ಬೆಳಗಾವಿ ಜು 3: ಜಿಲ್ಲೆಯಲ್ಲಿ ಲಾಕ್ಡೌನ್ನಿಂದಾಗಿ ಕಾಮರ್ಿಕ ಕುಟುಂಬಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ರಾಜ್ಯ ಮತ್ತು ಕೇಂದ್ರ ಸಕರ್ಾರಗಳು ಸಂಕಷ್ಟದಲ್ಲಿರುವ ಕಾಮರ್ಿಕ ಕುಟುಂಬಗಳಿಗೆ ನೆರವು ನೀಡಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕತರ್ೆ ಮತ್ತು ಸಹಾಯಕಿಯರು, ಎಐಟಿಯುಸಿ ಸೇರಿ 10ಕ್ಕೂ ಹೆಚ್ಚು ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ, ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು.
ಶುಕ್ರವಾರದಂದು ನಗರದ ಜಿಲ್ಲಾಧಿಕಾರಿಗಳು ಕಚೇರಿಗೆ ಆಗಮಿಸಿ ಈ ಕುರಿತು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿ, ದೇಶದಲ್ಲಿ ಕೊರೋನಾ ವ್ಯಾಪಿಸುತ್ತಿದೆ. ಲಾಕ್ ಡೌನ್ನಿಂದ ಬಡವರು, ರೈತರು, ಕಾಮರ್ಿಕರ ಜೀವನ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಕಾಮರ್ಿಕರು ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಸರಕಾರಗಳು ಕಾಮರ್ಿಕರಿಗೆ ಸರಿಯಾದ ಪರಿಹಾರ ನೀಡುತ್ತಿಲ್ಲ. ರಾಜ್ಯ ಮತ್ತು ಕೇಂದ್ರ ಸಕರ್ಾರಗಳು ಸಂಕಷ್ಟದಲ್ಲಿರುವ ಕಾಮರ್ಿಕ ಕುಟುಂಬಗಳಿಗೆ ನೆರವು ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಸಕರ್ಾರಗಳ ವಿರುದ್ಧ ಘೋಷಣೆ ಕೂಗಿದರು. ಬೇಡಿಕೆಗಳನ್ನು ಈಡೇರಿಸುವಂತೆ ಘೋಷಣೆ ಹಾಕಿದರು.
ನಿರುದ್ಯೋಗಿಗಳಿಗೆ ಭತ್ಯೆ ನೀಡಬೇಕು. ಇಂಧನ ಬೆಲೆ ಇಳಿಕೆ ಮಾಡಬೇಕು. ಎಪಿಎಂಸಿ ಕಾಯಿದೆ ವಾಪಸ್ಸು ಪಡೆದುಕೊಳ್ಳುವುದು ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಮನವಿ ಮೂಲಕ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ವಿವಿಧ ಸಂಘಟನೆಗಳ ಮುಖಂಡರಾದ ನಾಗೇಶ ಸಾತೇರಿ, ಮಂದಾ ನೇವಗಿ, ಸಿ.ಎಸ್.ಬಿಧ್ನಾಲ್, ಸಂಧ್ಯಾ ಕುಲಕಣರ್ಿ, ಸರೋಜಾ ಕಾಂಬಳೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.