ಟರ್ಫ್‌ ಬದಲು ಗ್ರಾಸ್ ಫುಟ್‌ಬಾಲ್ ಮೈದಾನ ನಿರ್ಮಿಸಲು ಮನವಿ

    ಟರ್ಫ್‌ ಬದಲು ಗ್ರಾಸ್ ಫುಟ್‌ಬಾಲ್ ಮೈದಾನ ನಿರ್ಮಿಸಲು ಮನವಿ  Request to build a natural grass football field instead of a turf one

ಲೋಕದರ್ಶನ ವರದಿ 


ಗದಗ  02: ಗದಗ-ಬೆಟಗೇರಿ ಅವಳಿ ನಗರದ ಏಕೈಕ ಜಿಲ್ಲಾ ಕ್ರೀಡಾಂಗಣದಲ್ಲಿ ನಿರ್ಮಿಸಲಾಗುತ್ತಿರುವ ಸಿಂಥೆಟಿಕ್ ಟರ್ಫ್‌ ಫುಟ್‌ಬಾಲ್ ಮೈದಾನದ ಕಾಮಗಾರಿ ತಕ್ಷಣ ಸ್ಥಗಿತಗೊಳಿಸಿ, ಅದರ ಬದಲಿಗೆ ಗ್ರಾಸ್ ಫುಟ್‌ಬಾಲ್ ಮೈದಾನ ನಿರ್ಮಿಸುವಂತೆ ಶಿವರಾಮಕೃಷ್ಣ ಸೇವಾ ಟ್ರಸ್ಟ್‌ ನೇತೃತ್ವದಲ್ಲಿ ಕ್ರೀಡಾಪಟುಗಳು ಹಾಗೂ ವಿವಿಧ ಕ್ರೀಡಾ ಸಂಘಟನೆಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.  

ಜಿಲ್ಲಾ ಕ್ರೀಡಾಂಗಣದಲ್ಲಿ ದಸರಾ ಕ್ರೀಡಾಕೂಟ, ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಸೇರಿದಂತೆ ಶಾಲಾ-ಕಾಲೇಜುಗಳ ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡಾಕೂಟಗಳು ನಡೆಯುತ್ತವೆ. ಅಲ್ಲದೆ ಗಣರಾಜ್ಯೋತ್ಸವ, ಸ್ವಾತಂತ್ರ್ಯೋತ್ಸವ ಹಾಗೂ ಕನ್ನಡ ರಾಜ್ಯೋತ್ಸವದಂತಹ ಕಾರ್ಯಕ್ರಮಗಳಿಗೂ ಕ್ರೀಡಾಂಗಣ ಬಳಕೆಯಾಗುತ್ತಿದೆ.  

ಸಿಂಥೆಟಿಕ್ ಟರ್ಫ್‌ ನಿರ್ಮಾಣವಾದರೆ ಶಾಟ್‌ಪುಟ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, ಹ್ಯಾಮರ್ ಥ್ರೋ ಸೇರಿದಂತೆ ವಿವಿಧ ಕ್ರೀಡೆಗಳಿಗೆ ತೊಂದರೆಯಾಗಲಿದೆ ಎಂದು ಕ್ರೀಡಾಪಟುಗಳು ಆತಂಕ ವ್ಯಕ್ತಪಡಿಸಿದರು. ಟರ್ಫ್‌ ಬದಲಿಗೆ ಹುಲ್ಲಿನ ಮೈದಾನ ನಿರ್ಮಿಸಿದರೆ ಫುಟ್‌ಬಾಲ್ ಜೊತೆಗೆ ಇತರೆ ಕ್ರೀಡೆಗಳಿಗೂ ಅವಕಾಶ ಕಲ್ಪಿಸಬಹುದು ಎಂದು ಅವರು ಮನವಿ ಮಾಡಿದರು.