ಮೌಲಾನಾ ಆಜಾದ್ ಮಾದರಿ ಶಾಲೆಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ನಿವೇಶನ ಮಂಜೂರಿಗೆ ಮನವಿ

ಮೌಲಾನಾ ಆಜಾದ್ ಮಾದರಿ ಶಾಲೆಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ನಿವೇಶನ ಮಂಜೂರಿಗೆ ಮನವಿ Request for the allotment of a site for the construction of a dedicated building for the Maulana Aza

ಸವದತ್ತಿ 17 : ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸರಕಾರಿ ಮೌಲಾನಾ ಆಜಾದ್ ಮಾದರಿ ಶಾಲೆಗೆ ಸ್ವಂತ ಕಟ್ಟಡ ನಿರ್ಮಿಸಲು ಅಗತ್ಯವಿರುವ 2 ಎಕರೆ ಜಾಗವನ್ನು ಮಂಜೂರು ಮಾಡುವಂತೆ ಶಾಲೆಯ ಆಡಳಿತ ಮಂಡಳಿಯು ಶಾಸಕ ವಿಶ್ವಾಸ್ ವೈದ್ಯ ಅವರಿಗೆ ಮನವಿ ಸಲ್ಲಿಸಿದೆ.ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶಾಸಕ ವಿಶ್ವಾಸ್ ವೈದ್ಯ ಹಾಗೂ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಅವರ ನೇತೃತ್ವದಲ್ಲಿ ನಡೆದ ಪ್ರಗತಿ ಪರೀಶೀಲನಾ ಸಭೆಯ ಸಂದರ್ಭದಲ್ಲಿ ಈ ಮನವಿ ಸಲ್ಲಿಸಲಾಯಿತು.ಮನವಿ ಸಲ್ಲಿಸಿದ ಶಾಲೆಯ ಮುಖ್ಯ ಶಿಕ್ಷಕರು ಮತ್ತು ಎಸ್ಡಿಎಂಸಿ ಪದಾಧಿಕಾರಿಗಳು ಮಾತನಾಡಿ, ಪ್ರಸ್ತುತ ಶಾಲೆ ತಾಲೂಕಾ ಕ್ರೀಡಾಂಗಣದಲ್ಲಿರುವ ಸಾರ್ವಜನಿಕ ಶಾಲಾ ಶಿಕ್ಷಣ ಇಲಾಖೆಯ ಹಳೆಯ 4-5 ಕೊಠಡಿಗಳಲ್ಲಿ, ಸರಕಾರಿ ಜಿ.ಜಿ. ಚೋಪ್ರಾ ಶಾಲೆಯ ಆವರಣದಲ್ಲಿ ನಡೆಯುತ್ತಿದೆ.

2026-27ನೇ ಸಾಲಿನಲ್ಲಿ 260ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಸ್ವಂತ ಕಟ್ಟಡವಿಲ್ಲದೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಶಾಲೆಯ ಸುಗಮ ಶೈಕ್ಷಣಿಕ ಚಟುವಟಿಕೆಗಳಿಗೆ ಸ್ವಂತ ಕಟ್ಟಡ ಅತ್ಯಗತ್ಯ, ಎಂದು ವಿವರಿಸಿದರು.ಮನವಿಯನ್ನು ಸ್ವೀಕರಿಸಿದ ಶಾಸಕ ವಿಶ್ವಾಸ್ ವೈದ್ಯ ಅವರು ಸಕಾರಾತ್ಮಕವಾಗಿ ಸ್ಪಂದಿಸಿದರು. ಶಾಲೆಯ ಅಭಿವೃದ್ಧಿಗೆ ಅಗತ್ಯವಿರುವ ಜಾಗ ಮತ್ತು ಮೂಲಭೂತ ಸೌಕರ್ಯಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ನಿವೇಶನ ಮಂಜೂರಾತಿಗೆ ಅಗತ್ಯವಿರುವ ಕಾನೂನುಬದ್ಧ ಕ್ರಮಗಳನ್ನು ಶೀಘ್ರವೇ ಕೈಗೊಳ್ಳುವುದಾಗಿ ಭರವಸೆ ನೀಡಿದರು.ಈ ಸಂದರ್ಭದಲ್ಲಿ ತಹಶೀಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ, ಯರಗಟ್ಟಿ ತಹಶೀಲ್ದಾರ ಗುಂಡಪ್ಪಗೋಳ್ಳ, ತಾಪಂ ಇಒ ಆನಂದ ಬಡಕುಂದ್ರಿ, ನಗರಸಭೆ ಪೌರಾಯುಕ್ತ ಸಂಗನಬಸಯ್ಯ ಗದಗಿನಮಠ, ಡಿವೈಎಸ್ಪಿ ಚಿದಂಬರ ಮಡಿವಾಳರ, ಆಸೀಫ್ ಬಾಗೋಜಿಕೊಪ್ಪ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಉಪಸ್ಥಿತರಿದ್ದರು.