ಕಲಕೇರಿ ಗ್ರಾ.ಪಂ.ಅವ್ಯವಹಾರ ತನಿಖೆಗೆ ಮನವಿ
Request for inquiry into irregularities at Kalakeri Gram Panchayat
ಲೋಕದರ್ಶನ ವರದಿ
ತಾಳಿಕೋಟೆ 02: ತಾಲ್ಲೂಕಿನ ಕಲಕೇರಿ ಗ್ರಾಮ ಪಂಚಾಯತಿ ಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ತನಿಖೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಿ.ಜಿ.ಸಾಗರ ಬಣ) ಕಲಕೇರಿ ವಲಯದವರು ಹಲವು ಬಾರಿ ಮನವಿ ಮಾಡಿದರೂ ಕ್ರಮ ಜರುಗಿಸಿಲ್ಲವೆಂದು ಆರೋಪಿಸಿ ತಾಳಿಕೋಟೆ ತಾ.ಪಂ.ಕಚೇರಿಗೆ ಬಂದು ಸಮಿತಿಯವರು ತಾ.ಪಂ.ಇಓ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಅನಸೂಯಾ ಚಲವಾದಿಯವರು ಒಂದು ವಾರದೊಳಗೆ ಅಗತ್ಯ ಕ್ರಮದ ಭರವಸೆ ನೀಡಿದರು. ಈ ಸಮಯದಲ್ಲಿ ತಹಶೀಲ್ದಾರ ಡಾ.ವಿನಯಾ ಹೂಗಾರ, ಸಿಪಿಐ ಫಸಿಯುದ್ದಿನ್, ಪಿಎಸೈ ಜ್ಯೋತಿ ಖೋತ, ಕಲಕೇರಿ ವಲಯ ಸಂಚಾಲಕ ಹಣಮಂತ ವಡ್ಡರ, ಪದಾಧಿಕಾರಿಗಳಾದ ಸೋಮಶೇಖರ ಬಡಿಗೆರ, ದೇವೀಂದ್ರ ವಡ್ಡರ, ಸದ್ದಾಂ ತುಂಬಗಿ, ಭಾಷಾಸಾಬ ಮನಗೂಳಿ, ಸಲೀಂ ನಾಯ್ಕೊಡಿ, ಪ್ರಕಾಶ ದೊಡಮನಿ ಇತರರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 