್ಧಾರಗಳನ್ನು ಕೈಗೊಳ್ಳದಂತೆ ಕ್ರಮವಹಿಸಬೇಕು ಎಂದು ಅವರು ಆಗ್ರಹಿಸಿದರು.
ಅವಿಶ್ವಾಸ ನಿರ್ಣಯದ ಮನವಿಗೆ ಬಿಜೆಪಿ ಸದಸ್ಯರಾದ ಉಪಾಧ್ಯಕ್ಷೆ ಸುಮಾ ಕತ್ತಿ, ಸಂಜೀವ ಯಂಟಮಾನ, ಚಂದ್ರಕಾಂತ ಕಾಂಬಳೆ, ಚಂದ್ರಶೇಖರ ಹಳೇಮನಿ, ಜುಬೇದಾಬೇಗಂ ಸುಂಬಡ, ಹಣಮಂತ ಹೂಗಾರ, ರೇಣುಕಾ ಭೋವಿ, ಬಿಸ್ಮಿಲ್ಲಾ ಮಸಳಿ ಹಾಗೂ ಕಾಂಗ್ರೆಸ್ ಸದಸ್ಯರಾದ ಅಶೋಕ ಕೊಳಾರಿ, ವಿಜಯಲಕ್ಷ್ಮೀ ಜರಕರ, ಯಲ್ಲಮ್ಮ ನಾಯ್ಕೋಡಿ ಮತ್ತು ಪಕ್ಷೇತರ ಸದಸ್ಯ ಉಮರ್ ಬಿಳವಾರ ಸಹಿ ಹಾಕಿದ್ದಾರೆ.
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ 