ಹಾವೇರಿ: ಜಲಾಮೃತ ರಕ್ಷಣೆಗೆ ಜಿಲ್ಲೆಯಲ್ಲಿ ಕೆರೆ ಸಂಜೀವಿನಿಯಡಿ ಕೆರೆ ಹೂಳೆತ್ತುವುದು, ಜಲಮರುಪೂರಣ ಚಟುವಟಿಕೆಗೆ ಹೆಚ್ಚಿನ ಅನುದಾನ ಒದಗಿಸಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಸ್.ಕೆ.ಕರಿಯಣ್ಣನವರ ಹೇಳಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಆಯೋಜಿಸಲಾದ ಸ್ವಚ್ಛಮೇವ ಜಯತೇ ಮತ್ತು ಜಲಾಮೃತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲಾ ಪಂಚಾಯತಿಯಡಿ ಬರುವ ಕೆರೆಗಳ ಹೂಳೆತ್ತುವ ಕಾರ್ಯಕ್ಕೆ ಹೆಚ್ಚಿನ ಅನುದಾನ ಅಗತ್ಯವಿದೆ. ಹೂಳೆತ್ತುವ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಲು ಜೆಸಿಬಿ ಯಂತ್ರಗಳನ್ನು ಬಳಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಗೆ ವಿಶೇಷ ಅನುಮತಿ ನೀಡುವಂತೆ ಮುಖ್ಯಮಂತ್ರಿಗಳನ್ನು ಭೇಟಿಮಾಡಿ ಮನವಿ ಮಾಡಿಕೊಳ್ಳುವುದಾಗಿ ಹೇಳಿದರು.
ಪ್ರತಿ ಗ್ರಾಮ ಗ್ರಾಮಗಳಲ್ಲೂ ಸ್ವಚ್ಛತೆ, ವೈಜ್ಞಾನಿಕ ಕಸ ವಿಲೇವಾರಿ ವ್ಯವಸ್ಥೆಯ ಜೊತೆಗೆ ನೀರು ಪೋಲಾಗುವುದನ್ನು ತಡೆದು ಜಲ ಮೂಲಗಳ ರಕ್ಷಣೆಗೆ ಜಾಗೃತಿ ಅವಶ್ಯವಾಗಿದೆ. ಈ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲೇ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು ಗ್ರಾಮ ಗ್ರಾಮಗಳಲ್ಲಿ ಪೊರಕೆ ಹಿಡಿದು ಬೀದಿ ಬೀದಿಯಲ್ಲಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದುರ ಮೂಲಕ ಹಳ್ಳಿಯ ಜನರಿಗೆ ಸ್ವಚ್ಛತೆಯ ಅರಿವು ಮೂಡಿಸಿ ಸ್ಫೂತರ್ಿ ತುಂಬಬೇಕು ಎಂದು ಹೇಳಿದರು.
ಗ್ರಾಮೀಣ ಭಾಗದಲ್ಲಿ ಸ್ವಚ್ಛತೆಯ ಅರಿವಿನ ಕೊರತೆ ಇದೆ. ಗ್ರಾಮೀಣ ಸೌಂದರ್ಯಕ್ಕೆ ಗ್ರಾಮಗಳ ತಿಪ್ಪೆಗಳೇ ಮುಳುವಾಗಿವೆ. ಸರಾಗವಾಗಿ ನೀರು ಹರಿಯುವ ರಸ್ತೆ ಬದಿಗಳ ಕಾಲುವೆಗಳಲ್ಲಿ ಕಸಹಾಕಿ ತಿಪ್ಪೆಮಾಡುವ ಪರಿಪಾಠ ಹೆಚ್ಚಾಗಿದೆ. ಇದರಿಂದ ಕಾಲುವೆಯಲ್ಲಿರುವ ತಿಪ್ಪೆಗಳ ಮೂಲಕ ನೀರು ಹರಿದು ಕೆರೆಗಳನ್ನು ಸೇರಿ ಜನ-ಜಾನುವಾರುಗಳು ಕುಡಿಯುವ ನೀರನ್ನು ಕಲುಷಿತಗೊಳಿಸುತ್ತಿವೆ. ಗ್ರಾಮದ ಅನಾರೋಗ್ಯಕ್ಕೆ ಕಾರಣವಾಗುತ್ತಿದೆ. ಇದನ್ನು ತಡೆಯಲು ಗ್ರಾಮಗಳ ರಸ್ತೆ ಬದಿಯ ತಿಪ್ಪೆಗುಂಡಿಗಳನ್ನು ಸ್ಥಳಾಂತರಿಸುವ ಕುರಿತಂತೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಹೇಳಿದರು.
ಪ್ರತಿ ಗ್ರಾಮಗಳಲ್ಲೂ ಚೆಕ್ ಡ್ಯಾಂಗಳ ನಿಮರ್ಾಣ, ಕೆರೆಗಳ ಹೂಳೆತ್ತುವ ಕಾರ್ಯಕ್ರಮಗಳು ಆಂದೋಲನದ ರೀತಿಯಲ್ಲಿ ನಡೆಯಬೇಕಾಗಿದೆ. ಜಲ ರಕ್ಷಣೆ ಹಾಗೂ ಜಲಮೂಲಗಳ ಪುನಶ್ಚೇತನಕ್ಕೆ ನಿರುತ್ಸಾಹತೋರುವ ಅಧಿಕಾರಿಗಳಿಗೆ ಚಾಟಿ ಬೀಸಬೇಕು. ಉತ್ಸಾಹ ತೋರುವ ಅಧಿಕಾರಿಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿರುಪಾಕ್ಷಪ್ಪ ಬಳ್ಳಾರಿ ಅವರು ಮಾತನಾಡಿ, ಸಕರ್ಾರ ಜಲ ರಕ್ಷಣೆ ಹಾಗೂ ಪರಿಸರ ರಕ್ಷಣೆಗೆ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸಿದೆ, ಅನುದಾನ ಸಹ ನೀಡಿದೆ. ಆದರೆ ಅನುಷ್ಠಾನದಲ್ಲಿ ಪ್ರಾಮಾಣಿಕ ಪ್ರಯತ್ನಗಳು ನಡೆಯುತ್ತಿಲ್ಲ. ಪರಿಸರ ನಾಶದಿಂದ ದಿನದಿಂದ ದಿನಕ್ಕೆ ಅಮೃತಕ್ಕೆ ಸಮಾನವದ ನೀರಿನ ಅಭಾವ ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ ಜಲ ಮೂಲಗಳ ಪುನಶ್ಚೇತನ ಕೆಲಸಗಳು ಸಕಾಲಕ್ಕೆ ನಡೆಸಬೇಕಾಗಿದೆ. ಜನವರಿಯಿಂದ ಜೂನ್ವರೆಗೆ ಕೆರೆ-ಕಟ್ಟೆಗಳ ಪುನಶ್ಚೇತನ ಕೆಲಸಗಳನ್ನು ನಡೆಸಿದರೆ ಜೂನ್ನಿಂದ ಆರಂಭವಾಗುವ ಮಳೆಯ ನೀರನ್ನು ಸಂಗ್ರಹಿಸಬಹುದು. ಜಲ ಮೂಲಗಳ ಬಗ್ಗೆ ನಿರ್ಲಕ್ಷ್ಯ ಮುಂದುವರೆದರೆ ನೀರಾಗಾಗಿ ಯುದ್ಧ ನಡೆದರೂ ಆಶ್ಚರ್ಯವಿಲ್ಲವೆಂದು ಎಚ್ಚರಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಜಿ.ಪಂ.ಮುಖ್ಯ ಕಾರ್ಯನಿವರ್ಾಹಣಾಧಿಕಾರಿ ಕೆ.ಲೀಲಾವತಿ ಅವರು ಮಾತನಾಡಿ, ಗ್ರಾಮೀಣ ನೈರ್ಮಲ್ಯ ಹಾಗೂ ಜಲ ರಕ್ಷಣೆಗಾಗಿ ಜಾಗೃತಿ ಮೂಡಿಸಲು ಜೂನ್ 11 ರಿಂದ ಜುಲೈ 10 ಒಂದು ತಿಂಗಳವರೆಗೆ ಜಿಲ್ಲೆಯಾದ್ಯಂತ ಸ್ವಚ್ಛಮೇವ ಜಯತೆ ಹಾಗೂ ಜಲಾಮೃತ ಕಾರ್ಯಕ್ರಮದಡಿ ಜಾಗೃತಿ ಆಂದೋಲವನ್ನು ಹಮ್ಮಿಕೊಳ್ಳಲಾಗಿದೆ. ಜಲಸಾಕ್ಷರತೆ, ಜಲಸಂರಕ್ಷಣೆ, ಜಲಪ್ರಜ್ಞೆ ಹಾಗೂ ಹಸರೀಕರಣದ ಮಹತ್ವ ಹಾಗೂ ಗ್ರಾಮದ ಸ್ವಚ್ಛತೆ, ಕಸಮುಕ್ತಗ್ರಾಮ, ಶೌಚಾಲಯ ಬಳಕೆ, ಕೈ ತೊಳೆಯುವ ಅಭ್ಯಾಸ ರೂಢಿಮಾಡಿಕೊಳ್ಳುವುದು ಹಾಗೂ ಪ್ರತಿ ಶೌಚಾಲಯಕ್ಕೆ ಎರಡು ಗುಂಡಿಗಳ ನಿಮರ್ಾಣ ಅವಶ್ಯಕತೆ ಕುರಿತಂತೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಜಿ.ಪಂ.ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಹಾಗೂ ಜಿ.ಪಂ.ಸದಸ್ಯ ರಮೇಶ ದುಗ್ಗತ್ತಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಘನತ್ಯಾಜ್ಯ ನಿರ್ವಹಣೆಗೆ ಆಯ್ಕೆಯಾದ 35 ಗ್ರಾಮ ಪಂಚಾಯತಿಗಳನ್ನು ಘೋಷಣೆ ಮಾಡಲಾಯಿತು. ಸ್ವಚ್ಛತೆ ಕುರಿತಂತೆ ಪ್ರತಿಜ್ಞಾವಿಧಿ ಬೋದಿಸಲಾಯಿತು. ಜಿಲ್ಲಾ ಪಂಚಾಯತ್ ಆವರಣದಲ್ಲಿ ಜಲಾಮೃತ ಯೋಜನೆಯಡಿ ವಿವಿಧ ಗಿಡ ನೆಡುವ ಕಾರ್ಯಕ್ರಮ ನಡೆಯಿತು ಹಾಗೂ ಸ್ವಚ್ಛತಾ ರಥಕ್ಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಗಣ್ಯರು ಚಾಲನೆ ನೀಡಿದರು.
ಸಮಾರಂಭದಲ್ಲಿ ಜಿ.ಪಂ.ಉಪಾಧ್ಯಕ್ಷೆ ದೀಪಾ ಅತ್ತಿಗೇರಿ, ಜಿ.ಪಂ.ಸದಸ್ಯರು ಹಾಗೂ ಜಿ.ಪಂ.ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾದ ಮಾರುತಿ ರಾಠೋಡ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ನೀಲವ್ವ ನಾಗಪ್ಪ ಚವ್ಹಾಣ, ತಾ.ಪಂ.ಅಧ್ಯಕ್ಷ ಕರಿಯಪ್ಪ ಉಂಡಿ, ಜಿ.ಪಂ.ಸದಸ್ಯರಾದ ವಿರುಪಾಕ್ಷಪ್ಪ ಕಡ್ಲಿ, ಪಿಕಾಡರ್್ ಬ್ಯಾಂಕ್ ಸದಸ್ಯ ಸುರೇಶ ಯತ್ನಳ್ಳಿ, ಜಿ.ಪಂ.ಉಪಕಾರ್ಯದಶರ್ಿ ಜಿ.ಗೋವಿಂದಸ್ವಾಮಿ ಉಪಸ್ಥಿತರಿದ್ದರು.
ಜಿಲ್ಲಾ ಪಂಚಾಯತ್ ಯೋಜನಾ ನಿದರ್ೆಶಕ ಪರಮೇಶ ಹುಬ್ಬಳ್ಳಿ ಸ್ವಾಗತಿಸಿದರು. ಶ್ರೀಮತಿ ಭುವನೇಶ್ವರಿ ಕಾರ್ಯಕ್ರಮ ನಿರೂಪಿಸಿದರು. ಕಲಾವಿದ ಕೆ.ಆರ್.ಹಿರೇಮಠ ಪರಿಸರ ಗೀತೆಗಳ ಗಾಯನ ಕಾರ್ಯಕ್ರಮ ನಡೆಸಿಕೊಟ್ಟರು.ಮೌನಾಚರಣೆ: ಆರಂಭದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ, ನಟ ಗಿರೀಶ ಕಾನರ್ಾಡ್ ಅವರ ನಿಧನಕ್ಕೆ ಒಂದು ನಿಮಿಷ ಮೌನಾಚರಿಸಿ ನಮನ ಸಲ್ಲಿಸಲಾಯಿತು