ಕೊಪ್ಪಳ ಜಿಲ್ಲಾ ನ್ಯಾಯಾಲಯದ ನೂತನ ಕಟ್ಟಡಕ್ಕೆ ವಿಶೇಷ ಅನುದಾನಕ್ಕೆ ಮನವಿ
Request for special grant for the new Koppal District Court building
ಕೊಪ್ಪಳ, 26: ನಿರ್ಮಾಣ ಹಂತದಲ್ಲಿರುವ ಕೊಪ್ಪಳ ಜಿಲ್ಲಾ ನ್ಯಾಯಾಲಯದ ನೂತನ ಕಟ್ಟಡ ಕಾಮಗಾರಿಗೆ ಸರ್ಕಾರದಿಂದ ?30 ಕೋಟಿ ವಿಶೇಷ ಅನುದಾನ ನೀಡುವಂತೆ ಆಗ್ರಹಿಸಿ, ಕೊಪ್ಪಳ ಜಿಲ್ಲೆಯ ಹಿರಿಯ ವಕೀಲರ ನಿಯೋಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿತು.
ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರ ನೇತೃತ್ವದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಪ್ರಕಾಶ್ ಬಿ. ಆನಂದಳ್ಳಿ, ಹಿರಿಯ ವಕೀಲರಾದ ಆಸೀಫ್ ಅಲಿ, ಹಿರಿಯ ನ್ಯಾಯವಾದಿ ವಿ.ಎಂ. ಭೂಸನೂರ ಮಠ, ಜಿಲ್ಲಾ ನ್ಯಾಯವಾದಿಗಳಾದ ಶಂಕರ್ ಬಿಸನಹಳ್ಳಿ ಹಾಗೂ ಅಮರೇಶ್ ಕುರಿ ನಿಯೋಗದಲ್ಲಿ ಪಾಲ್ಗೊಂಡಿದ್ದರು.
ಪ್ರಸ್ತುತ ಕೊಪ್ಪಳದಲ್ಲಿ ತಾಲ್ಲೂಕು ನ್ಯಾಯಾಲಯದ ಆವರಣದಲ್ಲಿಯೇ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಾರ್ಯನಿರ್ವಹಿಸುತ್ತಿದೆ. ನ್ಯಾಯಾಲಯದ ಆವರಣವು ಕಿರಿದಾಗಿದ್ದು, ಅಗತ್ಯ ಕೊಠಡಿಗಳು ಹಾಗೂ ಮೂಲಸೌಕರ್ಯಗಳ ಕೊರತೆಯಿಂದಾಗಿ ನ್ಯಾಯಾಲಯದ ಕಲಾಪಗಳನ್ನು ವ್ಯವಸ್ಥಿತವಾಗಿ ನಡೆಸಲು ತೊಂದರೆಯಾಗುತ್ತಿದೆ ಎಂದು ವಕೀಲರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.
ನೂತನ ಜಿಲ್ಲಾ ನ್ಯಾಯಾಲಯದ ಸಂಕೀರ್ಣ ನಿರ್ಮಾಣ ಕಾಮಗಾರಿ ಈಗಾಗಲೇ ನಡೆಯುತ್ತಿದ್ದು, ನ್ಯಾಯಾಲಯದ ಸುಗಮ ಕಾರ್ಯನಿರ್ವಹಣೆಗೆ ಅಗತ್ಯವಿರುವ ಹೆಚ್ಚುವರಿ ಕಟ್ಟಡಗಳು ಹಾಗೂ ಮೂಲಸೌಕರ್ಯಗಳ ನಿರ್ಮಾಣಕ್ಕಾಗಿ ಒಟ್ಟು ?30 ಕೋಟಿ ವಿಶೇಷ ಅನುದಾನ ಒದಗಿಸುವಂತೆ ನಿಯೋಗ ಮನವಿ ಮಾಡಿತು.
ಶೀಘ್ರ ಅನುದಾನ ಬಿಡುಗಡೆಗೆ ಭರವಸೆ
ವಕೀಲರ ಸಂಘದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಂಬಂಧಪಟ್ಟ ಇಲಾಖೆಗಳೊಂದಿಗೆ ಮಾಹಿತಿ ಪಡೆದು, ಶೀಘ್ರವಾಗಿ ಸೂಕ್ತ ಕ್ರಮ ಕೈಗೊಂಡು ಅನುದಾನ ಬಿಡುಗಡೆಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಮುಖ್ಯಮಂತ್ರಿಗಳನ್ನು ಸಂಪರ್ಕಿಸಿ ಮನವಿ ಸಲ್ಲಿಸಲು ಸಹಕರಿಸಿದ ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರಿಗೆ ಕೊಪ್ಪಳ ಜಿಲ್ಲಾ ವಕೀಲರ ಸಂಘದ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು ಎಂದು ನಿಯೋಗದಲ್ಲಿದ್ದ ಹಿರಿಯ ನ್ಯಾಯವಾದಿ ಆಸೀಫ್ ಅಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 