ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಆರಂಭಕ್ಕೆ ಐಜಿಪಿಗೆ ಮನವಿ
Request made to IGP for the early opening of Muddebihal Rural Police Station.
ಮುದ್ದೇಬಿಹಾಳ 15: ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆಯನ್ನು ಶೀಘ್ರ ಕಾರ್ಯಾರಂಭಗೊಳಿಸುವಂತೆ ಮುದ್ದೇಬಿಹಾಳ ಜನಸೇವಾ ಸಂಸ್ಥೆಯ ಪದಾಧಿಕಾರಿಗಳು ಬೆಳಗಾವಿ ವಲಯದ ಐಜಿಪಿ ಸಂದೀಪ್ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.
ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದ ವೇಳೆ ಐಜಿಪಿ ಅವರನ್ನು ಭೇಟಿಯಾದ ಸಂಸ್ಥೆಯ ಪದಾಧಿಕಾರಿಗಳು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಮಂಡನೆಯಾದ ಬಜೆಟ್ನಲ್ಲಿ ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆಗೆ ಅನುಮೋದನೆ ದೊರೆತಿದ್ದರೂ ಇದುವರೆಗೆ ಕಾರ್ಯಾರಂಭವಾಗಿಲ್ಲ ಎಂದು ಗಮನ ಸೆಳೆದರು.
ಸಂಸ್ಥೆಯ ಅಧ್ಯಕ್ಷ ಶಂಕರ ಇ. ಹೆಬ್ಬಾಳ ಮಾತನಾಡಿ, ಠಾಣೆ ಆರಂಭಕ್ಕೆ ಸ್ಥಳೀಯ ಶಾಸಕರೂ ಅಗತ್ಯ ಸ್ಥಳಾವಕಾಶ ಕುರಿತು ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದರು. ಆದರೂ ಠಾಣೆ ಇನ್ನೂ ಆರಂಭವಾಗದಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಐಜಿಪಿ ಸಂದೀಪ್ ಪಾಟೀಲ, ಈ ವಿಷಯ ಸರ್ಕಾರದ ಮಟ್ಟದಲ್ಲಿದ್ದು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಇದೇ ವೇಳೆ ಮುದ್ದೇಬಿಹಾಳದ ಬಸವೇಶ್ವರ ವೃತ್ತದಲ್ಲಿ ಪ್ರತಿದಿನ ಬೆಳಗ್ಗೆ 8ರಿಂದ 11 ಗಂಟೆಯವರೆಗೆ ತೀವ್ರ ಸಂಚಾರ ದಟ್ಟಣೆ ಉಂಟಾಗುತ್ತಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ಸಂಚರಿಸಲು ತೊಂದರೆಯಾಗುತ್ತಿದೆ ಎಂದು ಜನಸೇವಾ ಸಂಸ್ಥೆ ಮನವಿ ಮಾಡಿತು. ಈ ಕುರಿತು ಪ್ರತಿಕ್ರಿಯಿಸಿದ ಐಜಿಪಿ, ಸಮಸ್ಯೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಗಮನಕ್ಕೆ ತಂದು, ಸ್ಥಳೀಯ ಪೊಲೀಸ್ ಅಧಿಕಾರಿಗಳ ಮೂಲಕ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಡಿವೈಎಸ್ಪಿ ಚಂದ್ರಕಾಂತ ನಂದರಡ್ಡಿ, ಸಿಪಿಐ ಮೊಹಮ್ಮದ್ ಫಸಿವುದ್ದೀನ್, ಜನಸೇವಾ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಜಿ.ವೈ. ದಫೇದಾರ, ಖಜಾಂಚಿ ಹನುಮಂತ ನಲವಡೆ, ಪತ್ರಕರ್ತ ಅನೀಲಕುಮಾರ ತೇಲಂಗಿ, ಶ್ರೀಶೈಲ ಮೇಟಿ, ಅಪ್ಪು ನಾಡಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು 